ಬಿಜೆಪಿ ಟಿಕೆಟ್ ಡೀಲ್ ಆರೋಪ; ಕೇಂದ್ರ ಮಂತ್ರಿ ಜೋಷಿ ಸಹೋದರನ ವಿರುದ್ದ ಸೂಕ್ತ ತನಿಖೆ; ರಾಜ್ಯ ಸರ್ಕಾರದ ಭರವಸೆ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುಟುಂಬ ಸದಸ್ಯರ ವಿರುದ್ದ ಕೇಳಿಬಂದಿರುವ ಬಿಜೆಪಿ ಚುನಾವಣಾ ಟಿಕೆಟ್ ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧದ‌ ಪ್ರಕರಣದ‌ ಕುರಿತು ಪ್ರತಿಕ್ರಿಯಿಸಿರುವ ಪರಮೇಶ್ವರ್, ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಷಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ವಿವರಿಸಿದರು.

ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Related posts