ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದವರು ಸ್ಪಷ್ಟಪಡಿಸಿದರು.
Category: ಬೆಂಗಳೂರು
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ; 10 ಕಡೆ ದಾಳಿ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್…
ಬಿಜೆಪಿಯಲ್ಲಿ ಸಿಎಂ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಹೇಳಿದ್ದರು; ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ?…
JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.
ಭೂಸ್ವಾಧೀನ ಲೋಪಗಳ ಬಗ್ಗೆ ತನಿಖೆ: ಸರ್ಕಾರದಿಂದ ಕಠಿಣ ಕ್ರಮದ ಸೂಚನೆ
ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು. “ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ ವಿಶೇಷ ತನಿಖಾ…
“ಯಾವುದೇ ಆಪತ್ತು ಬಂದರೂ NDA ಮೈತ್ರಿ ಮುರಿಯದು”: ದೇವೇಗೌಡ
ಬೆಂಗಳೂರು: “ರಾಷ್ಟ್ರೀಯ ಜನತಾ ದಳ (ಎಸ್) ಪಕ್ಷ ಹಾಗೂ ಎನ್‌ಡಿಎ ಮೈತ್ರಿ ಅಟಲ್! ಯಾವುದೇ ಸಂದರ್ಭದಲ್ಲೂ ಮೈತ್ರಿಯನ್ನು ಮುರಿಯುವ ಪ್ರಶ್ನೆ ಬರುವುದಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ನಮ್ಮ ಕಾರ್ಯಕರ್ತರು ಇದನ್ನು ಎಂದಿಗೂ ಮರೆಯಬಾರದು’ ಎಂದರು. ‘ಉತ್ತರದಲ್ಲಿ ಜೆಡಿ(ಯು), ದಕ್ಷಿಣದಲ್ಲಿ ಜೆಡಿ(ಎಸ್)’ ಎಂದು ಘೋಷಿಸಿದ ದೇವೇಗೌಡ, ‘ಅಲ್ಲಿ ನಿತೀಶ್ ಕುಮಾರ್ ಇದ್ದಾರೆ, ಇಲ್ಲಿ ಕುಮಾರಸ್ವಾಮಿ ಇದ್ದಾರೆ’ ಎಂದು ಪಕ್ಷದ ಬಲವನ್ನು ಹಿರಿಮೆಗೇರಿಸಿದರು. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಸಿದ್ದರಾಮಯ್ಯ ಅವರು “ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗಲಿಲ್ಲ” ಎಂಬ ಹೇಳಿಕೆಯನ್ನು ಕಟುವಾಗಿ ತಳ್ಳಿ ಹಾಕಿದ ಗೌಡರು, “ನಾನು ಸ್ವತಃ…
ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ; ಬಿಜೆಪಿ ಗರಂ
ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ. ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ @siddaramaiah ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ… pic.twitter.com/HPsBKWbvFG — BJP Karnataka (@BJP4Karnataka) November 22, 2025 ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ…
ರಾಜ್ಯದ ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ: ಬಿಜೆಪಿ ಟೀಕೆ
ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್ ಹೈಕಮಾಂಡ್‌ಗೆ ಇಲ್ಲ…
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ
ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.
