‘ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಕುರಿತಾಗಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ‘ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವೇ ಇಲ್ಲ. ಎಲ್ಲವೂ ಸುಗಮವಾಗಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪಕ್ಷದೊಳಗೆ ಗೊಂದಲ ಇದ್ದಿದ್ದರೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದು. ಅಗತ್ಯವಿಲ್ಲದ ಕಾರಣ ಇದುವರೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿಲ್ಲ” ಎಂದರು. ಹಲವಾರು ಸಚಿವರು ಮತ್ತು ಶಾಸಕರು ದೆಹಲಿಗೆ ಭೇಟಿ ನೀಡಿ ನಡೆಸಿದ “ಭೋಜನ ಸಭೆ” ರಾಜಕೀಯ ಚರ್ಚೆಗೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೇ ದೆಹಲಿಗೆ ಹೋದರೂ ತಮ್ಮ ವೈಯಕ್ತಿಕ ಅಥವಾ ಆಡಳಿತಾತ್ಮಕ ಕೆಲಸಗಳಿಗಾಗಿ ಹೋಗಿದ್ದಾರೆ. ರಾಜಕೀಯ ಕಾರಣವೇನೂ ಇಲ್ಲ ಎಂಬುದನ್ನು ಅವರು ಈಗಾಗಲೇ ವಿವರಿಸಿದ್ದಾರೆ” ಎಂದರು. ದೆಹಲಿಯಲ್ಲಿ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವರದಿಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ದೆಹಲಿಗೆ ಹೋದಾಗ ಪಕ್ಷದ…

ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್‌ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು. ‘ಕಾಂಗ್ರೆಸ್…

ಪೊಲೀಸ್’ಗೂ ದರೋಡೆಗೂ ನಂಟು? ಪೇದೆ ಸೇರಿ ಇಬ್ಬರ ವಶ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ ವಿಶೇಷ ತಂಡಗಳು ದರೋಡೆ ಕೃತ್ಯಕ್ಕೆ ಸಂಬಂಧಿಸಿದ ಸುಳಿವುಗಳನ್ನು ಪತ್ತೆಹಚ್ಚಿ ಶಂಕಿತರನ್ನು ವಶಕ್ಕೆ ಪಡೆದಿವೆ. ನವೆಂಬರ್‌ 20ರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್‌ಸ್ಟೆಬಲ್‌ನ್ನು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿಯು ಕೇರಳ ಮೂಲದವನು ಎನ್ನಲಾಗಿದೆ. ಆತ ಇತ್ತೀಚೆಗೆ CMS ಇನ್‌ಫೋ ಸಿಸ್ಟಮ್ಸ್ ಲಿಮಿಟೆಡ್‌ ಸಂಸ್ಥೆಗೆ ರಾಜೀನಾಮೆ ನೀಡಿರುವ ಮಾಜಿ ಉದ್ಯೋಗಿ ಎಂಬುದು ತಿಳಿದು ಬಂದಿದೆ. ದರೋಡೆಗೆ ಗುರಿಯಾದ ವಾಹನ ಇದೇ ಕಂಪನಿಗೆ ಸೇರಿದ್ದೇ ಎಂಬ ಬಗ್ಗೆ ತನಿಖೆ ಬಿರುಸುಗೊಂಡಿದೆ. ಮೂಲಗಳ ಪ್ರಕಾರ, ಬಂಧಿತ ಇಬ್ಬರೂ ಕಳೆದ ಆರು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿದ್ದು, ದರೋಡೆ ಯೋಜನೆಯನ್ನು ಸೂಕ್ಷ್ಮವಾಗಿ ರೂಪಿಸಿದ್ದರು. ಘಟನೆಯ ಸುಮಾರು…

ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪಿಆರ್‌ಒ ಹರೀಶ್ ಅರಸ್, ಮನು, ನಿತಿನ್, ಮಹೇಶ್ ಗುರು ಮತ್ತು ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುಷ್ಪಾ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರದ ಪ್ರಚಾರಕ್ಕಾಗಿ ಆರೋಪಿಗಳು ಒಟ್ಟು 64 ಲಕ್ಷ ರೂ. ಪಡೆದಿದ್ದರೂ, ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದೆ, ಬದಲಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್‌ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪುಷ್ಪಾ, “ಚಿತ್ರದ ಪ್ರಚಾರಕ್ಕಾಗಿ ಆರಂಭದಲ್ಲಿ 23 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ ಹರೀಶ್ ಅರಸ್, ನಂತರ ಚಿತ್ರ ಚಿತ್ರೀಕರಣದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಹಣ ಪಡೆದಿದ್ದರು. ಚಿತ್ರ ಬಿಡುಗಡೆ ಹಂತಕ್ಕೆ ಬಂದಾಗ, ಲೆಕ್ಕಪತ್ರಗಳನ್ನು ಕೇಳಿದ ನಿರ್ದೇಶಕರಿಗೆ ‘ಪ್ರಚಾರ ನಿಲ್ಲಿಸುತ್ತೇವೆ’ ಎಂದು ಬೆದರಿಕೆ…

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7 ಕೋಟಿ ರೂಪಾಯಿ ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಜೆ.ಪಿ.ನಗರದ ಬ್ಯಾಂಕ್‌ ಶಾಖೆಯಿಂದ ಎಟಿಎಂಗಳಿಗೆ ನಗದು ಸಾಗಿಸುತ್ತಿದ್ದ ವ್ಯಾನನ್ನು ಜಯನಗರ ಅಶೋಕ ಪಿಲ್ಲರ್ ಬಳಿ ತಡೆದು ದಾಖಲೆ ಪರಿಶೀಲನೆ ನೆಪದಲ್ಲಿ ಜಾಲಾಡಿದ್ದಾರೆ ಎನ್ನಲಾಗಿದೆ. ಭಾರತ ಸರ್ಕಾರದ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಸಿಬ್ಬಂದಿಯನ್ನು ಬೆದರಿಸಿ, ನಗದು ತುಂಬಿದ ಚೀಲಗಳೊಂದಿಗೆ ತಮ್ಮ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಡೈರಿ ಸರ್ಕಲ್ ಬಳಿ ಸಿಬ್ಬಂದಿಯನ್ನು ಇಳಿಸಿ, ಸುಮಾರು 7 ಕೋಟಿ ರೂ.ಗಳಷ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಸಲೀಂ ಅವರಿಗೆ ಸೂಚಿಸಿದ್ದಾರೆ. ಘಟನೆಯ ನಂತರಸರಣಿ ಸಭೆಗಳನ್ನು ನಡೆಸಿ,…

ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕ್ಕೆ ಯು.ಜಿ.ಸಿ ಮಾನ್ಯತೆ

ಬೆಂಗಳೂರು: ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಇದೀಗ ಮತ್ತೊಂದು ಹಿರಿಮೆ ದೊರೆತಿದೆ.. ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರ ಕಾಳಜಿ ಹಾಗು ಶ್ರಮದ ಹಿನ್ನಲೆ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೋಂದು ಹಿರಿಮೆಗೆ ಸಾಕ್ಷಿಯಾಗಿದೆ. ಯು.ಜಿ.ಸಿ‌ ಅಧಿನಿಯಮದ ಪ್ರಕಾರ, ರಾಷ್ಟ್ರದಲ್ಲಿ ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕೃಷಿ ವಿಶ್ವವಿದ್ಯಾಲಯ ಮಂಡ್ಯವನ್ನು ಸಹ ಅಧಿಕೃತವಾಗಿ ಸೇರಿಸಿ ದಿನಾಂಕ 18:11:2025 ರಂದು ಯು.ಜಿ.ಸಿ ಯು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯಂತೆ ಇನ್ನೂ ಮುಂದೆ ವಿಶ್ವವಿದ್ಯಾಲಯ ನೀಡಲಿರುವ ಕೃಷಿ ಆಧಾರಿತ ಪದವಿಗಳಿಗೆ ಯು.ಜಿ.ಸಿ ಮಾನ್ಯತೆ ನೀಡಿದಂತಾಗುತ್ತದೆ. ಕೃಷಿ ವಿ.ವಿ ಮಂಡ್ಯವು ತನ್ನ ಎಲ್ಲಾ ಶೈಕ್ಷಣಿಕ, ಅಭಿವೃದ್ಧಿ, ಮಾನವ ಸಂಪನ್ಮೂಲ ಹಾಗೂ ಮೂಲಸೌಕರ್ಯಗಳ ನಿರ್ವಹಣೆಗೆ ಯು.ಜಿ.ಸಿಯ ಹಾಗೂ ICAR ನಿಯಮವಳಿ ಅನ್ವಯ ಹಾಗೂ ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ತನ್ನ ಕಾರ್ಯವನ್ನು ನಿಭಾಯಿಸುವಂತಾಗುವುದು. ಮಂಡ್ಯ ಕೃಷಿ ವಿಶ್ವವಿದ್ಯಾಲಯ…

ಉಪಮುಖ್ಯಮಂತ್ರಿಯಾದ ದಿನವೇ KPCC ಅಧ್ಯಕ್ಷ ಸ್ಥಾನ ತೊರೆಯಲು ನಿರ್ಧರಿಸಿದ್ದ ಡಿ.ಕೆ.ಶಿವಕುಮಾರ್

ಬೆಂಗಳೂರು: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್…

‘ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್: ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಕ್ರಮ’

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಹೊಸ ವಿವರವಾದ ಯೋಜನಾ ವರದಿ (ಡಿಪಿಆರ್) ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದ್ದಾರೆ. ಪಾಟಿಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಆದೇಶದ ನಂತರ ಯೋಜನೆಯನ್ನು ಮುಂದುವರಿಸುವ ವಿಧಾನವನ್ನು ಇಂದು ಚರ್ಚಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶದ ಸಮಗ್ರ ವಿವರಗಳನ್ನು ಒಳಗೊಂಡ ಹೊಸ ಡಿಪಿಆರ್ ಅನಿವಾರ್ಯವಾಗಿದೆ. ಹಾರೋಬೆಲೆಯಲ್ಲಿ ಯೋಜನಾ ಕಚೇರಿಯನ್ನು ಈಗಾಗಲೇ ಆರಂಭಿಸಿದ್ದೇವೆ. ರಾಮನಗರದಲ್ಲಿ ಮುಖ್ಯ ಎಂಜಿನಿಯರ್ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗಳನ್ನು ತೆರೆಯಲಾಗುತ್ತಿದ್ದು, ಅಗತ್ಯ ಸಿಬ್ಬಂದಿಯನ್ನೂ ನಿಯೋಜಿಸುತ್ತೇವೆ” ಎಂದರು. ಹಿಂದಿನ ಡಿಪಿಆರ್ ಅನ್ನು ಸಿಡಬ್ಲ್ಯೂಎಂಎ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಹೊಸ ವರದಿ ಕಡ್ಡಾಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. “ಕಾನೂನಿನ…

KSRTCಗೆ ಪ್ರಸಕ್ತ ವರ್ಷ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆ

ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. 2025ರಲ್ಲಿ ರೂ.19.87 ಕೋಟಿ ವೆಚ್ಚದಲ್ಲಿ ಒಂದು ಎಕರೆ 20 ಗುಂಟೆ ನಿವೇಶನದಲ್ಲಿ ಆಧುನಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಚಿಕ್ಕಮಗಳೂರು ಸಾರಿಗೆ ವಿಭಾಗಕ್ಕೆ ಸೇರಿರುವ ಪ್ರಮುಖ ಸ್ಥಳಗಳಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ 01 ಎಕರೆ 7.5 ಗುಂಟೆ ವಿಸ್ತೀರ್ಣದಲ್ಲಿ 1958 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಬಸ್…

‘ಜೈಲಲ್ಲಿ ಚಳಿ ಹೆಚ್ಚಾಗಿದೆ; ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ, ಕಂಬಳಿ ಬೇಕು’ ಎಂದ ನಟ

ಬೆಂಗಳೂರು: ಅಭಿಮಾನಿ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬುಧವಾರ ಹೆಚ್ಚುವರಿ ಕಂಬಳಿಗಾಗಿ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ಸುದ್ದಿಯ ಕೇಂದ್ರದರು. ಚಳಿಯಿಂದಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು. CCH-57 ನ್ಯಾಯಾಲಯದಲ್ಲಿ ಹಾಜರಾದ ದರ್ಶನ್, “ಚಳಿಯಿಂದ ನಿದ್ರೆ ಆಗುತ್ತಿಲ್ಲ. ಜೈಲು ಅಧಿಕಾರಿಗಳು ಕಂಬಳಿ ಕೊಡುವುದಿಲ್ಲ, ಮನೆಯವರು ಕಳಿಸಿದ ಕಂಬಳಿಯನ್ನೂ ಅನುಮತಿಸಿಲ್ಲ” ಎಂದು ದೂರಿದರು. ನ್ಯಾಯಾಧೀಶರು ಈ ಹೇಳಿಕೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿ, ನ್ಯಾಯಾಲಯದ ಪದೇಪದೇ ಸೂಚನೆಗಳ ಹೊರತಾಗಿಯೂ ಜೈಲು ಅಧಿಕಾರಿಗಳು ಕಂಬಳಿಯನ್ನು ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಶೀತ ವಾತಾವರಣದಲ್ಲಿರುವ ಕೈದಿಗೆ ಕಂಬಳಿ ನೀಡದಿರುವುದು ಹೇಗೆ ನ್ಯಾಯಸಮ್ಮತ ಎಂದು ಗರಂ ಆದ ನ್ಯಾಯಾಧೀಶರು, ತಕ್ಷಣವೇ ಕಂಬಳಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಪ್ರಕರಣದ ಮತ್ತೊಬ್ಬ ಆರೋಪಿ ನಾಗರಾಜ್ ಕೂಡ “ಜೈಲಿನಲ್ಲಿ ಚಳಿ ಜಾಸ್ತಿ, ಆದರೆ ಕಂಬಳಿ ಕೊಡುತ್ತಿಲ್ಲ”…