ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಕಟು ಟೀಕೆ ಮಾಡಿದ್ದಾರೆ. ಅದರಲ್ಲೂ ಜೆಡಿಎಸ್ ನಾಯಕ ಹೆಚ್. ಡಿ. ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ನಿರಾಶಾದಾಯಕ ಬಜೆಟ್ಗೆ ನಾನು ಅಂಕ ಕೊಡೋಲ್ಲ, ಜನರೇ ಕೊಡುತ್ತಾರೆ ಎಂದಿದ್ದಾರೆ. ಇದ್ಯಾಕೆ ಈ ರೀತಿಯ ಪ್ರತಿಕ್ರಿಯೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಕುಮಾರಸ್ವಾಮಿ, ಬಜೆಟ್ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಎಂದಿದ್ದಾರೆ.
ಕೆಲವು ನನ್ನ ಕಾರ್ಯಕ್ರಮಗಳೇ ಮುಂದುವರಿದಿವೆ ಎಂದು ಅವರು ವ್ಯಂಗ್ಯವಾಡಿದ್ದಾರೆ.