ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ವಜಾಕ್ಕೆ ಜೆಡಿಎಸ್ ಆಗ್ರಹ

ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು ! ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV — Janata Dal Secular (@JanataDal_S) October…

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7 — BJP Karnataka (@BJP4Karnataka) October 24, 2025 ‘ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ’ ಎಂದು ಛಲವಾದಿ ನಾರಾಯಣ…

ಸಿದ್ದರಾಮಯ್ಯ ಬದಲಾವಣೆ, ಜಾರಕಿಹೊಳಿಗೆ ನಾಯಕತ್ವ? ಯತೀಂದ್ರ ಹೇಳಿಕೆಯ ಅಚ್ಚರಿ

ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ. ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ’ ಎಂದಿದ್ದಾರೆ. ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು. “ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ…

“ಕಾಂಗ್ರೆಸ್ ಸಿಎಂ ಬಗ್ಗೆ ಒಬ್ಬ ಕುಖ್ಯಾತರ ಡೈರಿ..”; ಪ್ರಿಯಾಂಕ್’ಗೆ ಚುಚ್ಚಿದ ಐಶ್ವರ್ಯ

ಬೆಂಗಳೂರು: ಆರೆಸ್ಸೆಸ್ ಬಿಜೆಪಿ ನಾಯಕರನ್ನು ಟೀಕಿಸುವ ಆತುರದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಹಳೆಯ ವೀಡಿಯೋವನ್ನು ವೈರಲ್ ಮಾಡಿದ ಸಚಿವ ಪ್ರಿಯಾಂಕ್ ವಿರುದ್ಧ ಐಶ್ವರ್ಯ ಅನಂತಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ‘Priank Kharge, this is a new low for you too’ ಎನ್ನುತ್ತಾ ಕಟುವಾಗಿ ಟೀಕಿಸಿರುವ ಐಶ್ವರ್ಯ, ‘ಆರ್‌ಎಸ್‌ಎಸ್‌ಗೆ ಮಸಿ ಬಳಿಯುವ ನಿಮ್ಮ ವಿಫಲ ಪ್ರಯತ್ನದ ನಂತರ, ನೀವು ಈಗ ಕರ್ನಾಟಕಕ್ಕಾಗಿ ಅನಂತಕುಮಾರ್ ಜಿ ಅವರ ಕೆಲಸವನ್ನು ನಿಮ್ಮ ಸ್ವಂತ ಪಕ್ಷದ ನಾಯಕರು ಸಹ ಮೆಚ್ಚಿದ್ದಾರೆ. ಆದಷ್ಟೇ ನೀವು ಮರೆತಿದ್ದೀರಿ’ ಎಂದು ಚಿವುಟಿದ್ದಾರೆ. ‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆಯು ನಿಮ್ಮ ಪಕ್ಷದ ಹೈಕಮಾಂಡ್‌ನ ಮೊದಲಕ್ಷರಗಳನ್ನು ಹೊಂದಿದ್ದ ಕಾಂಗ್ರೆಸ್ ಸಿಎಂ ಬಗ್ಗೆ ಒಬ್ಬ ಕುಖ್ಯಾತರ ಡೈರಿಯ ಬಗ್ಗೆ ಮತ್ತು ಅವರಿಗೆ ನೀಡಲಾದ ದೊಡ್ಡ ಪ್ರಮಾಣದ ಲಂಚದ ಬಗ್ಗೆ ಎಂಬುದನ್ನು ನಿಮಗೆ ನೆನಪಿಸುತ್ತೇನೆ ಎಂದು ಐಶ್ವರ್ಯ ಎದಿರೇಟು…

ಜಾತಿ ಜನಗಣತಿ ಅಕ್ಟೋಬರ್ 31 ರವರೆಗೆ ವಿಸ್ತರಣೆ, ಶಿಕ್ಷಕರಿಗೆ ವಿನಾಯಿತಿ

ಬೆಂಗಳೂರು: ರಾಜ್ಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ಕಾರ್ಯವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಈ ಸಮೀಕ್ಷೆ ಮೂಲತಃ ಅಕ್ಟೋಬರ್ 7ರೊಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ದಸರಾ ರಜೆ ಹಾಗೂ ಮಧ್ಯಾವಧಿ ತೊಂದರೆಗಳಿಂದಾಗಿ ಸರ್ಕಾರ ಕಾರ್ಯಾವಧಿಯನ್ನು ಮುಂದೂಡಿದೆ. ಈಗ ಶಿಕ್ಷಕರನ್ನು ಗಣತಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಸರ್ಕಾರಿ ನೌಕರರನ್ನು ಸಮೀಕ್ಷೆ ಪೂರ್ಣಗೊಳಿಸುವ ಕಾರ್ಯಕ್ಕೆ ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಡಿಕೆಶಿ ಭಾನುವಾರ ತಿಳಿಸಿದ್ದಾರೆ. “ಬೆಂಗಳೂರು ದಕ್ಷಿಣ, ಬೀದರ್ ಮತ್ತು ಧಾರವಾಡ ಹೊರತುಪಡಿಸಿ, ಬಹುತೇಕ ಜಿಲ್ಲೆಗಳಲ್ಲಿ 90 ಶೇಕಡಾ ವ್ಯಾಪ್ತಿ ಸಾಧಿಸಲಾಗಿದೆ. ಬೆಂಗಳೂರಿನಲ್ಲಿ 67 ಶೇಕಡಾ ಪ್ರತಿಕ್ರಿಯೆ ದೊರೆತಿದ್ದು, ಸುಮಾರು 20 ಶೇಕಡಾ ನಾಗರಿಕರು ತಮ್ಮ ಮಾಹಿತಿಯನ್ನು ನೀಡಿಲ್ಲ,” ಎಂದು ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹಿರಿಯ ಸಚಿವರು, ಅಧಿಕಾರಿಗಳು…

ಅತಿವೃಷ್ಟಿ ಸಂಕಷ್ಟ ತಿಳಿಯದ ಸರ್ಕಾರದ ವಿರುದ್ಧ ರೈತರ ರೊಚ್ಚು

ಬಸವಕಲ್ಯಾಣ: ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಹಾಗೂ ರಾಜಕೀಯ ವಿಚಾರಗಳಲ್ಲಿ ಕೇಂದ್ರೀಕೃತವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಭಾನುವಾರ ಬಸವಕಲ್ಯಾಣದಲ್ಲಿ ಸಂತ್ರಸ್ತ ರೈತರು ಹಾಗೂ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದಿಂದ ತಕ್ಷಣದ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೆಲವರು ಅರೆಬೆತ್ತಲೆ ತೊಡಗಿಸಿಕೊಂಡು ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಶರಣು ಸಲಗಾರ್, ಬಿಜೆಪಿ ಜಿಲ್ಲಾ ಮತ್ತು ರೈತ ಮೋರ್ಚಾ ಪದಾಧಿಕಾರಿಗಳು, ರೈತ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

RSS ನಿರ್ಬಂಧಕ್ಕೆ ಹೊರಟ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ ಎಂದ ಬಿಜೆಪಿ

ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಹೈಕೋರ್ಟ್ ಪೀಠದ ಆದೇಶವನ್ನು ಸ್ವಾಗತಿಸಿರುವ ಅವರು, ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಬಣ್ಣಿಸಿದ್ದಾರೆ. ಚಿತ್ತಾಪುರದಲ್ಲಿ RSS ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ವಿಜಯೇಂದ್ರ ಸಾಮಾಜಿಕ ಮಾಧ್ಯಮ “X’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ…

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ: RSS ನಿರ್ಬಂಧಿಸಲು ಹೊರಟ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ RSSನ ಶತಾಬ್ದಿ ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ ನವೆಂಬರ್​​ 2ರಂದು ಪಥಸಂಚಲನಕ್ಕೆ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತಂತೆ ಭಾನುವಾರ ನಡೆಸಿದ ಹೈಕೋರ್ಟ್ ಪೀಠ, ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಪಥಸಂಚಲನ ಮಾರ್ಗ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ ರುವ ಹೈಕೋರ್ಟ್, ವಿಚಾರಣೆಯನ್ನು ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಚಿತ್ತಾಪುರದಲ್ಲಿ ಭಾನುವಾರ RSS ​ ಪಥ ಸಂಚಲನಕ್ಕೆ ಸ್ಥಳೀಯ ತಹಶೀಲ್ದಾರ್​ ನಾಗಯ್ಯ ಹಿರೇಮಠ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಆರ್​​ಎಸ್​ಎಸ್​ ಪ್ರಮುಖರು ಕಲಬುರಗಿ ಹೈಕೋರ್ಟ್…

‘ಕಿರಿಕ್ ನಾವಲ್ಲ; ರಾಷ್ಟ್ರ ಸೇವಕರು ನಾವೆಲ್ಲ’; ಬಂಟ್ವಾಳದಲ್ಲಿ RSS ಶಕ್ತಿಪ್ರದರ್ಶನ

ಮಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡ್ಡಿಪಡಿಸಿದರೆ, ಇತ್ತ ದಕ್ಷಿಣಕನ್ನಡದಲ್ಲಿ ಸಂಘ ಸೈನಿಕರ ವಿಜಯೋತ್ಸವ ಸಂಭ್ರಮ ಮನೆಮಾಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಚಟುವಟಿಕೆಯನ್ನು ಆರಂಭಿಸಿ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ದೇಶವ್ಯಾಪಿ ಶತಾಬ್ದಿ ಪಥಸಂಚಲನ ನಡೆಯುತ್ತಿದ್ದು, ಭದ್ರಕೋಟೆ ಕರಾವಳಿ ಜಿಲ್ಲೆಯಲ್ಲಿ RSS ಕಾರ್ಯಕರ್ತರು ಶಕ್ತಿ ಪ್ರದರ್ಶನ ನಡೆಸಿದರು. ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾರ್ಯಕರ್ತರ ಪಥಸಂಚಲನ ಗಮನಸೆಳೆಯಿತು. ಅಪಾರ ಸಂಖ್ಯೆಯಲ್ಲಿ ಗಣವೇಷಧಾರಿ ಸ್ವಯಂಸೇವಕರು ಪಥಸಂಚಲನದಲ್ಲಿ ಭಾಗಿಯಾದರು. ಸಂಘ ಸೈನಿಕರು ಬಂಟ್ವಾಳದ ಪ್ರಮುಖ ರಸ್ತೆಯಲ್ಲಿ ಪಾಠ ಸಂಚಲನ ನಡೆಸಿದರು. ವಿವಿಧ ವಾಹಿನಿಗಳಲ್ಲಿ ನೂರಾರು ಸ್ವಯಂಸೇವಕರು ಘೋಷ್ ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ವೈಖರಿ ಸಂಘ ಶಿಸ್ತಿಗೆ ಸಾಕ್ಷಿಯಾಯಿತು. ಪಥಸಂಚಲನ ಸಾಗಿದ ಮಾರ್ಗದುದ್ದಕ್ಕೂ ಸಾರ್ವಜನಿಕರು ಗಣವೇಷಧಾರಿ ಕಾರ್ಯಕರ್ತರಿಗೆ ಪುಷ್ಪಾರ್ಚನೆ ಮಾಡಿ ದೇಶಭಕ್ತಿ ಪ್ರದರ್ಶಿಸುತ್ತಿದ್ದ ಸನ್ನಿವೇಶವು ಕುತೂಹಲದ…

ಸಂವಿಧಾನ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಹೈಜಾಕ್; ವಿಜಯೇಂದ್ರ ಟ್ವೀಟಾಸ್ತ್ರ

ಬೆಂಗಳೂರು: ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ ಎಂದು ವಿಜಯೇಂದ್ರ ಬಣ್ಣಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ, ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ ಎಂದವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ…