ಬೆಂಗಳೂರು: ಅನ್ನದಾತರ ಬಿಪಿಎಲ್ ಕಾರ್ಡ್‌ಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಚಿಂತನೆ ವಿಚಾರ ಇದೀಗ ಪ್ರತಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಮೈಷುಗರ್ ಕಾರ್ಖಾನೆಯನ್ನು ಮುರುಗೇಶ್ ನಿರಾಣಿ ಒಡೆತನದ ಕಂಪೆನಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ವಿಚಾರವನ್ನೂ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು ರಾಜ್ಯ ಸರ್ಕಾರದ ವಿರುದ್ಧ ಸಮರಕ್ಕಿಳಿಯಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿವೆ.
ಬಿಪಿಎಲ್ ಕಾರ್ಡ್ ಹಾಗೂ ಮೈಷುಗರ್ ಕಾರ್ಖಾನೆ ವಿಚಾರಗನ್ನು ಭಾವನಾತ್ಮಕ ವಿಷಯವನ್ನಾಗಿ ರೈತರ ಮುಂದಿಡುವ ಪ್ರಯತ್ನ ಈ ಎರಡು ಪಕ್ಷಗಳಿಂದ ಸಾಗಿದೆ. ಅದರಲ್ಲೂ ಮೈಶುಗರ್ ಖಾರ್ಖಾನೆಗೂ ಹಳೆ ಮೈಸೂರು ಭಾಗದ ಜನರ ನಡುವಿನ ಭಾವನಾತ್ಮಕ ನಂಟಿನ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸುತ್ತಿರುವ ಬೆಳವಣಿಗೆ ರಾಜ್ಯದ ಆಡಳಿತಾರೂಢ ಬಿಜೆಪಿಗೆ ಅರಗಿಸಿಕೊಳ್ಳಲಾಗದ ಸ್ಥಿತಿಯತ್ತ ಕೊಂಡೊಯ್ದಿದೆ.
ಇದೇ ವೇಳೆ, ರಾಜ್ಯ ಸರ್ಕಾರ ಅನ್ನದಾತರ ಬಿಪಿಎಲ್ ಕಾರ್ಡ್‌ಗಳನ್ನು ಹಿಂಪಡೆಯುವ ವಿಚಾರ ಮುಂದಿಟ್ಟು ರಾಜ್ಯವ್ಯಾಪಿ ರೈತರನ್ನು ರೊಚ್ಚಿಗೆಬ್ಬಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ.
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂಬ ಸರ್ಕಾರದ ಎಚ್ಚರಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡಾ ಸಿಡಿದೆದ್ದಿದ್ದಾರೆ.
ರೈತರ ಪರವಾಗಿ ಸರ್ಕಾರ ನಡೆಸುವೆನೆಂದ ಯಡಿಯೂರಪ್ಪ ಅವರ ನಿಲುವಿನ ವಿರುದ್ಧ ಕಿಡಿ ಕಾರಿರುವ ಕುಮಾರಸ್ವಾಮಿ ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ. ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು @BSYBJP ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ.
(1/4)— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2020
ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ? ಎಂದೂ ಕುಮಾರಸ್ವಾಮಿಯವರು ತಮ್ಮ ಸಂದೇಶದಲ್ಲಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?
(2/4)— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2020
ಇದನ್ನೂ ಓದಿ.. ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಸಮರ ತಂತ್ರ; ಬಿಎಸ್‌ವೈಗೆ ಕಠಿಣ ಹಾದಿ?