ಢಾಕಾ: ಬಾಂಗ್ಲಾದೇಶದ ರಂಗ್‌ಪುರದಲ್ಲಿ ಬೀಗ ಹಾಕಿದ ಮನೆಯೊಳಗೆ ನಿವೃತ್ತ ಶಾಲಾ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಹಿಂದೂಗಳ ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಗಣಪತಿ ಚಕ್ರವರ್ತಿ (65), ಅವರ ಪತ್ನಿ ಪ್ರೀತಿಲತಾ ಚಕ್ರವರ್ತಿ (50), ಪುತ್ರಿ ಅಗಾಮಿ ಚಕ್ರವರ್ತಿ ಪ್ರಾರ್ಥಿ (23) ಹಾಗೂ ಪುತ್ರ ಪ್ರಿಯಂ ಚಕ್ರವರ್ತಿ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಟುಂಬದ ಇಬ್ಬರು ನೆರೆಹೊರೆಯವರಾದ ಸಿದ್ಧಾರ್ಥ ದಾಸ್ (19) ಮತ್ತು ಮುಗ್ಧಾ ದಾಸ್ (23) ಯಾಬಾ ಮಾದಕವಸ್ತು ಸೇವಿಸಲು ಮನೆಯ ಮೇಲ್ಛಾವಣಿಗೆ ತೆರಳಿದ್ದರು. ಶಬ್ದ ಕೇಳಿ ಅಲ್ಲಿಗೆ ಬಂದ ಗಣಪತಿ ಅವರನ್ನು ಗಮನಿಸಿದ ಹಿನ್ನೆಲೆಯಲ್ಲಿ ಆರೋಪಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ನಂತರ ವಿಷಯ ತಿಳಿಯಲು ಹೊರಬಂದ ಅವರ ಪುತ್ರಿ ಹಾಗೂ 12 ವರ್ಷದ ಪುತ್ರನನ್ನೂ ಆರೋಪಿಗಳು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮುಖಗಳನ್ನು ದಹನಕಾರಿ ವಸ್ತುವಿನಿಂದ…
Blog
ಕಾನೂನು ಸುವ್ಯವಸ್ಥೆ ವೈಫಲ್ಯ; ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದ ಬಿಜೆಪಿ
ಬೆಂಗಳೂರು: ‘ವಂದೇ ಮಾತರಂ’ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳು, ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ, ಜೈಲುಗಳಿಂದ ಕೈದಿಗಳ ಪರಾರಿ, ಡ್ರಗ್ಸ್ ದಂಧೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವಲ್ಲಿ ಗೃಹ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದೆ. ‘ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ರಾಜೀನಾಮೆ ನೀಡಬೇಕಿತ್ತು’ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಕನಿಷ್ಠ ಗೌರವ ನೀಡದ ಕಾಂಗ್ರೆಸ್‌ನಿಂದ ಬಿಜೆಪಿ ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಬಿಜೆಪಿ ಹೇಳಿದೆ. ರಾಜ್ಯದಲ್ಲಿ ದಿನನಿತ್ಯ ಅಪರಾಧಗಳು ನಡೆಯುತ್ತಿದ್ದರೂ ಅವುಗಳನ್ನು ತಡೆಯಲು ವಿಫಲವಾಗಿರುವ ಪ್ರಿಯಾಂಕ್ ಖರ್ಗೆ, ನೈತಿಕ ಹೊಣೆ ಹೊತ್ತು ಈಗಾಗಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಟೀಕಿಸಿದೆ. ತಮ್ಮ ಸ್ವಕ್ಷೇತ್ರ ಹಾಗೂ…
ಉದ್ಯಾನವನ ಜಾಗ ಬಳಕೆ ಸಂಬಂಧ ಕಾನೂನು ಬದಲಾವಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ
ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ವಿರೋಧಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಅವರು, “ಹಸಿರು ಉದ್ಯಾನವನಗಳು ಮಾರಾಟಕ್ಕಿಲ್ಲ; ಅವು ನಮ್ಮ ಹಕ್ಕು” ಎಂದು ಹೇಳಿದ್ದಾರೆ. ಉದ್ಯಾನವನಗಳ ಜಾಗವನ್ನು ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಬಲಿಯಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಸಾರ್ವಜನಿಕ ಉದ್ಯಾನವನಗಳ ಒಟ್ಟು ಪ್ರದೇಶದ ಶೇ.5ರಷ್ಟು ಜಾಗವನ್ನು ಮಾರಾಟ, ಗುತ್ತಿಗೆ, ಉಡುಗೊರೆ, ವಿನಿಮಯ ಅಥವಾ ಅಡಮಾನ ಸೇರಿದಂತೆ ವಿವಿಧ ರೀತಿಯಲ್ಲಿ ಬಳಸಲು ಅವಕಾಶ ನೀಡುವ ಪ್ರಸ್ತಾವನೆ ಆತಂಕಕಾರಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. “ಇಂದು ಶೇ.5 ಎನ್ನುತ್ತಾರೆ, ನಾಳೆ ಶೇ.10? ನಂತರ ಸಂಪೂರ್ಣ ಉದ್ಯಾನವನವೇ?” ಎಂದು ಪ್ರಶ್ನಿಸಿರುವ ಅವರು, ಒಮ್ಮೆ ಉದ್ಯಾನವನದ ಜಾಗ ಕಾಂಕ್ರೀಟ್ ಪ್ರದೇಶವಾಗಿ ಪರಿವರ್ತನೆಯಾದರೆ ಅದನ್ನು ಮತ್ತೆ ಹಸಿರು…
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಬಹುದು. ತುಮಕೂರು ಹಾಗೂ ಮಂಡ್ಯದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲೂ ಮಳೆಯ ಸಾಧ್ಯತೆಯಿದೆ. ಧಾರವಾಡ,…
KEA ಸಿಇಟಿ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ; ಆ.24ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ UGCET-2026 ಕೋರ್ಸ್‌ಗಳ ಎರಡನೇ ಸುತ್ತಿನ ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿ-ಫಾರ್ಮಾ, ಡಿ-ಫಾರ್ಮಾ, ಬಿಪಿಟಿ, ಬಿಪಿಒ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಸೇರಿದಂತೆ ವಿವಿಧ ಕೋರ್ಸ್‌ಗಳ ಸೀಟು ಹಂಚಿಕೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಇದರ ಜೊತೆಗೆ UGNEET-2026 ಅಡಿಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆ.24ರ ಸಂಜೆ 4ರವರೆಗೆ ಅವಕಾಶ ಸೀಟು ಹಂಚಿಕೆಯಲ್ಲಿ…
ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ
ನವದೆಹಲಿ: ದೆಹಲಿಯ ಐಟಿಒ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಪಿಡಬ್ಲ್ಯುಡಿ ಕಚೇರಿ ಬಳಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಲಕ್ಷ್ಮೀನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ಇನ್ನೋವಾ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಎಸ್‌ಯುವಿಯಲ್ಲಿ ಅಭಯ್ ಪಾಟೀಲ್ ಮತ್ತು ಅನಿಲ್ ಝಾ ಪ್ರಯಾಣಿಸುತ್ತಿದ್ದರು. ಸ್ವಿಫ್ಟ್ ಕಾರನ್ನು 32 ವರ್ಷದ ಆಶುತೋಷ್ ಪಾಂಡೆ ಚಲಾಯಿಸುತ್ತಿದ್ದು, ಅವರೊಂದಿಗೆ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳು ಇದ್ದರು. ಅಪಘಾತದಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ತಕ್ಷಣ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ…
ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಅದ್ಧೂರಿ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿ ಆವರಣದಲ್ಲಿ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಟ ಯಶ್, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು, ಸಚಿವ ಹಾಗೂ ಶಿಕ್ಷಣ ಸಂಸ್ಥೆಗಳ ಮಾಲೀಕ ಮಲ್ಲಾ ರೆಡ್ಡಿ, ನಿರ್ಮಾಪಕ ದಿಲ್ ರಾಜು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಆಗಮಿಸಿದ್ದರು. ಯಶ್ ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ ಕೆಲವರು ಸೌಂಡ್ ಬಾಕ್ಸ್ ಅಳವಡಿಸಿದ್ದ ಕಬ್ಬಿಣದ ಪೈಪ್‌ಗಳ ರಚನೆಯ ಮೇಲೆ ಏರಿ ಕುಳಿತಿದ್ದರು ಎನ್ನಲಾಗಿದೆ. ಹೆಚ್ಚಿನ ಭಾರದಿಂದ ಸೌಂಡ್ ಬಾಕ್ಸ್ ಕೆಳಗೆ ಬಿದ್ದಿದ್ದು, ಅದರೊಂದಿಗೆ ಪೈಪ್‌ಗಳಿಂದ ನಿರ್ಮಿಸಿದ್ದ ರಚನೆಯೂ…
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಬೆಂಗಳೂರು: ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯಿಂದ ಲಾಭ ಪಡೆಯುತ್ತಿದ್ದು, ಕಬ್ಬು ಬೆಳೆಗಾರರಿಗೆ ಮಾತ್ರ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಆರೋಪಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಮಾತನಾಡಿದ ಅವರು, ಮಳೆ ಕೊರತೆ ಹಾಗೂ ಬರಗಾಲದಿಂದ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಕಬ್ಬಿನ ಇಳುವರಿ ಕುಸಿದಿದ್ದು, ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ. ಹೀಗಾಗಿ ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ‘ಬ್ರೆಜಿಲ್ ಮಾದರಿಯಲ್ಲಿ ವೈಜ್ಞಾನಿಕ ಕಬ್ಬು ನೀತಿ ರೂಪಿಸಿ’ ದೊಡ್ಡ ಸಕ್ಕರೆ ಕಾರ್ಖಾನೆಗಳಿಗೆ ಮಾತ್ರ ಎಥನಾಲ್ ಉತ್ಪಾದನೆಯ ಲಾಭ ಸೀಮಿತವಾಗಬಾರದು. ರೈತರು ಸ್ಥಳೀಯ ಆಲೆಮನೆಗಳಲ್ಲಿಯೇ ಎಥನಾಲ್ ಉತ್ಪಾದಿಸಲು ಸರಳ ನಿಯಮಗಳನ್ನು ರೂಪಿಸಬೇಕು ಎಂದು ಶಾಂತಕುಮಾರ್ ಆಗ್ರಹಿಸಿದ್ದಾರೆ. ರೈತರು ಉತ್ಪಾದಿಸುವ ಎಥನಾಲ್ ಅನ್ನು ಅಡುಗೆ ಇಂಧನವಾಗಿ ಹಾಗೂ…
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ. ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಇವರು ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಎಂಟು ಮಂದಿ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಘಟನೆ ಕುರಿತು ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು ದೂರದಲ್ಲಿ ಪನಾಮಾ ಧ್ವಜದ ‘ಎಂವಿ ಓಷನ್ ವಿನ್ನರ್’ ಸರಕು ಹಡಗು ಬಂಗಾಳ ಕೊಲ್ಲಿಯಲ್ಲಿ ಮುಳುಗಿದೆ. ಹಡಗಿನಲ್ಲಿದ್ದ 24 ಸಿಬ್ಬಂದಿಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ. ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು 72,100 ಟನ್ ಕಬ್ಬಿಣದ ಅದಿರು ಸಾಗಿಸುತ್ತಿತ್ತು. ಆಗಸ್ಟ್ 20ರಂದು ರಾತ್ರಿ 10.42ಕ್ಕೆ ಪಾರದೀಪ್ ಬಂದರಿನಿಂದ ಹೊರಟಿತ್ತು. ಸಿಬ್ಬಂದಿಯಲ್ಲಿ 20 ಮಂದಿ ಚೀನಾ, ಮೂವರು ಮ್ಯಾನ್ಮಾರ್ ಹಾಗೂ ಒಬ್ಬರು ಬಾಂಗ್ಲಾದೇಶದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಡಗಿನೊಂದಿಗೆ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಕಂಪನಿಯು ಶನಿವಾರ ಬೆಳಗ್ಗೆ ಭಾರತೀಯ ಕರಾವಳಿ ಪಡೆಯ ಸಾಗರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ನೀಡಿತ್ತು. ತಕ್ಷಣ ಕಾರ್ಯಾಚರಣೆ ಆರಂಭಿಸಿದ MRCC, ಸಮೀಪದಲ್ಲಿದ್ದ MT ಐಸೋಪೋಸ್ ಹಡಗನ್ನು ಶೋಧ ಕಾರ್ಯಕ್ಕೆ ನಿಯೋಜಿಸಿತು. ರಾತ್ರಿ 8ರ ಸುಮಾರಿಗೆ ಎರಡು ರಕ್ಷಣಾ ತೆಪ್ಪಗಳಿಂದ ಇಬ್ಬರು ಸಿಬ್ಬಂದಿಯನ್ನು…
