ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಕನ್ನಡ ಪರ ಸಂಘಟನೆಗಳ ನಾಯಕರನ್ನು ಕೆರಳುವಂತೆ ಮಾಡಿದೆ.
ಉದ್ಧವ್ ಠಾಕ್ರೆ ಹೇಳಿಕೆಯಿಂದ ಸಿಡಿಮಿಡಿಗೊಂಡಿರುವ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಈ ಬೆಳವಣಿಗೆಗೆ ರಾಜ್ಯದ ರಾಜಕೀಯ ನಾಯಕರೇ ಹೊಣೆ ಎಂದು ಬೊಟ್ಟು ಮಾಡಿದ್ದಾರೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆಯ ಶಾಸಕರು, ಸಚಿವರು ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸೊಲ್ಲಾಪುರ ಸಹಿತ ಮಹಾರಾಷ್ಟ್ರ ವ್ಯಾಪ್ತಿಯಲ್ಲಿರುವ ಅನೇಕ ಪ್ರದೇಶಗಳಲ್ಲಿ ಕನ್ನಡ ಭಾಷಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಪ್ರದೇಶಗಳು ಕರ್ನಾಟಕಕ್ಕೇ ಸೇರಬೇಕಿದೆ ಎಂದು ವಾಟಾಳ್ ನಾಗರಾಜ್ ಅವರು ಮರಾಠಿ ನಾಯಕರಿಗೆ ಎದಿರೇಟು ನೀಡಿದ್ದಾರೆ.