ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸಮಿತಿ ಸಂಚಾಲಕರು, ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು ಎಂಬ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಈ ಸಮಿತಿ ರಚನೆ ಮಾಡಿದ್ದಾರೆ. ಈ ಸಮಿತಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಉಳಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್…
Category: ಬೆಂಗಳೂರು
‘ವೈದ್ಯರ ಮರುಹೊಂದಾಣಿಕೆ ಹೊರತು ಆಸ್ಪತ್ರೆಗಳ ಮುಚ್ಚುವಿಕೆಯಲ್ಲ’; ಸರ್ಕಾರದ ಸ್ಪಷ್ಟನೆ
ಬೆಂಗಳೂರು: ‘ನಾವು ಯಾವುದೇ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳ ಬಗ್ಗೆ ಹಾಗೂ ಈ ಕುರಿತ ಮಾಧ್ಯಮ ವರದಿಗಳನ್ನು ಮುಂದಿಟ್ಟು ಪ್ರತಿಪಕ್ಷಗಳು ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ನಾಯಕರು ಅಧಿಕಾರಕ್ಕಾಗಿ ಹತಾಶೆಗೊಂಡು ಇಷ್ಟೊಂದು ಕೆಳಮಟ್ಟದ ಸುಳ್ಳು ಸುದ್ದಿಗಳನ್ನು ಹರಡುವುದು ಶೋಭೆ ತರುವಂತದ್ದಲ್ಲ. ‘ನಾವು ಯಾವುದೇ ಸರ್ಕಾರಿ ಆಸ್ಪತ್ರೆಯನ್ನು ಮುಚ್ಚುತ್ತಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಜನರ ದಾರಿ ತಪ್ಪಿಸುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ’ ಎಂದು ಅವರು ಹೇಳಿದ್ದಾರೆ. ‘ನಮ್ಮ ಗುರಿ ಬಡವರ ಜೀವ ಉಳಿಸುವುದು, ಸುಳ್ಳು ಹೇಳುವುದಲ್ಲ’ ಎಂದು ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದಿಗೂ ಬಡವರ ಪರವಾಗಿದೆ. ನಾವು ಮಾಡುತ್ತಿರುವುದು ವೈದ್ಯರ…
ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ; ಸಿದ್ದರಾಮಯ್ಯ
ಬೆಂಗಳೂರು: ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ. ಬಿಜೆಪಿ ನಾಯಕರ ಜಾಣಮೌನಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದವರು ಹೇಳಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿಯ ಬಸ್ ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.
ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ..
ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ…
ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತದಲ್ಲಿ ವಿದ್ಯಾರ್ಥಿಗಳು ಪಾರು
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, “ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am… A container crossed the divider and hit a moving bus… Three people are missing… Hopefully, they are alive… One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv — ANI (@ANI) December 25, 2025 ಕಂಟೇನರ್…
ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf — Ramalinga Reddy (@RLR_BTM) December 25, 2025 ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ…
ಬೆಂಗಳೂರಿಗೆ ಬರಲಿದೆ ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್
ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ ಭವಿಷ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾದ ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲ್ವೆ ಟರ್ಮಿನಲ್ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ₹6,000 ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಮಹತ್ವದ ಯೋಜನೆಯು 20 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, 16 ಅತ್ಯಾಧುನಿಕ ವೇದಿಕೆಗಳು, 10 ಸ್ಥಿರ ಮಾರ್ಗಗಳು ಹಾಗೂ 15 ಪಿಟ್ ಮಾರ್ಗಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಅಲ್ಲದೆ, ಮೆಟ್ರೋ ಸೇವೆಯೊಂದಿಗೆ ತಡೆರಹಿತ ಏಕೀಕರಣವೂ ಈ ಟರ್ಮಿನಲ್‌ನ ಪ್ರಮುಖ ವೈಶಿಷ್ಟ್ಯವಾಗಿರಲಿದೆ. ಈ ಹೆಗ್ಗುರುತು ಯೋಜನೆಯಿಂದ ಉತ್ತರ ಬೆಂಗಳೂರಿನ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಈಗಿರುವ ರೈಲ್ವೆ ಟರ್ಮಿನಲ್‌ಗಳ ಮೇಲಿನ…
ನಾಯಕತ್ವ ಬದಲಾವಣೆ ವಿಚಾರ; ಖರ್ಗೆ ಹೇಳಿಕೆಗೆ ಸಿಎಂ ಸಹಮತ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದ ಸಿಎಂ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?
ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ…
