ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು. #WATCH | Karnataka Chief Minister Siddaramaiah and Deputy CM DK Shivakumar hold a joint…
Category: ಬೆಂಗಳೂರು
ಪ್ರವಾಹದಿಂದ ಬೆಳೆ ಹಾನಿ; ಕೇಂದ್ರದ ತಂಡದಿಂದ ಶೀಘ್ರವೇ ಪರಿಶೀಲನೆ
ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು ಅದಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರಾಜ್ಯದ ರೈತರ ಖಾತೆಗಳಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸಲಾಗುತ್ತಿದೆ ಎಂದರು. ‘ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ…
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ
ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ ‘ಸಂವಿಧಾನ’ ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ ‘ಸಂವಿಧಾನ ಫಲಕ’ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ ‘ಸಂವಿಧಾನ ಓದು’ ಕಾರ್ಯಕ್ರಮದ ಜೊತೆಯಲ್ಲೇ…
ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ?
ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ *ಬೆಂಗಳೂರು, ನವೆಂಬರ್ 26* ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ…
ಬೆಂಗಳೂರು ದರೋಡೆ ಪ್ರಕರಣ; ಬಂಧಿತರ ಸಂಖ್ಯೆ 9ಕ್ಕೆ ಏರಿಕೆ
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಯೋಚನೆ ಸದ್ಯಕ್ಕಿಲ್ಲ; ಸಿದ್ದರಾಮಯ್ಯ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದವರು ಸ್ಪಷ್ಟಪಡಿಸಿದರು.
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ; 10 ಕಡೆ ದಾಳಿ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್…
ಬಿಜೆಪಿಯಲ್ಲಿ ಸಿಎಂ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಹೇಳಿದ್ದರು; ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ?…
JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.
