ಬ್ರಾಂಡ್ ಬೆಂಗಳೂರು: ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಬ್ರಾಂಡ್ ಬೆಂಗಳೂರು ಸಂಬಂಧಿಸಿದಂತೆ ಸೋಮವಾರ ಮಹತ್ವದ ಸಭೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಈ ಕುರಿರು ಮಾಹಿತಿ ನೀಡಿದ ಅವರು, ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು,‌ ಅವುಗಳನ್ನು ಒಂದು ಕಡೆ ಕ್ರೂಡಿಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.


ಬ್ರಾಂಡ್ ಬೆಂಗಳೂರು ವಿಚಾರಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. Voice of the citizens, should be voice of the karnataka ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ. ಸೋಮವಾರ ಬೆಳಿಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬೊಮ್ಮಾಯಿ ಅವರ ಹೇಳಿಕೆಯಂತೆ ನಡೆಯುತ್ತಿದ್ದೇವೆ

ಇದೇ ವೇಳೆ, ಕ್ಷೇತ್ರಗಳಿಗೆ ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಈ ರೀತಿ ಮಾಡಿರಲಿಲ್ಲ ಎನ್ನುವ ಬೊಮ್ಮಾಯಿ ಅವರ ಆರೋಪಕ್ಕೆ ಡಿಕೆಶಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ಬೊಮ್ಮಾಯಿ ಅವರು ವಿಧಾನ ಪರಿಷತ್ತಿನಲ್ಲಿ ಏನು ಹೇಳಿಕೆ, ಉತ್ತರ ನೀಡಿದ್ದರೊ, ಅದನ್ನೇ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

 

Related posts