ಬೆಂಗಳೂರು : ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಅವರಿಗೆ ಉಪಚುನಾವಣೆಯ ಅಭ್ಯರ್ಥಿಯಾಗಿ ಟಿಕೆಟ್ ನೀಡಲು ಆಡಳಿತ ಪಕ್ಷ ಬಿಜೆಪಿ ತೀರ್ಮಾನಿಸಿದೆ. ಅನರ್ಹ ಶಾಸಕರು ಪಕ್ಷ ಸೇರ್ಪಡೆ ಬಳಿಕ ಅವರನ್ನು ಅಭ್ಯರ್ಥಿ ಎಂದು ಘೋಷಿಸಲು ಪಕ್ಷ ನಿರ್ಧರಿಸಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಾಯಕರು ಈ ತೀರ್ಮಾನ ಕೈಕೊಂಡಿದ್ದಾರೆ.
ಅನರ್ಹ ಶಾಸಕರು ನಾಳೆ ಪಕ್ಷ ಸೇರ್ಪಡನೆಯಾದ ಬಳಿಕ ಅವರಿಗೆ ಟಿಕೆಟ್ ನೀಡಲಾಗುವುದು. ಯಾರಿಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಸಭೆಯಲ್ಲಿ ಟಿಕೆಟ್ ನೀಡುವ ಜೊತೆಗೆ 15 ಕ್ಷೇತ್ರಗಳಿಗೆ ಉಸ್ತುವಾರಿಗಳ ಆಯ್ಕೆ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಸಲಾಗುವುದು. ನಾನು ಹಾಗೂ ರಾಜ್ಯಾಧ್ಯಕ್ಷರು ಈ ವಿಚಾರ ಚರ್ಚಿಸಿದ್ದು, ಸಮಾಲೋಚನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.