ನಾಳೆ ಸಂಪುಟ ವಿಸ್ತರಣೆ; ಗೆದ್ದ ಅರ್ಹರಿಗಷ್ಟೇ ಸ್ಥಾನ

ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು 13 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಈಶ್ವರಪ್ಪ, ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಎರಡು ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಉಪಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಮಂತ್ರಿ ಮಾಡಲಾಗುತ್ತಿದೆ. ಸೋತವರಿಗೂ ಮಂತ್ರಿ ಸ್ಥಾನ ನೀಡಬೇಕೆ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು ಮುಖ್ಯಮಂತ್ರಿಯವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಸಿದ್ದರಿಂದ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಆದರೂ ಮುಖ್ಯಮಂತ್ರಿಯವರು ಅದನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಅವರು ಹೇಳಿದರು.

Related posts