ಬೆಂಗಳೂರು: ‘ಯಾವ ಗ್ಯಾರಂಟಿ ಕೊಡದಿದ್ದರೂ ಸರ್ಕಾರ ರಾಜ್ಯದ ಜನರ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗೆ ಆದ್ಯತೆ ನೀಡಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ಪೆಟ್ಟು ಬೀಳಲಿದೆ ಎಂಬ ಮಾತು ಅಕ್ಷರಶಃ ಸತ್ಯ. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಒಂದೆಡೆಯಾದರೆ ಮತ್ತೊಂದೆಡೆ ಇರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಶೋಚನೀಯ ಹಂತ ತಲುಪಿರುವುದು ಆರ್ಥಿಕ ದಿವಾಳಿ ಅಂಚಿಗೆ ತಲುಪಿರುವ ಸರ್ಕಾರದ ದುಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ವಿಷಮೇಶಿಸಿದ್ದಾರೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ…
Category: ಬೆಂಗಳೂರು
ಗ್ಯಾರಂಟಿ ಅನುಷ್ಠಾನ ಸಮಿತಿ ವಿವಾದ: ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ?
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್ ಫೀಸ್ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ.…
ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ
ಬೆಂಗಳೂರು: ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್ಫಾರ್ಮ್ ವೇದಿಕೆಗಳು ಇನ್ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಈ ಸಂಬಂಧದ ವಿದೇಯಕವನ್ನು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿದೇಯಕ ಸೋಮವಾರ ಅಂಗೀಕಾರಗೊಂಡಿದೆ. ಮಸೂದೆ ಮಂಡಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಈ ಹಿಂದೆ ಸರ್ಕಾರ ಎಪಿಎಂಸಿ ಯಾರ್ಡ್‌ಗಳನ್ನು ಮಾತ್ರ ನಿಯಂತ್ರಿಸುತ್ತಿತ್ತು. ಆದರೆ ಈ ಕಾಮರ್ಸ್ ಕ್ಷೇತ್ರವನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಈ ಮಸೂದೆ ಕಾನೂನು ಆಗಿ ಜಾರಿಗೆ ಬಂದರೆ ಸೆಸ್ ಪಾವತಿಸದೆ ವ್ಯಾಪಾರ ಮಾಡುವುದನ್ನು ನಿಯಂತ್ರಿಸಲು ಈ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರು ಈ ಮಸೂದೆಯಿಂದಾಗಿ ಇ- ಪ್ಲಾಟ್ ಫಾರ್ಮ್’ಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಲೈಸನ್ಸ್, ಸೆಸ್ ನಿರ್ವಹಿಸುವ, ಅಮಾನತುಪಡಿಸುವ ಅಧಿಕಾರ ಎಪಿಎಂಸಿ ಅಧಿಕಾರಿಗಳಿಗೆ ಲಭಿಸಲಿದೆ.
ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಶಬಾನಾ ಆಜ್ಮಿ ಅವರಿಗೆ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು. ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಸಿಎಂ ಜೊತೆಗಿದ್ದರು. ಈ ಸಂದರ್ಭದ ಫೋಟೋಗಳನ್ನು ಸಿಎಂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು.
ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನಟಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು. ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು…
ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮೋಟಾರು ವಾಹನ ನಿರೀಕ್ಷಕರೊಬ್ಬರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಆರೋಪ ಕುರಿತಂತೆ ಸೂಕ್ತ ತನಿಖೆ ನಡೆಸುವಂತೆ ಸಚಿವರು ಆದೇಶಿಸಿದ್ದಾರೆ. ಆ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಮಂಡ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು, ಆರೋಪಕ್ಕೆ ಗುರಿಯಾಗಿರುವ ಮೋಟಾರು ವಾಹನ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ಮೋಟಾರು ವಾಹನ ನಿರೀಕ್ಷಕರಾದ ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್ ಪುನರ್ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದರು. ಮೈಸೂರು…
ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವೈದ್ಯರ ಕರ್ತವ್ಯ ನಿರ್ವಹಣೆ ಕಡ್ಡಾಯ
ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು. ಈ ಮೊದಲು 2 ಗಂಟೆಗಳ ನಂತರ…
ಮಕ್ಕಳಲ್ಲಿ ಕ್ಯಾನ್ಸರ್ ಆತಂಕಕಾರಿ: ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ
ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ…
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದ ಮಾಹಿತಿ ಹೊರಬಿದ್ದಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ಮರಳಿ ಬಂದಾಗ ಸಂಪೂರ್ಣವಾದ ಪ್ರೊಟೊಕಾಲ್ ವ್ಯವಸ್ಥೆ ನೀಡುತ್ತಿದ್ದರು ಎಂದು ಆರೋಪಿಸಿದರು. ರನ್ಯಾರಾವ್ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು. ಏರ್‍ಪೋರ್ಟಿಗೆ ವಾಪಸ್ ಬಂದಾಗ ವಿಮಾನನಿಲ್ದಾಣದಿಂದ ಪೊಲೀಸರೇ ಎಸ್ಕಾರ್ಟ್ ನೀಡಿ ಕರೆದೊಯ್ಯುತ್ತಿದ್ದರು; ಆಕೆ ಸಾಮಾನ್ಯ ಮಹಿಳೆ ಅಲ್ಲ ಎಂಬುದು…