ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

ಬೆಳಗಾವಿ: ರಾಜ್ಯದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರ ನೀಡಿದರು. ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ ಎಂದು ತಿಳಿಸಿದರು. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು…

‘ಗೃಹಲಕ್ಷ್ಮಿ’ ಕಂತು ವಿಳಂಬ: ಸಚಿವೆ ಹೆಬ್ಬಾಳ್ಕರ್–ಬಿಜೆಪಿ ನಡುವೆ ವಾಕ್ಸಮರ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿದ ಅವರು, ತಾವು ಮಹಿಳೆಯಾಗಿರುವುದರಿಂದ ಪ್ರತ್ಯೇಕವಾಗಿ ಟೀಕಿಸಲಾಗುತ್ತಿದೆ ಎಂದು ಹೇಳಿದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ತಲಾ 2,000 ರೂ.ಗಳ ಎರಡು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ ಬಿಜೆಪಿ, ಸಚಿವೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಸದನದ ಸದಸ್ಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿದರು. ಆದರೆ ಇದು ಸದಸ್ಯರ ಭಾವನೆಗಳ ವಿಷಯವಲ್ಲ, ಫಲಾನುಭವಿಗಳಿಗೆ ಕ್ಷಮೆಯಾಚಿಸದಿರುವುದೇ ಪ್ರಶ್ನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ನಂತರ ಸಚಿವೆ ಕ್ಷಮೆಯಾಚಿಸಿದರೂ,…

‘ನೀರಿದ್ದರೆ ನಾಳೆ’ ಯೋಜನೆಯ ಕರಪತ್ರ ಬಿಡುಗಡೆ

ಬೆಳಗಾವಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಬುಧವಾರ ರಾಜ್ಯದ ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳ ಕಾರ್ಯಾಗಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯಾಗಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಕೆರೆ ಬಳಕೆದಾರರ ಸಂಘಗಳ ಕಾರ್ಯಾಗಾರದ ಕೈಪಿಡಿ ಹಾಗೂ ‘ನೀರಿದ್ದರೆ ನಾಳೆ’ ಯೋಜನೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ರಾಜ್ಯದಲ್ಲಿ ಸುಮಾರು 44 ಸಾವಿರ ಕೆರೆಗಳಿದ್ದು, ಅವುಗಳಲ್ಲಿ 20 ಸಾವಿರಕ್ಕೂ ಹೆಚ್ಚು ಕೆರೆಗಳು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆರೆಗಳ ಸರ್ವೇ, ಒತ್ತುವರಿ ತೆರವು ಹಾಗೂ ಪುನಶ್ಚೇತನಕ್ಕೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ತಿಳಿಸಲಾಯಿತು. ಸಾಂಪ್ರದಾಯಿಕ ನೀರಿನ ಮೂಲಗಳಾದ ಕೆರೆಗಳ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಬೇಕು. ಈ ಹಿನ್ನೆಲೆ ಕಾರ್ಯಾಗಾರದಲ್ಲಿ ಕೆರೆಗಳ ಜತನ, ಸದ್ಬಳಕೆ ಹಾಗೂ…

ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ; ಮಧು ಬಂಗಾರಪ್ಪ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೊತೆಗೆ ಉತ್ತಮ ಅಂಕಗಳನ್ನು ವೃದ್ಧಿಸಿಕೊಂಡು, ಪೂರ್ಣಾಂಕಗಳನ್ನು ಪಡೆದಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಮೂರು ಬಾರಿ ಪರೀಕ್ಷೆ’ ಎಂಬ ವಿನೂತನ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಸಾಗುವಲ್ಲಿ ಯಶಸ್ವಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದಿರುವ ಸಚಿವ ಮಧು ಬಂಗಾರಪ್ಪ, ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ ಎಂದಿದ್ದಾರೆ.

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ.…

ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಬೆಂಗಳೂರು: “ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…

ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ…

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ.…