ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ ವಿಚಾರ ಚರ್ಚಿಸಿ; ವಿಜಯೇಂದ್ರ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು…

2025-26ರಲ್ಲಿ ರಾಜ್ಯದಲ್ಲಿ 1,20,000 ಕೋ.ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ. ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ…

ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

ಬೆಂಗಳೂರು: ಸರ್ಕಾರಿ ವ್ಯವಸ್ಥೆಯಲ್ಲಿ ಮಹಿಳಾ ನೌಕರರ ಮಹತ್ವದ ಪಾತ್ರವನ್ನು ಗೌರವಿಸಲು ಸೆಪ್ಟೆಂಬರ್ 13 ಅನ್ನು ‘ಮಹಿಳಾ ನೌಕರರ ದಿನ’ವಾಗಿ ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಗುರುವಾರ ಆಯೋಜಿಸಿದ್ದ ಮಹಿಳಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸರ್ಕಾರದ ನಿರ್ಧಾರವನ್ನು ಪುನರುಚ್ಚರಿಸಿದರು. ಸಂಘದ ಕಚೇರಿಗೆ ಮತ್ತು ಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ ಎಂದೂ ಹೇಳಿದರು. ಮಹಿಳೆಯರು ಪುರುಷರಷ್ಟೇ ಸರ್ಕಾರಕ್ಕೆ ಸೇವೆ ಮಾಡುತ್ತಿದ್ದು, ಆಡಳಿತದ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಲಿಂಗ ಅಸಮಾನತೆಯನ್ನು ನಿವಾರಿಸಿ ಸಮಾನತೆ ಸ್ಥಾಪಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಸ್ವಾತಂತ್ರ್ಯಕ್ಕೆ…

63% ಭ್ರಷ್ಟಾಚಾರ ಆರೋಪ; ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ,…

ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

ತೆಲುಗಿನಲ್ಲಿ ಸಮಂತಾ ಜೊತೆ ಕೆಲಸ ಮಾಡುವ ಕಾಂತಾರ ನಟನ ಕನಸು ನನಸು!

ಮುಂಬೈ: ಕನ್ನಡದ ಕಾಂತಾರ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ, ಬಳಿಕ ಆರ್.ಮಾಧವನ್ ಜೊತೆ ತಮಿಳು ವೆಬ್‌ಸೀರಿಸ್ ಲೆಗಸಿಗೆ ಸಜ್ಜಾಗಿರುವ ನಟ ಗುಲ್ಶನ್ ದೇವಯ್ಯ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ಸಮಂತಾ ರುತ್‌ ಪ್ರಭು ಅಭಿನಯದ ಮಾ ಇಂತಿ ಬಂಗಾರಂ ಅವರ ಮೊದಲ ತೆಲುಗು ಚಿತ್ರ. ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಪಾತ್ರವಹಿಸಿರುವುದಕ್ಕೆ ದೇವಯ್ಯ ಆನಂದ ವ್ಯಕ್ತಪಡಿಸಿದ್ದಾರೆ. “ಸಮಂತಾ ಜೊತೆ ಕೆಲಸ ಮಾಡುವ ಆಸೆ ನನಗಿನ್ನೂ ಹಲವು ವರ್ಷಗಳಿಂದಿತ್ತು. ಇದರೀಗ ಸರಿಯಾದ ಸಮಯದಲ್ಲಿ ನನಗೆ ಒದಗಿದೆ,” ಎಂದು ಅವರು ಮಾಧ್ಯಮ ಸಂದರ್ಶನದಲ್ಲಿ ಹೇಳಿದರು. ಚಿತ್ರದ ಮುಹೂರ್ತ ವಿಧಿ ಇತ್ತೀಚೆಗೆ ನೆರವೇರಿತು. ಗುಲ್ಶನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಮುಹೂರ್ತ ಹಾಗೂ ಘೋಷಣೆ ವಿಡಿಯೊ ಹಂಚಿಕೊಂಡಿದ್ದು, ತೆಲುಗು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ. “MIBಯಲ್ಲಿನ ನನ್ನ ಪಾತ್ರಕ್ಕಾಗಿ ತೀವ್ರವಾಗಿ ತಯಾರಿ ನಡೆಸುತ್ತಿದ್ದೇನೆ. ಈಗಲೇ ಹೆಚ್ಚಿನ ವಿವರ…

ನ್ಯಾಯಾಲಯಗಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಿಯಾಂಕ್ ಮನವಿ; CSಗೆ ಪತ್ರ

ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಗೆ “ಆರ್ಟಿಕಲ್ 371ಜೆ“ ವರದಾನವಾಗಿದ್ದರೂ, ಸಮರ್ಪಕ ಅನುಷ್ಠಾನದಲ್ಲಿ ನಿಷ್ಠೆ ಇದ್ದರೆ ಮಾತ್ರ ವಿಶೇಷ ಸ್ಥಾನಮಾನದ ಆಶಯಗಳು ಈಡೇರಲಿದೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯದ ಮುಂದೆ ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 47 ಪ್ರಕರಣಗಳು ಬಾಕಿ ಇರುವುದರಿಂದ ಆರ್ಟಿಕಲ್ 371ಜೆ ಅಡಿಯಲ್ಲಿನ ನೇಮಕಾತಿ, ಮುಂಬಡ್ತಿ ವಿಷಯಗಳಲ್ಲಿ ಹಿನ್ನೆಡೆ ಉಂಟಾಗಿದೆ. ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಪಡಿಸಲು…

ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಅವರ ಸಂಗಾತಿ ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲೇ ಬಂಧನದಲ್ಲಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲು, ನಿರ್ದೇಶಕ ಪ್ರಕಾಶ್ ವೀರ್ ಹಾಗೂ ಚಿತ್ರದ ತಂಡ ಮಂಗಳವಾರ ನಗರದೊಳಗೆ ಪತ್ರಿಕಾಗೋಷ್ಠಿ ನಡೆಸಿತು. ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದ ಅವಧಿಯಲ್ಲಿ ಚಿತ್ರೀಕರಣ ಹಾಗೂ ಡಬ್ಬಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದ್ದರು ಎಂದು ನಿರ್ದೇಶಕ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ವೀರ್, “ಚಿತ್ರದ ಶೀರ್ಷಿಕೆಗೆ ಕಥೆಯೇ ಆಧಾರ. ದರ್ಶನ್ ಶೇ.100 ವೃತ್ತಿಪರರು. ಜೈಲಿನಿಂದ ಹೊರಬಂದು ಚಿತ್ರೀಕರಣಕ್ಕೆ ಬಂದಾಗಲೂ ಅವರ ಅಭಿನಯದಲ್ಲಿ ಯಾವುದೇ ಅಸಮಾನ್ಯತೆ ಕಾಣಿಸಲಿಲ್ಲ” ಎಂದರು. ‘ದರ್ಶನ್ ಬಿಡುಗಡೆಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವು ಹಲವು ಬಾರಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ. ಆದರೆ, ದುರದೃಷ್ಟವಶಾತ್ ಅವರು ಇಂದು…

ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್‌.ವಿ. ದೇವರಾಜ್ (67) ಅವರು ವಿಧಿವಶರಾಗಿದ್ದಾರೆ. ಡಿಸೆಂಬರ್ 3ರಂದು ತಮ್ಮ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ದೇವರಾಜ್ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಆರ್‌.ವಿ. ದೇವರಾಜ್ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಿರಿಯ ನಾಯಕರು ಮಾಜಿ ಶಾಸಕ ಶ್ರೀ ಆರ್. ವಿ. ದೇವರಾಜ್ ನಿಧಾನ ಬಗ್ಗೆ ಕಾಂಗ್ರೆಸ್ ನಾಯಕ ಹೆಚ್.ಎಂ.ರೇವಣ್ಣ ದುಃಖ ವ್ಯಕ್ತಪಡಿಸಿದ್ದಾರೆ. ಪಕ್ಷದ ತತ್ವಗಳಿಗೆ ಅಚಲ ಬದ್ಧತೆ, ಜನಪರ ನಿಲುವು ಮತ್ತು ನೆಲಬದ್ಧ ರಾಜಕೀಯವೇ ಅವರ ಬದುಕಿನ ಗುರುತು ಎಂದು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿರುವ ರೇವಣ್ಣ, ಈ…

ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು…