ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು.

ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್‌ ಡಿಜಿಟಲ್‌ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಹೇಳಿದರು.

Related posts