ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದಂತೆ ಆಗಿದೆ, ಇದರಿಂದ ಬಿಜೆಪಿ ಕುಗ್ಗುವುದಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಎಂದವರು ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ. ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಕ್ರಮದ ಹಿಂದೆ ಕಾಣುವ ‘ಕೈ’ ಕೆಲಸಮಾಡಿದೆ ಎಂದವರು ಹೇಳಿದ್ದಾರೆ.

Related posts