ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ

ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? – ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ — Janata Dal Secular (@JanataDal_S) December 22, 2025

ದೆಹಲಿ ಪೊಲೀಸರ ನೋಟಿಸ್ ಬಗ್ಗೆ ಕೋರ್ಟ್ ಮೊರೆಹೋಗಲು ಡಿ.ಕೆ.ಶಿವಕುಮಾರ್ ನಿರ್ಧಾರ

ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ‌ ಬೇಕಾದಷ್ಟು ‌ಪ್ರಕರಣಗಳನ್ನು ದಾಖಲಿಸಿತ್ತು.‌ ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು” ಎಂದರು. “ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ.…

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100…

ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್‌ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು. ಸರ್ಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಇಷ್ಟು ಮಾತ್ರ ನಾನೂ ಹೇಳಬಲ್ಲೇ ಎಂದು…

ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಮಿತಿ ಮೀರಿದೆ: ಬಿಜೆಪಿ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶನಿವಾರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಸುಮಾರು 15–20 ಲಕ್ಷ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಅಂದಾಜುಗಳಿದ್ದು, ಅವರನ್ನು ಗಡೀಪಾರು ಮಾಡುವ ಬದಲು ಕಾಂಗ್ರೆಸ್ ಸರ್ಕಾರವು “ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿದೆ” ಎಂದು ಆರೋಪಿಸಿದರು. ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತಿದ್ದಾರೆ; ಅವರ ವಿರುದ್ಧ ಕ್ರಮ ಕೈಗೊಳ್ಳುವಾಗಲೆಲ್ಲ ಕಾಂಗ್ರೆಸ್ ಮೃದು ಧೋರಣೆ ತಾಳುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಗಿಡಲು ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ವ್ಯಾಯಾಮವನ್ನು ಉಲ್ಲೇಖಿಸಿದ ಅಶೋಕ, ಈ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ‘ಮತ ಕಳ್ಳತನ’ ಎಂಬ ನೆಪದಲ್ಲಿ…

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ”…

ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿ ಶೀಘ್ರ ಪೂರ್ಣ; ಡಿಕೆಶಿ ಭರವಸೆ

ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಡಿ.ಕೆ.ಶಿವಕುಮಾರ್‌ ಉತ್ತರಿಸಿದರು. ವಾರಾಹಿ ಯೋಜನೆಯಡಿ ಮೂಲ ಯೋಜನೆಯ ಅಚ್ಚುಕಟ್ಟು ವಿಸ್ತ್ರೀರ್ಣದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಯೋಜನೆಯನ್ನು ಮಾರ್ಪಡಿಸಲಾಗಿದ್ದು, ₹569.53 ಕೋಟಿ ಅಂದಾಜು ಮೊತ್ತದ ಯೋಜನಾ ವರದಿಗೆ 20.03.2006ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು. ಈ ಯೋಜನೆಯು ಪಶ್ಚಿಮ ಘಟ್ಟದ ಕೆಳಭಾಗ ಮತ್ತು ಕರಾವಳಿ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಪ್ರಥಮ ಬೃಹತ್ ನೀರಾವರಿ ಯೋಜನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹಲವಾರು ತಾಂತ್ರಿಕ ಅಡಚಣೆಗಳು ಎದುರಾಗಿರುತ್ತವೆ. ಪ್ರಸ್ತಾಪಿತ ಯೋಜನೆಯ ಯೋಜಿತ ರೂಪುರೇಷೆಗೆ ಅನುಗುಣವಾಗಿ ಮತ್ತು ನಿಗದಿತ ನೀರಾವರಿ ಸಾಮರ್ಥ್ಯ ಕಲ್ಪಿಸುವಿಕೆಗೆ ಪೂರಕವಾಗಿ ಕಾಲಕಾಲಕ್ಕೆ,…

ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್‌ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ…

ಮುಡಾ ಪ್ರಕರಣ:; ಡಿಸೆಂಬರ್ 23 ತೀರ್ಪು ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋಪಿ ಸಂಖ್ಯೆ 1…