ಬಿಜೆಪಿ ಕಾರ್ಯಕರ್ತನ ಸಾವಿನ ಪ್ರತಿಧ್ವನಿ; ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಕಲಬುರಗಿಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ಸಮೀಪದ ಶಿರೋಳ್ಳಿಯ  ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಎಂಬವರು ಸಾವಿಗೆ ಮುನ್ನ ಮಾಡಿದ್ದಾರೆನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಕಿರುಕುಳವೇ ಸಾವಿಗೆ ಕಾರಣ ಎಂದು ಹೇಳಿಕೊಂಡಿದ್ದಾರೆ. ಈ ಆಡಿಯೊವನ್ನು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರ ರಾಜೀನಾಮೆಗೆ ಆಗ್ರಹಿಸಿದೆ.

ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಈ ಘಟನೆಯನ್ನು ಖಂಡಿಸಿದ್ದು ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ತಮ್ಮ ಪ್ರತಿಕ್ರಿಯೆಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಬಿಜೆಪಿ ಕಾರ್ಯಕರ್ತರಾದ ಶಿವಕುಮಾರ್ ಅವರು ಸಾವಿಗೀಡಾಗಿರುವುದು ಅತ್ಯಂತ ದುಃಖಕರ ಸಂಗತಿ. ಸಾವಿಗೆ ಮುನ್ನ ಆಡಿಯೋದಲ್ಲಿ, ಕಾಂಗ್ರೆಸ್ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಕಿರುಕುಳವೇ ಕಾರಣ ಎಂದಿದ್ದು, ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು ಸಮಗ್ರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

Related posts