ಜೈಸಲ್ಮೇರ್: ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಪ್ರಯಾಣಿಕರಿದ್ದ ಬಸ್ ಧಗಧಗಿಸಿ ಹೊತ್ತಿಉರಿದಿದೆ. ಈ ಘಟನೆಯಲ್ಲಿ ಸಾವನ್ನಪಿದವರ ಸಂಖ್ಯೆ 15 ಕ್ಕೇರಿದೆ. #breakingnews राजस्थान के जैसलमेर में चलती एसी स्लीपर बस में आग लग गई। देखते ही देखते आग ने भीषण रूप ले लिया,बचने के लिए लोग चलती बस से कूद गए। बस में 57 लोग सवार थे। हादसे में 10-12 लोगों की जलने से मौत होने की आशंका है।#news #jaisalmer pic.twitter.com/79hsBUVtVz — Nihar Nath (@NiharNath01) October 14, 2025 ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು.…
Blog
‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’
ಬೆಂಗಳೂರು: ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಶಕ್ತಿ ಯೋಜನೆ ಮಹಿಳೆಯರು ಪಡೆದ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳು – 564.10 ಕೋಟಿ ಪ್ರಯಾಣಗಳು, ದೈನಂದಿನ ಚಲನಶೀಲತೆಯನ್ನು ಸಬಲೀಕರಣಗೊಳಿಸುತ್ತವೆ ಎಂದಿದ್ದಾರೆ. ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ – 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳನ್ನು ಪಡೆದುಕೊಂಡಿದೆ. ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದವರು…
ನಂಜೇಗೌಡರ ಶಾಸಕ ಸ್ಥಾನ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಾಗಾಗಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ನಂಜೇಗೌಡರ ಪ್ರಯತ್ನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸದೇ, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ…
ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ಕ್ಕಾಗಿ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟವಾಗಿದೆ. ಪಕ್ಷವು ಸ್ಪರ್ಧಿಸಲಿರುವ 101 ಸ್ಥಾನಗಳಲ್ಲಿ 71 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಉಳಿದ 30 ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಪಟ್ಟಿಯಲ್ಲಿ ಮಾಜಿ ಸಚಿವರು ಮಂಗಲ್ ಪಾಂಡೆ, ರೇಣು ದೇವಿ ಮತ್ತು ತಾರಕೇಶ್ವರ ಪ್ರಸಾದ್ ಸಿಂಗ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಪ್ರಸ್ತುತ ವಿಧಾನಸಭಾಧ್ಯಕ್ಷ ನಂದ ಕಿಶೋರ್ ಯಾದವ್ ಅವರಿಗೆ ಟಿಕೆಟ್ ನೀಡದಿರುವುದು ಗಮನಾರ್ಹವಾಗಿದೆ. 243 ಸದಸ್ಯರ ಬಿಹಾರ ವಿಧಾನಸಭೆಗಾಗಿ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು…
ಕಾರ್ಕಳದ ಮಾಜಿ ಶಾಸಕಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ವಿಧಿವಶ
ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹ ಬಾರ್ಕೂರು ಬಳಿ ಪತ್ತೆಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ಬಳಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಹೆಬ್ರಿ ತಾಲ್ಲೂಕಿನ ನಿವಾಸಿಯಾಗಿರುವ ಸುದೀಪ್ ಅವರು, ಬಾರ್ಕೂರು ರೈಲು ಮಾರ್ಗದ ಬಳಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುದೀಪ್ ಅವರ ತಂದೆ ಹೆಚ್. ಗೋಪಾಲ ಭಂಡಾರಿ ಅವರು 1999ರಲ್ಲಿ ಮತ್ತು ನಂತರ 2008ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಪ್ರಾಮಾಣಿಕತೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಹೆಸರುವಾಸಿಯಾಗಿದ್ದರು.
ದೀಪಾವಳಿ ಹಬ್ಬದ ಪ್ರಯುಕ್ತ 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ KSRTC
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ ನಡುವೆ ದೀಪಾವಳಿ ಸಂಭ್ರಮಿಸಲು ಊರುಗಳಿಗೆ ತೆರಳುವ ಮಂದಿಗೆ ಅನುಕೂಲವಾಗುವಂತೆ ನಿಗಮವು ಈ ಹೆಚ್ಚುವರಿ ಬಸ್ ಸೌಕರ್ಯ ಮಾಡಿದೆ. ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ನೆಲೆಸಿರುವ ಮಂದಿ ದೀಪಗಳ ಹಬ್ಬದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಪ್ರತೀವರ್ಷದಂತೆ ಈಬಾರಿಯೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 22.10.2025 ಹಾಗೂ…
ಮತದಾರರ ಪಟ್ಟಿ ಅಕ್ರಮ ಆರೋಪ; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ದೇಶದಾದ್ಯಂತ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಪ್ರಕರಣವನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿ, ಅರ್ಜಿದಾರರು ಈ ವಿಷಯವನ್ನು ಭಾರತ ಚುನಾವಣಾ ಆಯೋಗ (ಇಸಿಐ)ದ ಮುಂದೆ ಎತ್ತಿಕೊಳ್ಳುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು, ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಈಗಾಗಲೇ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರೂ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಾದಿಸಿದರು. ಆದರೆ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ಅಗತ್ಯವಿಲ್ಲ ಎಂದು ತೀರ್ಮಾನಿಸಿ, ಅರ್ಜಿದಾರರು ಕಾನೂನಿನಡಿ ಲಭ್ಯವಿರುವ ಮಾರ್ಗಗಳನ್ನು ಅನುಸರಿಸಬಹುದು ಎಂದು ತಿಳಿಸಿತು. ಈ ಪಿಐಎಲ್‌ನಲ್ಲಿ “ಒಬ್ಬ ವ್ಯಕ್ತಿ, ಒಂದು ಮತ” ಎಂಬ ಸಂವಿಧಾನಿಕ ತತ್ವವನ್ನು ಕಾಯ್ದುಕೊಳ್ಳಲು ತುರ್ತು ನ್ಯಾಯಾಂಗ ಹಸ್ತಕ್ಷೇಪ ಅಗತ್ಯವಿದೆ ಎಂದು ವಾದಿಸಲಾಗಿತ್ತು. ಅರ್ಜಿಯ…
ಮಾಜಿ ಪ್ರಧಾನಿ ದೇವೇಗೌಡರು ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಅವರು ಅಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಈಗ ಗಮನಾರ್ಹ ಸುಧಾರಣೆ ಕಂಡುಬಂದಿದೆ. ವೈದ್ಯರ ಸಲಹೆಯ ಮೇರೆಗೆ ಅವರಿಗೆ ಆಸ್ಪತ್ರೆಯಿಂದ ಬಿಡುಗಡೆ ನೀಡಲಾಗಿದ್ದು, ಅವರು ನೇರವಾಗಿ ತಮ್ಮ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿದ್ದಾರೆ. ವೈದ್ಯರ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಕೆಲವು ದಿನಗಳು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.
ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು!
ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ ಎಂದು ಅಶೋಕ್ ಗಮನ ಸೆಳೆದಿದ್ದಾರೆ. ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಸಿಎಂಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅಶೋಕ್, ‘ಆರ್ ಎಸ್ಎಸ್ ನಿಷೇಧ ಮಾಡುವ ಗೀಳು ಬಿಡಿ.…