“ಕಿಲ್ಲರ್‌ ಬಿಎಂಟಿಸಿ” ಎನ್ನುವ ಅಪಖ್ಯಾತಿ; ಪ್ರಯಾಣಿಕರೇ ಬಸ್‌ ಹತ್ತುವ ಮುನ್ನ ಎಚ್ಚರ ಎಚ್ಚರ ಎಂದ ಬಿಜೆಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡಕೋಟಾ ಬಿಎಂಟಿಸಿ ಬಸ್‌! ಪ್ರಯಾಣಿಕರೇ ಬಸ್‌ ಹತ್ತುವ ಮುನ್ನ ಎಚ್ಚರ ಎಚ್ಚರ ಎಂದು ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ನೀಡಿದೆ. ಮಾರ್ಗ ಮಧ್ಯೆ ಕೆಟ್ಟುಹೋಗುವ ಹಾಗೂ ಸಾರಿಗೆ ನಿಗಮದ ಅನೇಕಾನೇಕ ಅವಾಂತರಗಳ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಿಎಂಟಿಸಿ ಬಸ್ಸಿನ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ಭ್ರಷ್ಟ ಕಾಂಗ್ರೆಸ್ ಸರ್ಕಾರ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಸಾರಿಗೆ ಇಲಾಖೆಗೆ ಅನುದಾನ ನೀಡದೆ, ಬಾಕಿ ಉಳಿಸಿಕೊಂಡು ಡಕೋಟಾ ಬಸ್‌ಗಳನ್ನ ರಸ್ತೆಗೆ ಇಳಿಸಿದೆ’ ಎಂದು ಟೀಕಿಸಿದೆ. ಒಂದು ಕಡೆ ಬಿಎಂಟಿಸಿ ಬಸ್‌ಗಳು ಸರಿಯಾದ ನಿರ್ವಹಣೆ ಇಲ್ಲದೆ ಅಮಾಯಕರ ಜೀವ ಬಲಿ ಪಡೆದು “ಕಿಲ್ಲರ್‌ ಬಿಎಂಟಿಸಿ” ಎನ್ನುವ ಅಪಖ್ಯಾತಿ ಗಳಿಸಿವೆ. ಇನ್ನೊಂದು ಕಡೆ ಬಸ್‌ಗಳಲ್ಲಿ ಪ್ರಯಾಣಿಸುವುದಕ್ಕೂ ಜನರು ಭಯ ಪಡುವ ಸ್ಥಿತಿ ಎದುರಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಎಂಬುದೇ ಇಲ್ಲವಾಗಿದೆ ಎಂದು…

‘ಕೋಗಿಲು’ ತೆರವು; ಮಾನವೀಯ ದೃಷ್ಟಿಯಿಂದ ಪರ್ಯಾಯ ವಸತಿ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಟ್ಟಡ ನೆಲಸಮ ಕಾರ್ಯಾಚರಣೆ ಕುರಿತಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೇರಳದ ಚುನಾವಣಾ ರಾಜಕೀಯದ ಭಾಗವೆಂದು ವ್ಯಾಖ್ಯಾನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಕಾರಣ, ಅಲ್ಲಿನ ಮುಖ್ಯಮಂತ್ರಿ ಈ ವಿಚಾರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಕೋಗಿಲು ಪ್ರದೇಶಕ್ಕೆ ಒಬ್ಬ ಶಾಸಕ ಮತ್ತು ರಾಜ್ಯಸಭಾ ಸದಸ್ಯರನ್ನು ಕಳುಹಿಸಿದ್ದಾರೆ” ಎಂದು ಹೇಳಿದರು. ಕೋಗಿಲು ಪ್ರದೇಶದ ನಿವಾಸಿಗಳು ನಿರಾಶ್ರಿತರಾಗಿದ್ದು, ಅವರು ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ನಿಗಮದ ವತಿಯಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. “ಮಾನವೀಯ ದೃಷ್ಟಿಯಿಂದ ನಾವು ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. #WATCH | Bengaluru: On Kerala CM Pinarayi Vijayan's statement on the…

ಕರ್ನಾಟಕದ ಜಮೀನಿನ ಮೇಲೆ ಕೇರಳ ಸರ್ಕಾರದ ಅಧಿಕಾರವಿದೆಯೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕೋಗಿಲು ಒತ್ತುವರಿ ತೆರವು ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಸವಾಗಿ ಪರಿಣಮಿಸಿದೆ. ಹೈಕಮಾಂಡ್ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಒತ್ತುವರಿ ತೆರವಿನಿಂದ ಸಂತ್ರಸ್ತರಾದವರಿಗೆ ಪರ್ಯಾಯ ವಸತಿ ನಿರ್ಮಿಸಿಕೊಡಲು ತಯಾರಿ ನಡೆಸಿದೆ. ಸರ್ಕಾರದ ಈ ನಡೆ ಪ್ರತಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ಕರ್ನಾಟಕವನ್ನು ಕೇರಳ ಸರ್ಕಾರ ಆಳ್ವಿಕೆ ಮಾಡುತ್ತಿದೆಯೇ ? ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ವೇಣುಗೋಪಾಲ್‌ ನಡೆಸುತ್ತಿದ್ದಾರೆಯೇ? ಕರ್ನಾಟಕದ ಜಮೀನಿನ ಮೇಲೆ ಕೇರಳ ಸರ್ಕಾರದ ಅಧಿಕಾರವಿದೆಯೇ?’ ಎಂದು ಪ್ರಶ್ನಿಸಿದ್ದಾರೆ. ಕೇರಳದ ನಿಯೋಗ ರಾಜ್ಯದ ವಿಷಯದಲ್ಲಿ ವರದಿ ಕೇಳುವಂತಾಗಿದೆ ಎಂದರೆ ಕರ್ನಾಟಕದ ನೆಲ, ಜಲದ ಮೇಲೆ ಕಾಳಜಿ ಇಲ್ಲದಿರುವ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದವರು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕವನ್ನು ಕೇರಳ ಸರ್ಕಾರ ಆಳ್ವಿಕೆ ಮಾಡುತ್ತಿದೆಯೇ ? ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ವೇಣುಗೋಪಾಲ್‌…

ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ದಿನಾಂಕ 30.12.2025 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಟಿಟಿಡಿ ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಕೆ. ವೀರಾಂಜನೇಯಲು, “ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಬೆಳಗಿನ ಜಾವ 1.35 ರಿಂದ ರಾತ್ರಿ 11.45 ರ ವರೆಗೆ ನಿರಂತರ ದರ್ಶನಕ್ಕೆ ಅವಕಾಶವಿರುತ್ತದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪವಿತ್ರ ದಿನದಂದು ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ,” ಎಂದು ತಿಳಿಸಿದರು. ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ…

ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ನಡುವೆ ಬುಲ್ಡೋಜರ್ ಬಡಿದಾಟ ನಡೆಯುತ್ತಿದೆ. ತನ್ನ ನಡೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಮರ್ತಿಸಿಕೊಂಡಿದ್ದು, ಕಾನೂನು ರೀತಿಯ ಕ್ರಮವನ್ನೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಬೆಂಗಳೂರು ಹೊರವಲಯದ ಕೋಗಿಲು ಬಳಿ ಸರ್ಕಾರಿ ಜಮೀನಿನಲ್ಲಿ ಮುಸ್ಲಿಂ ಸಮುದಾಯದವರು ಅಕ್ರಮವಾಗಿ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಒತ್ತುವರಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾಚರಣೆ ನಡೆಸಿದೆ. ಈ ಬುಲ್ಡೋಜರ್ ಕಾರ್ಯಚರಣೆ ಹಾಗೂ ಸಿದ್ದರಾಮಯ್ಯ ಸರ್ಕಾರದ ಸಮರ್ಥನೆಯನ್ನು ತನ್ನದೇ ಶೈಲಿಯಲ್ಲಿ ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಪ್ರಭಾವಿಗಳ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನಿಸಿದೆ. ಈ ವಿಚಾರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಕೇಳಿಬಂದಿರುವ ಒತ್ತುವರಿ ಆರೋಪವನ್ನು ಪ್ರಸ್ತಾಪಿಸಿದೆ. ‘ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಂಚನೆಯ…

ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ; KPCC ಯಿಂದ ಅಧ್ಯಯನ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಸಮಿತಿ ಸಂಚಾಲಕರು, ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು ಎಂಬ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಈ ಸಮಿತಿ ರಚನೆ ಮಾಡಿದ್ದಾರೆ. ಈ ಸಮಿತಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಉಳಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌…

‘ವೈದ್ಯರ ಮರುಹೊಂದಾಣಿಕೆ ಹೊರತು ಆಸ್ಪತ್ರೆಗಳ ಮುಚ್ಚುವಿಕೆಯಲ್ಲ’; ಸರ್ಕಾರದ ಸ್ಪಷ್ಟನೆ

ಬೆಂಗಳೂರು: ‘ನಾವು ಯಾವುದೇ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳ ಬಗ್ಗೆ ಹಾಗೂ ಈ ಕುರಿತ ಮಾಧ್ಯಮ ವರದಿಗಳನ್ನು ಮುಂದಿಟ್ಟು ಪ್ರತಿಪಕ್ಷಗಳು ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ನಾಯಕರು ಅಧಿಕಾರಕ್ಕಾಗಿ ಹತಾಶೆಗೊಂಡು ಇಷ್ಟೊಂದು ಕೆಳಮಟ್ಟದ ಸುಳ್ಳು ಸುದ್ದಿಗಳನ್ನು ಹರಡುವುದು ಶೋಭೆ ತರುವಂತದ್ದಲ್ಲ. ‘ನಾವು ಯಾವುದೇ ಸರ್ಕಾರಿ ಆಸ್ಪತ್ರೆಯನ್ನು ಮುಚ್ಚುತ್ತಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಜನರ ದಾರಿ ತಪ್ಪಿಸುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ’ ಎಂದು ಅವರು ಹೇಳಿದ್ದಾರೆ. ‘ನಮ್ಮ ಗುರಿ ಬಡವರ ಜೀವ ಉಳಿಸುವುದು, ಸುಳ್ಳು ಹೇಳುವುದಲ್ಲ’ ಎಂದು ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದಿಗೂ ಬಡವರ ಪರವಾಗಿದೆ. ನಾವು ಮಾಡುತ್ತಿರುವುದು ವೈದ್ಯರ…

ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ; ಸಿದ್ದರಾಮಯ್ಯ

ಬೆಂಗಳೂರು: ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ. ಬಿಜೆಪಿ ನಾಯಕರ ಜಾಣಮೌನಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದವರು ಹೇಳಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿಯ ಬಸ್ ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ..

ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ

ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ…