ಉಪ ಚುನಾವಣೆಯಲ್ಲಿ ಗೆಲ್ಲುವವರಿಗೆ 24 ಗಂಟೆಯೊಳಗೆ ಸಚಿವ ಸ್ಥಾನ : ಶ್ರೀರಾಮುಲು

ಹುಣಸೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸುವ ಬಿಜೆಪಿಯ ಪ್ರಯತ್ನಕ್ಕೆ ಸಾತ್ ನೀಡಿದ್ದ ಅನರ್ಹ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಲು ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅನರ್ಹ ಶಾಸಕರಿಗೆ 24 ಗಂಟೆಯೊಳಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಉಪ ಚುನಾವಣಾ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿರುವ, ಶ್ರೀರಾಮುಲು ಅವರು ಉಪ ಚುನಾವಣೆಯಲ್ಲಿ ಗೆದ್ದವರಿಗೆ 24 ಗಂಟೆಯೊಳಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದರು.

ಇನ್ನು 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದ ಶ್ರೀರಾಮುಲು, ಈ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ದೂಳೀಪಟವಾಗಿ ಬಿಜೆಪಿ ಮೈಲುಗೈ ಸಾಧಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

Related posts