ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ…

“77 ವರ್ಷಗಳ ನಂತರವೂ ದಲಿತರಿಗೆ ನ್ಯಾಯ ತಲುಪಿಲ್ಲ”

ದಲಿತರ ಮೇಲಿನ ದೌರ್ಜನ್ಯಗಳ ಖಂಡನೆ: ಸಂಘಟನೆಗಳ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ಅನ್ಯಾಯ, ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ, ಹಲವಾರು ದಲಿತ ಸಂಘಟನೆಗಳ ಒಕ್ಕೂಟ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ತಮಟೆ ಚಳುವಳಿಯನ್ನು ನಡೆಸಿತು. ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ಜೈ ಮಾದಿಗರ ಬೌದ್ಧಿಕ ವೇದಿಕೆ ಹಾಗೂ ಜೈಭೀಮ್ ದಲಿತ ಭೂ ರಕ್ಷಣಾ ವೇದಿಕೆಗಳು, ತಮ್ಮ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಬಿ.ಆರ್. ಮುನಿರಾಜರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ವಿವಿಧ ಇಲಾಖೆಗಳು ದಲಿತರ ವಿರುದ್ಧ ತೋರಿಸುತ್ತಿರುವ ‘ವ್ಯವಸ್ಥಿತ ಅನ್ಯಾಯ’ಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಿದವು. ಖಾಸಗಿವಾಗಿ, ಕಂದಾಯ ಇಲಾಖೆಯ ಭೂದಾಖಲೆಗಳ ಉಪ ನಿರ್ದೇಶಕರಾದ ಸುಜಯ್ ಕುಮಾರ್, ಶ್ರೀನಿವಾಸ್ ಮತ್ತು ಭಾನುಪ್ರಕಾಶ್‌ ವಿರುದ್ಧ “ದಲಿತ ವಿರೋಧಿ ನಿಲುವು ಮತ್ತು ಅಕ್ರಮ” ಆರೋಪಿಸಿ, ಅವರನ್ನು ಅಮಾನತು…

ರೌಡಿಶೀಟರ್ ಗಳನ್ನು ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ…

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ ತಮಲೇಹಳ್ಳಿ, ಗೌಡಗೊಂಡನಹಳ್ಳಿ, ಕೆಳಗೋಟೆ, ಚಿಕ್ಕಮ್ಮನಹಟ್ಟಿ, ಹಿರೇಬನ್ನಿಹಟ್ಟಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಸೇರಿ ಎಇಇ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು. ಯುವ ಮುಖಂಡ ತಮಲೇಹಳ್ಳಿ ಶ್ರೀನಿವಾಸ್ ಮಾತನಾಡಿ, “ಕೊಂಡಕುರಿ ಅಂಚಿನಲ್ಲಿರುವ ಹಲವು ಗ್ರಾಮಗಳ ರೈತರು ರಾತ್ರಿ ವೇಳೆ ಜಮೀನಿಗೆ ತೆರಳುವುದೇ ಭಯ. ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವುದರಿಂದ ರಾತ್ರಿ ಬದಲಿಗೆ ಹಗಲಿನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಎಇಇ ಮಲ್ಲಿಕಾರ್ಜುನ್, “ಸೊಕ್ಕೆ–ಪಲ್ಲಾಗಟ್ಟೆ ಮಾರ್ಗದ ವಿದ್ಯುತ್ ಸಂಪರ್ಕವನ್ನು ಬೇರ್ಪಡಿಸಿ, ತುರವನೂರು ಮಾರ್ಗದಿಂದ ಲಿಂಕ್ ಲೈನ್ ಮೂಲಕ ಬೆಳಗಿನ ವೇಳೆಯಲ್ಲಿ ವಿದ್ಯುತ್ ಪೂರೈಸಲು ಕ್ರಮಜರುಗಿಸಲಾಗುತ್ತಿದೆ. ಬುಧವಾರದೊಳಗಾಗಿ ಪರಿಷ್ಕೃತ ವ್ಯವಸ್ಥೆ ಜಾರಿಗೆ ಬರಲಿದೆ”…

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ. A teacher from Agra was fined for not wearing helmet inside a car Post that incident, he now wears a helmet Magical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ ನೀಡುತ್ತಾ, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು…

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ…ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿಯವರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ ಸಂಕಷ್ಟದಲ್ಲಿದ್ದ ಮೆಕ್ಕೆ ಜೋಳ ಬೆಳೆಯುವ ರೈತರ ಪರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ ರೂ. 2400 ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ…

ಕಿದ್ವಾಯಿ ಆಸ್ಪತ್ರೆಯಲ್ಲಿ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಯಿತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ತದನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು. ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್,…

ಮಾತು ಮರೆತ ಸರ್ಕಾರದ ವಿರುದ್ಧ ಆಶಾ ಸಮರ; ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು “ಬೃಹತ್ ಬೆಳಗಾವಿ ಚಲೋ” ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ…