ರಾಜ್ಯ ಬಜೆಟ್ ನಲ್ಲಿ ಕೆಲವರಿಗೆ ಕಿಕ್ ಇನ್ನೂ ಕೆಲವರಿಗೆ ಶಾಕ್..

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಕೆಲವರಿಗೆ ಕಿಕ್ ಇನ್ನೂ ಕೆಲವರಿಗೆ ಶಾಕ್.. ಹೌದು, ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡನೆಯಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದರು.

2020-21ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿರುವ ಯೋಜನೆಗಳು ಹೀಗಿವೆ.

 • ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ 12 ಸಾವಿರ ಕೋಟಿ ರೂ.ಆದಾಯ ಸಂಗ್ರಹ ಗುರಿ.
 • ಅಬಕಾರಿ ಇಲಾಖೆಯಿಂದ ಪ್ರಸಕ್ತ ವರ್ಷ 22 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ.
 • ಅಬಕಾರಿ ಇಲಾಖೆಯಿಂದ ಪ್ರಸಕ್ತ ವರ್ಷ 22 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ.
 • ಸಾರಿಗೆ ಇಲಾಖೆಯಿಂದ 7 ಸಾವಿರ ಕೋಟಿ ರೂ.ಆದಾಯ ಸಂಗ್ರಹ ಮಾಡುವ ಗುರಿ.
 • ಹೆಚ್ಚಿನ ಸಂಪನ್ಮೂಲ ಕೃಢೀಕರಣಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ, ಮದ್ಯದ ಮೇಲೆ ಅಬಕಾರಿ ತೆರಿಗೆ ಹೆಚ್ಚಳದ ಘೋಷಣೆ.
 • ಭಾಗ್ಯಲಕ್ಷಿ ಯೋಜನೆ ಸಾಲಾ ಮಕ್ಕಳಿಗೆ ಉಚಿತ ಸೈಕಲ್ ನೀಡುವ ಯೋಜನೆಯನ್ನು ಆರ್ಥಿಕ ಸಂಕಷ್ಟದ ನಡುವೆಯೂ ಮುಂದುವರಿಸಿಕೊಂಡು ಹೋಗುವುದಾಗಿ ಪ್ರಸ್ತಾಪ
 • ಹಾವೇರಿ ಜಿಲ್ಲೆ ಶಿಗ್ಗಾವಿ, ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ, ಸ್ಥಳೀಯರಿಗೆ ಉದ್ಯೋಗ
 • ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಐತಿಹಾಸಿಕ ಪ್ರಾಚೀನ ದೇವಾಲಯಗಳಿದ್ದು, ಇವುಗಳ ಪುನರುಜ್ಜೀವನಕ್ಕಾಗಿ ಸಂರಕ್ಷಣಾ ಎಂಬ ಹೊಸ ಯೋಜನೆ ಪ್ರಕಟ
 • ಸರ್ಕಾರಿ ಜಮೀನುಗಳನ್ನು ಖಾಸಗೀ ವ್ಯಕ್ತಿಗಳು ಮತ್ತು ಬಲಾಢ್ಯರು ಒತ್ತುವರಿ ಮಾಡುವುದನ್ನು ಪತ್ತೆ ಹಚ್ಚಲು ಸರ್ಕಾರಿ ಜಮೀನು ಸಂರಕ್ಷಣೆಗಾಗಿ ಜಮೀನು ಸಂರಕ್ಷಣಾ ಸಮಿತಿ ರಚನೆ.
 • ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕನಸಿನ ಸೂರು. 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಅಪಾರ್ಟ್ ಮೆಂಟ್ ಗಳ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇ.5 ರಿಂದ 2ಕ್ಕೆ ಇಳಿಸುವ ಪ್ರಸ್ತಾಪ.
 • ಬೆಳಗಾವಿ, ಹುಬ್ಬಳ್ಳಿ ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ 353 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟದ ಕೇಂದ್ರಗಳನ್ನು ಸ್ಥಾಪನೆ.
 • ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸಿಎಂ ಹೊಸ ಯೋಜನೆ. ಸಿಲ್ಕ್ ಬೋರ್ಡ್ ನಿಂದ ಕೆ ಆರ್ ಪುರ ಹಾಗೂ ಹೆಬ್ಬಾಳ ಮುಖಾಂತರ ಅಂತರಾಷ್ಟ್ರೀಯ ಏರ್ ಪೋರ್ಟ್ ವರೆಗೆ 56 ಕಿಮೀ ಉದ್ದದ ಹೊರ ವರ್ತುಲ ರಸ್ತೆ
 • ಏರ್ ಪೋರ್ಟ್ ಮೆಟ್ರೋ ನಿರ್ಮಾಣಕ್ಕಾಗಿ 14,500 ಕೋಟಿ ರೂ.
 • ಬೆಂಗಳೂರಿನ ಜನನಿಭಿಡ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ‘ಅಂಡರ್‍ಗ್ರೌಂಡ್ ವಾಹನ ಪಾರ್ಕಿಂಗ್’ ಯೋಜನೆ
 • 90 ಮೆಟ್ರೋ ಫೀಡರ್ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಅನುದಾನ
 • ಬೆಂಗಳೂರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪರ್ಕಕ್ಕೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ
 • 12 ಕಾರಿಡಾರ್ ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಆರಂಭಕ್ಕೆ ನಿೃರ್ಧಾರ
 • ಬೆಂಗಳೂರು ರಸ್ತೆ ಸುರಕ್ಷತಾ ನಿಧಿಗೆ 200 ಕೋಟಿ ರೂ ಅನುದಾನ
 • ಖಾಸಗಿ ಸಹಭಾಗಿತ್ವದಲ್ಲಿ ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ.
 • ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗೆ “ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ” ಯೋಜನೆ ಘೋಷಣೆ
 • ಸಂಚಾರ ದಟ್ಟಣೆಯ 12 ಕಾರಿಡಾರ್‍ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಅನುಷ್ಠಾನ
 • ಪ್ರಯಾಣಿಕ ಮತ್ತು ಸರಕು ಸಾಗಣೆ ವಾಹನಗಳಿಗೆ 20 ಕೋಟಿ ರೂ. ವೆಚ್ಚದಲ್ಲಿ ವೆಹಿಕಲ್ ಲೊಕೇಶನ್ ಟ್ರಾಕಿಂಗ್ ವ್ಯವಸ್ಥೆ ಅಳವಡಿಕೆ
 • ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಸಮರ್ಪಕ ಮೆಟ್ರೋ ಫೀಡರ್ ಸಾರಿಗೆ ಸೌಲಭ್ಯ
 • ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ 890 ಎಲೆಕ್ಟ್ರಿಕ್ ಬಸ್‍ಗಳೂ ಸೇರಿದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2390 ಹೊಸ ಬಸ್‍ಗಳ ಸೇರ್ಪಡೆಗೆ ಕ್ರಮ
 • ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 44 ಕಿ.ಮೀ. ಹೊಸ ಮೆಟ್ರೋ ಮಾರ್ಗ ನಿರ್ಮಾಣ
 • ಮಹದಾಯಿ ಯೋಜನೆಗೆ 500 ಕೋಟಿ ರೂ. ಅನುದಾನ ಮೀಸಲು
 • ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಅನುದಾನ,
 • ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ 500 ಕೊಟಿ ರೂ. ಅನುದಾನ
 • ಬಯಲು ಸೀಮೆಯ ಕುಡಿಯುವ ನೀರಿನ ಯೋಜನೆ- ಎತ್ತಿನಹೊಳೆ ಕಾಮಗಾರಿಗೆ ೧೫೦೦ ಕೋಟಿ ರೂ. ಮೀಸಲು
 • ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ
 • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಣ
 • ಕ್ರೈಸ್ತ ಸಮುದಾಯದವರ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ
 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ
  ರಸ್ತೆ, ಸೇತುವೆ ಮರು ನಿರ್ಮಾಣಕ್ಕೆ 5 ಸಾವಿರ ಕೋಟಿ ರೂ. ಸಾಲ
 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ
 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ 20 ಲಕ್ಷ ರೂ. ಹೆಚ್ಚಳ
 • ಮಕ್ಕಳ ಬ್ಯಾಗ್‌ ಹೊರೆ ತಪ್ಪಿಸಲು ಕ್ರಮ: ಪ್ರತಿ ತಿಂಗಳ 2 ಶನಿವಾರ ಬ್ಯಾಗ್‌ ರಹಿತ ದಿನ
 • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ಇದಕ್ಕೆ 60 ಲಕ್ಷ ರೂ. ಅನುದಾನ
 • ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ
 • “ಚರ್ಮ ಶಿಲ್ಪ” ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ
 • 250 ಚರ್ಮ ಕುಶಲಕರ್ಮಿಗಳಿಗೆ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ ನಿರ್ಮಾಣ ಮಾಡಲು ಕ್ರಮ. ಇದಕ್ಕೆ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. ಇದಕ್ಕೆ 12.50 ಕೋಟಿ ರೂ. ಅನುದಾನ
 • ಅಲೆಮಾರಿ/ ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ
 • ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ
 • ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು
 • 7 ಬಾಲ ಮಂದಿರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, 5.67 ಕೋಟಿ ಮೀಸಲು
 • ನೆರೆ ಹಾವಳಿಯಿಂದ ಹಾನಿಗೊಂಡ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ಮೀಸಲು.
 • ಬಾಲ ಮಂದಿರದಿಂದ 21 ವರ್ಷದ ಬಳಿಕ ಬಿಡುಗಡೆಗೊಳ್ಳುವವರಿಗೆ ತಿಂಗಳಿಗೆ 5000 ರೂ ನಂತೆ 3 ವರ್ಷ ಆರ್ಥಿಕ ಸಹಾಯಧನ ನೀಡುವ ಉಪಕಾರ ಯೋಜನೆ
 • ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬೆಲ್ ಕಂ ಟಾಕಿಂಗ್ ಲೈಬ್ರೆರಿ ಸ್ಥಾಪನೆ. ಇದಕ್ಕಾಗಿ 30 ಲಕ್ಷ ರೂ ಮೀಸಲು.
 • ‘ವನಿತಾ ಸಂಗಾತಿ’ ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ 1 ಲಕ್ಷ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.
 • ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.
 • ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.
 • 500 ಕೋಟಿ ರೂಪಾಯಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ ಸ್ಥಾಪನೆ
 • ಹೊಸದಾಗಿ ತೋಟಗಾರಿಕಾ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ಹೆಕ್ಟೇರ್​ಗೆ 5000 ರೂ.ನಿಂದ 10,000 ರೂ.ವರೆಗೆ ನೆರವು

Related posts