ಬಿಜೆಪಿ ಶಾಸಕನನ್ನು ಕರಿಟೋಪಿ ಎಂದ ಡಿಕೆಶಿ; RSS ಗಣವೇಶಕ್ಕೆ ಅಪಮಾನ

ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ RSS ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ಅವರ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉತ್ತರದ ಪಾಠವನ್ನು ಇಷ್ಟರಲ್ಲೇ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ…

ಸಿಎಂ ಆಗುವ ಕಾಲ ಸನ್ನಿಹಿತ..?’; ಈ ಬಗ್ಗೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, ‘ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ‘ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ’ ಎಂದವರು ಹೇಳಿದ್ದಾರೆ. ‘ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ’…

ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ ‘ಡೆವಿಲ್’ ಚಿತ್ರದ ಹೊಸ ಹಾಡು

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡ ಇದೀಗ ಹಾಡುಗಳ ಮೂಲಕ ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿದ್ದು, ಹೊಸ ಹಾಡೊಂದು ಬಿಡುಗಡೆಯಾದ ಕ್ಷಣದಿಂದಲೇ ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ. ‘ಒಂದೆ ಒಂದು ಸಲ’ ಎಂಬ ಶೀರ್ಷಿಕೆಯ ಸುಮಧುರ ಹಾಡು ಸರಿಗಮಪ ಸಂಸ್ಥೆಯ ಮೂಲಕ ಬಿಡುಗಡೆಯಾಗಿದ್ದು, ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಸಂಪಾದಿಸಿದೆ. ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದು, ಕಪಿಲ್ ಕಪಿಲನ್ ಮತ್ತು ಚಿನ್ಮಯಿ ಶ್ರೀಪಾದ ಕಂಠ ನೀಡಿದ್ದು, ಸಂಗೀತ ಸಂಯೋಜನೆಗೆ ಅಜನೀಶ್ ಲೋಕನಾಥ್ ಸಹಕರಿಸಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದು, ದರ್ಶನ್ ಮತ್ತು ರಚನಾ ರೈ ಹಾಡಿಗೆ ನೃತ್ಯ ಪ್ರದರ್ಶನ ನೀಡಿದ್ದಾರೆ. ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸುತ್ತಿದ್ದು, ವಿಜಯಲಕ್ಷ್ಮಿ ದರ್ಶನ್ ಸೇರಿದಂತೆ ತಂಡದವರು ಪ್ರಚಾರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಚಿತ್ರದಲ್ಲಿನ ಪ್ರತಿ ಹಾಡು ಕ್ರಮವಾಗಿ ಬಿಡುಗಡೆಯಾಗುವ…

ಬಿಹಾರ ಅಖಾಡಕ್ಕೆ ಕರ್ನಾಟಕದ ಹಣ; ಬಿಜೆಪಿ ಆರೋಪ

ಬೆಂಗಳೂರು: ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಸಿಎಂ, ಡಿಸಿಎಂ, ಮಂತ್ರಿಗಳು ತಮ್ಮ ಇರುವ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡ ನೀವೇ ಊಹಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಒಂದು ಕಡೆ ಜನರಿಗೆ ಕ್ಯಾಸಿನೋ, ಜೂಜು, ಬೆಟ್ಟಿಂಗ್ ಆಡಿಸಿ ಬಡವರ ಮನೆಹಾಳು ಮಾಡಿ ಅಡ್ಡದಾರಿಯಲ್ಲಿ ದುಡ್ಡು ಮಾಡುವುದು. ಆ ಪಾಪದ ಹಣದಲ್ಲಿ ಟಿಕೆಟ್ ಪಡೆದು, ಚುನಾವಣೆ ಎದುರಿಸಿ, ಹೈಕಮಾಂಡ್ ಗೆ ಕಪ್ಪ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವುದು. ಆಮೇಲೆ ಮಂತ್ರಿಗಿರಿ ಬಳಸಿಕೊಂಡು ಇನ್ನಷ್ಟು ಲೂಟಿ ಮಾಡುವುದು. ಇದು ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹೆಣೆದಿರುವ ವಿಷ ವರ್ತುಲ ಎಂದವರು ಟ್ವೀಟ್ ಮಾಡಿದ್ದಾರೆ. ತೆಲಂಗಾಣ ಚುನಾವಣೆಗೆ, ಲೋಕಸಭೆ ಚುವಾವಣೆಗೆ…

ಸಿಜೆಐ ಮೇಲಿನ ದಾಳಿಯ ಹಿಂದೆ ಭಾರೀ ಸಂಚು ಸಾಧ್ಯತೆ; ಮನೋರಾಜ್ ಅನುಮಾನ

ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ರಾಕೇಶ್ ಕಿಶೋರ್ ನಡೆಸಿರುವ ದಾಳಿಯನ್ನು ಇಡೀ ದೇಶವೇ ಖಂಡಿಸಬೇಕಿದೆ. ಕೃತ್ಯ ಎಸಗಿದ ವ್ಯಕ್ತಿಯ ವಿರುದ್ಧ ಮೊಕದ್ದಮೆ ದಾಖಲಿಸಿ, ಅಪರಾಧಿಗೆ ಶಿಕ್ಷೆ ಆಗಲೇಬೇಕಿದೆ ಎಂದಿದ್ದಾರೆ. ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಿರುವ ಘಟನೆಯನ್ನು ಸಹಿಸಲಾಗದು. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮಾತ್ರವಲ್ಲ, ಸಂವಿಧಾನಕ್ಕೂ ಮಾಡಿರುವ ಅಪಚಾರವಾಗಿದೆ. ತಮ್ಮ ಮೇಲೆ ಶೂ ಎಸಗಿದವನನ್ನು ಕ್ಷಮಿಸಿರುವುದು ಮುಖ್ಯ ನ್ಯಾಯಮೂರ್ತಿಗಳ ಒಳ್ಳೆಯ ಗುಣವೇ ಆಗಿರಬಹುದು. ಆದರೆ, ಇದು ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಆಘಾತ ಎಂದು…

ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಚಿಂತಿಸಬೇಕಾಗಿಲ್ಲ. ಇನ್ನೂ ಮೂರರಿಂದ ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ,” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಚಿಂತಿಸಬೇಕಾಗಿಲ್ಲ. ತಂದೆಯವರಿಗೆ ಯಾವುದೇ ತೀವ್ರವಾದ ಆರೋಗ್ಯ ಸಮಸ್ಯೆಗಳಿಲ್ಲ. ಕಳೆದ ಮೂರು ದಿನಗಳಿಂದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ದೇವರ ಕೃಪೆ ಮತ್ತು ಜನರ ಆಶೀರ್ವಾದದಿಂದ ಅವರು ಉತ್ತಮ ಸ್ಥಿತಿಯಲ್ಲಿದ್ದಾರೆ” ಎಂದು ಹೇಳಿದರು. ಈ ನಡುವೆ ಜೆಡಿ(ಎಸ್) ಪಕ್ಷವು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, “ಪಕ್ಷದ ಆತ್ಮೀಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಚಿಂತಿಸಬೇಕಾಗಿಲ್ಲ. ಮಾಜಿ ಪ್ರಧಾನಿ ಮತ್ತು ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಚೇತರಿಸಿಕೊಂಡಿದ್ದಾರೆ, ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ,” ಎಂದು ತಿಳಿಸಿದೆ.…

ಮಂಗಳೂರು ಟೆಕ್ ಪಾರ್ಕ್ ನಿರ್ಧಾರ: ಕರಾವಳಿ ಅಭಿವೃದ್ಧಿಯತ್ತ ಸರ್ಕಾರದ ದಿಟ್ಟ ಹೆಜ್ಜೆ ಎಂದ ಪದ್ಮರಾಜ್

ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಪದ್ಮರಾಜ್ ಆರ್.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಈ ಯೋಜನೆಯಿಂದ ಕರಾವಳಿಯಲ್ಲಿ…

‘ನೀರಿದ್ದರೆ ನಾಳೆ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ‘ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಗಮನಸೆಳೆದರು. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ…

RSS ಹಿರಿಯ ನಾಯಕ ಕೃ.ನರಹರಿ ವಿಧಿವಶ

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ ಅವರು ತಮ್ಮ 93 ವರ್ಷ ವಯಸ್ಸಿನಲ್ಲಿ ಗುರುವಾರ ಬೆಳಗ್ಗೆ 4.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ನರಹರಿ ಅವರ ನಿಧಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೂ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞರೂ ಆಗಿದ್ದ ಕೃ. ನರಹರಿ ವಿಧಿವಶರಾಗಿದ್ದಾರೆ. ನಿಧನದಿಂದಾಗಿ ಒಂದು ಸಮಾಜಸಮರ್ಪಿತ ಜೀವನ ಅಂತ್ಯಗೊಂಡಿದೆ ಎಂದವರು ಸಂತಾಪ ಸೂಚಿಸಿದ್ದಾರೆ.

‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ…