ಸೋಲಿನ ಪ್ರತಿಧ್ವನಿ; ರಾಜ್ಯಾಧ್ಯಕ್ಷ ನಳಿನ್ ರಾಜೀನಾಮೆ ಸುದ್ದಿಯ ಸಂಚಲನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಲು ಮುಂದಾದಂತಿದೆ. ಬಳ್ಳಾರಿ ಪ್ರವಾಸದಲ್ಲಿರುವ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ತಮ್ಮ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.

ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿಯನ್ನು ತಾನು ಹೊತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ  ಜೊತೆ, ಮೌಖಿಕವಾಗಿಯೂ ತಿಳಿಸಿದ್ದೇನೆ ಎಂದರು..

ಇದೇ ವೇಳೆ, ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪ್ರಮುಖರು ಜವಾಬ್ಧಾರಿಯಿಂದ ದೂರ ಉಳಿಯುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹಾಗಾಗಿ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೂ ಆ ಸ್ಥಾನ ಸಿಗುವುದು ಅಸಂಭವ ಎಂದು ಹೇಳಲಾಗುತ್ತಿದೆ.

Related posts