ಮಂಡ್ಯ: ರಾಜಕೀಯ ವಿಚಾರಗಳಲ್ಲಿ ಮಠಾಧೀಶರು ಹಸ್ತಕ್ಷೇಪ ಮಾಡುತ್ತಾರೆ ಎಂಬ ತಮ್ಮ ಹೇಳಿಕೆ ಬಿರುಸಿನ ಚರ್ಚೆ ಹುಟ್ಟಿಸಿದ ಹಿನ್ನೆಲೆಯಲ್ಲಿ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿಯವರ ಮುಂದೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು. ಮಂಡ್ಯದ ವಿ.ಸಿ. ಫಾರ್ಮ್ನಲ್ಲಿ ನಡೆದ ಕೃಷಿ ಮೇಳದಲ್ಲಿ, ಸ್ವಾಮೀಜಿಯವರ ಸಮ್ಮುಖದಲ್ಲಿ ಕುಮಾರಸ್ವಾಮಿ ಕೈಮುಗಿದು ಕ್ಷಮೆಯಾಚಿದರು. ಸ್ವಾಮೀಜಿ ಮುಗುಳ್ನಗುತ್ತ ಪ್ರತಿಕ್ರಿಯಿಸಿದರೆ, ಜನಸ್ತೋಮವು ಚಪ್ಪಾಳೆ ಹೊಡೆದು ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿತು. “ನನ್ನ ಹಿಂದಿನ ಮಾತುಗಳಿಂದ ಪೂಜ್ಯ ಸ್ವಾಮೀಜಿಗೆ ಯಾವುದೇ ಅಗೌರವ ಉಂಟಾಗಿದ್ದರೆ, ನಾನು ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ನಮ್ಮ ನಿಷ್ಠೆ ನಮ್ಮೊಳಗೇ ಇದೆ; ಅದನ್ನು ತೋರಿಸಿಕೊಳ್ಳುವ ಅಗತ್ಯವಿಲ್ಲ. ಸ್ವಾಮೀಜಿಯ ಬಗ್ಗೆ ನಾನು ಯಾವ ತಪ್ಪನ್ನಾದರೂ ಮಾಡಿಕೊಂಡಿದ್ದರೆ, ಸರ್ವಜನಿಕವಾಗಿ ಕ್ಷಮಿಸಿ,” ಎಂದು ಕುಮಾರಸ್ವಾಮಿ ಹೇಳಿದರು. ಹೊಸ ವಿವಾದಕ್ಕೆ ಸ್ಪಷ್ಟನೆ ನೀಡಿದ ಅವರು, “ಸ್ವಾಮೀಜಿಗಳನ್ನು ಈ ರೀತಿಯ…
Blog
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ ವಿಚಾರ ಚರ್ಚಿಸಿ; ವಿಜಯೇಂದ್ರ
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು…
ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ
ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚುಗಳಿಂದ ದಾಳಿ ನಡೆಸಿ ಗಣೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಣೇಶ್ ಗೌಡ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯ ಮುಖವಾಗಿದ್ದರು. ಘಟನೆಯ ವೇಳೆ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ಕಲ್ಮರಡಿ ಮಠದ ಸಮೀಪ ಬೈಕ್ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.…
ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್ ಬಾಬು
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು ಅವರು ತಮ್ಮ ಕ್ಷೇತ್ರದ ರೈಲು ಸಂಬಂಧಿತ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ಕೋಲಾರದ ಕೆ.ಜಿ.ಎಫ್, ಬಂಗಾರಪೇಟೆ ಮತ್ತು ಮಾಲೂರು ತಾಲ್ಲೂಕುಗಳಿಂದ ಪ್ರತಿದಿನ 25 ರಿಂದ 30 ಸಾವಿರ ಜನರು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಪ್ರಯಾಣಿಸುತ್ತಿರುವುದನ್ನು ಉಲ್ಲೇಖಿಸಿದ ಅವರು, ಈ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಸ್ತುತ 12 ಬೋಗಿಗಳಿರುವ ರೈಲುಗಳ ಸಂಖ್ಯೆಯನ್ನು 18ಕ್ಕೆ ಹೆಚ್ಚಿಸಲು ರೈಲ್ವೆ ಸಚಿವಾಲಯ ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಕೋಲಾರ–ವೈಟ್ಫೀಲ್ಡ್ ನಡುವೆ ನರಸಾಪುರ ಮತ್ತು ಹೊಸಕೋಟೆ ಮೂಲಕ 52.9 ಕಿಮೀ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ನಡೆದಿರುವ ಸಮೀಕ್ಷೆ ಪೂರ್ಣಗೊಂಡಿರುವುದನ್ನೂ ಅವರು ಗಮನಕ್ಕೆ ತಂದರು. ಸಾರ್ವಜನಿಕರಿಗೆ ಬಹಳ ಉಪಕಾರಿಯಾಗುವ ಈ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ ನೀಡಬೇಕೆಂದು ಸಂಸದರು ಕೇಂದ್ರ ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು. <blockquote class=”twitter-tweet” data-media-max-width=”560″><p lang=”kn” dir=”ltr”>ಸಂಸತ್ತಿನ ಚಳಿಗಾಲದ…
ಮಾತು ಮರೆತ ಸರ್ಕಾರದ ವಿರುದ್ಧ ಆಶಾ ಸಮರ; ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು “ಬೃಹತ್ ಬೆಳಗಾವಿ ಚಲೋ” ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ…
2025-26ರಲ್ಲಿ ರಾಜ್ಯದಲ್ಲಿ 1,20,000 ಕೋ.ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್ಟಿ ರೂ.53,522 ಕೋಟಿ, ಕೆಎಸ್ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ. ಆರಂಭದ ಐದು ತಿಂಗಳಲ್ಲಿ ಎಪ್ರಿಲ್ನಿಂದ ಆಗಸ್ಟ್ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ…
ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ
ಬೆಂಗಳೂರು: ಸರ್ಕಾರಿ ವ್ಯವಸ್ಥೆಯಲ್ಲಿ ಮಹಿಳಾ ನೌಕರರ ಮಹತ್ವದ ಪಾತ್ರವನ್ನು ಗೌರವಿಸಲು ಸೆಪ್ಟೆಂಬರ್ 13 ಅನ್ನು ‘ಮಹಿಳಾ ನೌಕರರ ದಿನ’ವಾಗಿ ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಗುರುವಾರ ಆಯೋಜಿಸಿದ್ದ ಮಹಿಳಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸರ್ಕಾರದ ನಿರ್ಧಾರವನ್ನು ಪುನರುಚ್ಚರಿಸಿದರು. ಸಂಘದ ಕಚೇರಿಗೆ ಮತ್ತು ಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ ಎಂದೂ ಹೇಳಿದರು. ಮಹಿಳೆಯರು ಪುರುಷರಷ್ಟೇ ಸರ್ಕಾರಕ್ಕೆ ಸೇವೆ ಮಾಡುತ್ತಿದ್ದು, ಆಡಳಿತದ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಲಿಂಗ ಅಸಮಾನತೆಯನ್ನು ನಿವಾರಿಸಿ ಸಮಾನತೆ ಸ್ಥಾಪಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಸ್ವಾತಂತ್ರ್ಯಕ್ಕೆ…
63% ಭ್ರಷ್ಟಾಚಾರ ಆರೋಪ; ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ಸಿಎಂ
ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ,…
ಪುಟಿನ್ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. In a notable departure from usual practice, Prime Minister Shri @narendramodi personally welcomed Russian President Vladimir Putin upon his arrival at the Delhi airport. President Putin is undertaking a two-day State visit to India, during which he will participate in the 23rd… pic.twitter.com/n89gV1S6XX — BJP (@BJP4India) December 4, 2025 ವಿಮಾನದಿಂದ ಇಳಿದ ಬಳಿಕ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತನಾಡಿದರು. ಬಳಿಕ ಅಲ್ಪಕಾಲದ ಸಾಂಸ್ಕೃತಿಕ ಸ್ವಾಗತ ಕಾರ್ಯಕ್ರಮವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣದಿಂದ ಇಬ್ಬರೂ…
ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ
ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
