ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕವನ್ನು ಶೇ.5ರಿಂದ ಶೇ.2ಕ್ಕೆ ಇಳಿಸಿ 100 ದಿನಗಳ “ಸುವರ್ಣ ಅವಕಾಶ” ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ನಾಗರಿಕರಿಗೆ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಹೇಳಿದರು. “ಬಿ ಖಾತಾವನ್ನು ಎ ಖಾತಾಗೆ ಪರಿವರ್ತಿಸಲು ಸಾಮಾನ್ಯವಾಗಿ ಗೈಡ್‌ಲೈನ್ ಮೌಲ್ಯದ ಶೇ.5 ಶುಲ್ಕ ವಿಧಿಸಲಾಗುತ್ತದೆ. ಆದರೆ ಮುಂದಿನ 100 ದಿನಗಳ ಕಾಲ ಕೇವಲ ಶೇ.2 ಶುಲ್ಕ ಮಾತ್ರ ವಿಧಿಸಲಾಗುತ್ತದೆ. ಇದರಿಂದ ಜನರಿಗೆ ಶೇ.60 ರಷ್ಟು ರಿಯಾಯಿತಿ ಸಿಗಲಿದೆ,” ಎಂದು ತಿಳಿಸಿದರು. ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಸಾಮಾನ್ಯವಾಗಿ 5 ಲಕ್ಷ ರೂ. ಶುಲ್ಕ ಬರುತ್ತದೆ. ಹೊಸ ಯೋಜನೆಯಡಿ ಅದು 2 ಲಕ್ಷ ರೂ.ಗೆ ಇಳಿಕೆಯಾಗಲಿದೆ ಎಂದು…
Category: ಬೆಂಗಳೂರು
ಇವಿ ಚಾರ್ಜಿಂಗ್ ಜಾಲ ನಿರ್ಮಾಣಕ್ಕೆ ಕೇಂದ್ರ ಬದ್ಧ: ಕುಮಾರಸ್ವಾಮಿ
ಬೆಂಗಳೂರು: ದೇಶದಲ್ಲಿ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸಲು ಆಧುನಿಕ ಹಾಗೂ ವಿಶ್ವಾಸಾರ್ಹ ಇವಿ ಚಾರ್ಜಿಂಗ್ ವ್ಯವಸ್ಥೆ ನಿರ್ಮಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ “ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರವ್ಯಾಪಿ ಇವಿ ಚಾರ್ಜಿಂಗ್ ಮೂಲಸೌಕರ್ಯ” ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪಿಎಂ ಇ-ಡ್ರೈವ್ ಯೋಜನೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವಾಹನ ಬಳಕೆಯನ್ನು ಸುಲಭ ಮತ್ತು ಕೈಗೆಟುಕುವಂತೆ ಮಾಡುವ ಸರ್ಕಾರದ ಸಂಕಲ್ಪದ ಭಾಗವಾಗಿದೆ ಎಂದರು. ಕರ್ನಾಟಕದಲ್ಲಿ ₹123.26 ಕೋಟಿ ವೆಚ್ಚದಲ್ಲಿ 1,243 ಇವಿ ಚಾರ್ಜರ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಇಲ್ಲಿಯವರೆಗೆ ವಿವಿಧ ರಾಜ್ಯಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ 4,874 ಇವಿ ಚಾರ್ಜರ್‌ಗಳ ಸ್ಥಾಪನೆಗಾಗಿ ₹503.86 ಕೋಟಿ ಮೌಲ್ಯದ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ. ಕರ್ನಾಟಕ,…
KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು ₹72.80 ಕೋಟಿ ಹಾಗೂ ವರ್ಷಕ್ಕೆ ₹873.64 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಸುಮಾರು 1.05 ಲಕ್ಷ ಸಿಬ್ಬಂದಿಗೆ ಈ ವೇತನ ಪರಿಷ್ಕರಣೆಯ ಲಾಭ ದೊರೆಯಲಿದೆ. ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಗೆ ಸಂಬಂಧಿಸಿದ 26 ತಿಂಗಳ ಹಿಂಬಾಕಿ ಮೊತ್ತ ₹1271.92 ಕೋಟಿಗಳ ಪೈಕಿ ಮೊದಲ ಕಂತಿನ ₹450 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದಲ್ಲದೆ, 2025ರ…
ನೀಟ್ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು: ನೀಟ್ ಪರೀಕ್ಷೆ ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದರು. “ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಒಂದಲ್ಲ ಒಂದು ಅಕ್ರಮ, ಗೊಂದಲಗಳು ನಡೆಯುತ್ತಲೇ ಇವೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಕಿಡಿಕಾರಿದರು. ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಈಗಾಗಲೇ ಹಲವು ಬಾರಿ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ ಮತ್ತೊಮ್ಮೆ ಭಾರೀ ಪ್ರಮಾದ ಸಂಭವಿಸಿದೆ ಎಂದು ಹೇಳಿದರು. ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಿ ಕಠಿಣ ಶಿಕ್ಷೆ ನೀಡಬೇಕು. ಇದು ಕೇಂದ್ರ ಸರ್ಕಾರದ…
ರಾಜ್ಯ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕ
ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ ಬೆಂಗಳೂರಿನ KIMS Hospital ನಲ್ಲಿ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ಅವರು, ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ನಂತರ ಅವರನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಡಿ. ಸುಧಾಕರ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ರಾಜಕೀಯದಲ್ಲಿ ಚತುರ ತಂತ್ರಗಾರರಾಗಿ ಗುರುತಿಸಿಕೊಂಡಿದ್ದರು. ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ರಾಜಕೀಯ ಮುಖಂಡರು ಮತ್ತು ಗಣ್ಯರು ಸಂತಾಪ…
ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ತಲಾ ಎರಡು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ವರುಣನ ಸಿಂಚನದ ನಿರೀಕ್ಷೆ ವ್ಯಕ್ತವಾಗಿದೆ. ಅದನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ತೀವ್ರ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಾಧ್ಯತೆಯಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಸಂಭವವಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯ ನಿರೀಕ್ಷೆ ಇದೆ.
ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ವಿವಾಹ ವಾರ್ಷಿಕೋತ್ಸವದ ದಿನವೇ ನಾಲ್ವರು ದುರ್ಮರಣ
ತುಮಕೂರು: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸ್ವರ್ಣಸಂದ್ರ ನಿವಾಸಿಗಳಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ಕುಮಾರ ನರಸಿಂಹಸ್ವಾಮಿ ಅವರು ನಿನ್ನೆ ಕುಟುಂಬದವರೊಂದಿಗೆ ತುಮಕೂರಿಗೆ ಬಂದಿದ್ದರು. ಇಂದು ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ಊರಿಗೆ ಹಿಂದಿರುಗುವ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಉತ್ತರ ಪಾಲಿಕೆ ಕಚೇರಿ; ಸ್ಥಳ ಪರಿಶೀಲನೆ ನಂತರ ತೀರ್ಮಾನ;
ಬೆಂಗಳೂರು: ಬೆಂಗಳೂರು ಉತ್ತರ ಪಾಲಿಕೆಯ ಹೊಸ ಕಚೇರಿ ನಿರ್ಮಾಣ ಮಾಡಬೇಕು ಎಂದು ಮೂರು- ನಾಲ್ಕು ಸ್ಥಳಗಳ ಪ್ರಸ್ತಾವನೆಯಿದೆ. ಸ್ಥಳ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕಿದೆ. ಇದರ ಬಗ್ಗೆ ಮಂತ್ರಿಗಳು, ಶಾಸಕರು ತಮ್ಮದೇ ಆದ ಅಭಿಪ್ರಾಯ ನೀಡಿದ್ದಾರೆ. ಸ್ಥಳ ಪರಿಶೀಲನೆ ನಂತರ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಕೆವಿಕೆಯಲ್ಲಿ ನಿರ್ಮಾಣ ಮಾಡಲಾಗುವುದೇ ಎಂದಾಗ, “ಇಲ್ಲ, ಸದ್ಯಕ್ಕೆ ಆ ಆಲೋಚನೆ ಇಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ಉತ್ತರಿಸಿದರು. ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಬೆಳಗಾವಿ ಜಿಲ್ಲೆಯ ಒಂದಷ್ಟು ನೀರಾವರಿ ಯೋಜನೆಗಳನ್ನು ಚರ್ಚೆ ನಡೆಸಲು ಭೇಟಿ ಮಾಡಿದ್ದರು”ಎಂದರು.
ವಿಕಲಚೇತನರಿಗೆ ಸಮಗ್ರ ಉದ್ಯೋಗ, ಕೌಶಲ್ಯ ವೇದಿಕೆ ಕಲ್ಪಿಸುವ “ಆದಿದ್ವಾರ” ಅಪ್ಲಿಕೇಶನ್ ಬಿಡುಗಡೆ
ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲು ಅವಕಾಶ ಒದಗಿಸುವ “ಆದಿದ್ವಾರ” ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಅಪ್ಲಿಕೇಷನ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂಗವಿಕಲರಿಗೆ (ಪಿಡಬ್ಲ್ಯೂಡಿಗಳು) ವಿಶೇಷ ಉದ್ಯೋಗ ಮೇಳವನ್ನು ಆಗಸ್ಟ್ 2026 ರಲ್ಲಿ ನಡೆಸಲಾಗುವುದು ಎಂದು ಘೋಷಿಸಿದರು. “ವಿಕಲಚೇತನರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್ ಸಂಸ್ಥೆಗಳು ನೇಮಕಾತಿಯ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ಮತ್ತು ಚಿಕಿತ್ಸೆಯನ್ನು ನೀಡಬೇಕು” ಎಂದು ಡಾ. ಪಾಟೀಲ್ ಹೇಳಿದರು. ಆದಿದ್ವಾರ ವೇದಿಕೆಯು ಉದ್ಯೋಗಾವಕಾಶಗಳು, ಇಂಟರ್ನ್‌ಶಿಪ್‌ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ. ಉದ್ಯೋಗದಾತರು ಸಮಗ್ರ…
ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಶಿವಕುಮಾರ್, ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು. ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು” ಎಂದರು. “ಮೊದಲು ಬಹುಮತ ಸಾಬೀತಿಗೆ…
