ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು ಡಾ. ಕೇಶವ್ ಬಲಿರಾಮ ಹೆಡ್ಗೆವಾರ್ ಸಂಘವನ್ನು ಸ್ಥಾಪಿಸಿದ್ದರು. ಈ ಸಂಘಟನೆಗೆ ಇದೀಗ ಶತಮಾನೋತ್ಸವ. ಈ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ವಿಜಯದಶಮಿ ಪೂಜೆ ಹಾಗೂ ಪಥಸಂಚಲನಗಳನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಶಾಸ್ತ್ರಪೂಜೆ ಮತ್ತು ಪಥಮೆರವಣಿಗೆಗಳು ಸೇರಿದಂತೆ ದೇಶಾದ್ಯಂತ 346 ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಿದವು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಸ್ವಯಂಸೇವಕರು ಸಂಪೂರ್ಣ ಸಮವಸ್ತ್ರದಲ್ಲಿ ಸಾಂಪ್ರದಾಯಿಕ ಸಂಘ ಘೋಷ್ ಜೊತೆ ಪಥಸಂಚಲನ ನಡೆಸಿದರು. ಅನೇಕರು ವ್ಯವಸ್ಥಾಪನಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಪಥಸಂಚಲನ ಹಾದುಹೋದ ಮಾರ್ಗದಲ್ಲಿ ನಾಗರಿಕರು ಪುಷ್ಪಾರ್ಚನೆ ಮೂಲಕ ಸ್ವಾಗತಿಸಿದರು. ಆರ್‌ಎಸ್‌ಎಸ್ ರಾಷ್ಟ್ರೀಯ ಹಾಗೂ ಪ್ರಾಂತೀಯ ನಾಯಕರು ವಿವಿಧ ಕೇಂದ್ರಗಳಲ್ಲಿ ಭಾಗವಹಿಸಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಪಶ್ಚಿಮ ವಿಹಾರ್‌ನಲ್ಲಿ ಡಾ. ಅನಿಲ್ ಅಗರ್ವಾಲ್ ಮತ್ತು ಇಂದ್ರೇಶ್…
Category: ಬೆಂಗಳೂರು
ಸಿಎಂ ಹುದ್ದೆ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ: ಜೋಶಿ ಆರೋಪ
ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಾಯಕರು ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆ ಉಳಿಸಿಕೊಳ್ಳಲು ರಾಜಕೀಯ ಲೆಕ್ಕಾಚಾರವಾಗಿ ಜಾತಿ ಜನಗಣತಿಯನ್ನು ಮುನ್ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಅನಗತ್ಯ ಹಾಗೂ ವೈಯಕ್ತಿಕ ಪ್ರಶ್ನೆಗಳನ್ನು ಒಳಗೊಂಡಿದೆ ಎಂದು ಅವರು ಟೀಕಿಸಿದರು. “ಕ್ರಿಶ್ಚಿಯನ್ ಲಿಂಗಾಯತ ಅಥವಾ ಕ್ರಿಶ್ಚಿಯನ್ ಬ್ರಾಹ್ಮಣ ಎಂದು ವರ್ಗೀಕರಣ ಮಾಡುವುದರ ಅರ್ಥವೇನು? ಇದು ಹಿಂದೂ ಮತಾಂತರಕ್ಕೆ ಉತ್ತೇಜನ ನೀಡುವ ಸಮೀಕ್ಷೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ವೀರಶೈವ-ಲಿಂಗಾಯತ ಮಠಾಧೀಶರೂ ಸಹ ಎಲ್ಲರೂ ಹಿಂದೂಗಳೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ವೈದ್ಯರು ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಿದ್ದರಿಂದ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ವೈದ್ಯರ ಸಲಹೆ-ಸೂಚನೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಎಂದಿನ ದೈನಂದಿನ ಕಾರ್ಯ…
ಜಾತಿ ಸಮೀಕ್ಷೆ ಟೀಕಿಸಿದ ಜೋಶಿ, ಸೂರ್ಯ ವಿರುದ್ಧ ಬಿಜೆಪಿ ಹೈಕಮಾಂಡ್’ಗೆ ‘ಕೈ’ದೂರು
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ ಸಮೀಕ್ಷೆಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಒಬಿಸಿ ಮೀಸಲಾತಿ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಲು ಕೋರಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ನಡೆ ಬಗ್ಗೆ ಈ ಪತ್ರದಲ್ಲಿ ರಮೇಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಅನುಗುಣವಾಗಿ ಕರ್ನಾಟಕದಲ್ಲಿ ಒಬಿಸಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ನೀತಿಗಳನ್ನು ರೂಪಿಸಲು ಮತ್ತು ಮೀಸಲಾತಿ…
60% ಕಮಿಷನ್ ಆರೋಪ; ಸಿದ್ದುಗೆ ಬಿಜೆಪಿ ಗುದ್ದು
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಬಗ್ಗೆ ಅಭಿಯಾನ ನಡೆಸಿ ಗೆದ್ದು ಬಂದ ಸಿದ್ದರಾಮಯ್ಯ ಅವರಿಗೆ ಇದೀಗ ತಾವು ಬಿಟ್ಟ ಬಾಣವೇ ತಿರುಗಿ ಬಂದಂತಾಗಿದೆ. ಗುತ್ತಿಗೆದಾರರು ಬರೆದಿರುವ ಪತ್ರವನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಬಗ್ಗೆ ಅಭಿಯಾನ ಆರಂಭಿಸಿದಂತಿದೆ. ಈ ಕುರಿತಂತೆ ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮುಖ್ಯಮಂತ್ರಿ @siddaramaiah ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಕಳ್ಳಾಟ ಭರ್ಜರಿಯಾಗಿ ನಡೆಯುತ್ತಿದೆ. ಗುತ್ತಿಗೆದಾರರ ಸಂಘವೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು 60% ಕಮಿಷನ್ ಆರೋಪವನ್ನು ಅಧಿಕೃತಗೊಳಿಸಿದೆ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಸುಳ್ಳು ಆರೋಪ ಮಾಡಿ Pay-CM ಅಭಿಯಾನ ನಡೆಸಿದ್ದ @INCKarnataka ನಾಯಕರಿಗೆ ಅದೇ… pic.twitter.com/SI51KVXzKn — BJP Karnataka (@BJP4Karnataka) September 30, 2025 ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್…
ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ
ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ…
ಜಾತಿ ಸಮೀಕ್ಷೆಯಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ: ಬಿಜೆಪಿ ನಾಯಕರ ಸಲಹೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ…
“ಜಾತಿ ಗಣತಿ ಬಹಿಷ್ಕರಿಸಿ”; ರಾಜ್ಯದ ಜನತೆಗೆ ಬಿಜೆಪಿ ಕರೆ
ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. ಜಾತಿಗಣತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮ ಬಗ್ಗೆ ಕಾಟು ಟೀಕೆ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಕರೆ ನೀಡಿದರು. ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ ಎಂದಿರುವ ತೇಜಸ್ವಿ ಸೂರ್ಯ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ ಜೊತೆಗೆ, ಜಾತಿ ಜಾತಿ ಮಧ್ಯೆ ಗಲಾಟೆ ತರಲು ಇದನ್ನು ಮಾಡುತ್ತಿದ್ದಾರೆ. ಹಾಗಾಗಿ ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ. ಹಿಂದೆ ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ…
ನಿರ್ಮಿತಿ ಕೇಂದ್ರ, ಕೆಆರ್‌ಐಡಿಎಲ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ; ಗುತ್ತಿಗೆದಾರರ ಸಂಘ ಆರೋಪ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಅಧ್ಯಕ್ಷ ಆರ್. ಮಂಜುನಾಥ್ ಮತ್ತು ಜಿ.ಎಂ. ರವೀಂದ್ರ ಅವರು ಸಹಿ ಮಾಡಿದ ಪತ್ರದಲ್ಲಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಯಾವುದೇ ಲಂಚ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದಾರೆ. ನಿರ್ಮಿತಿ ಕೇಂದ್ರಗಳು ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಆರ್‌ಐಡಿಎಲ್) ಅಡಿಯಲ್ಲಿರುವ ಯೋಜನೆಗಳನ್ನು ಶಾಸಕರು ಮತ್ತು ಸಚಿವರ ಅನುಯಾಯಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಅವರು ಯೋಜನೆಗಳನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸುತ್ತಾರೆ ಮತ್ತು ಲಂಚ ಪಡೆಯಬೇಕೆಂದು ಒತ್ತಾಯಿಸುತ್ತಾರೆ ಎಂದು ಪಾತ್ರದಲ್ಲಿ ಆರೋಪಿಸಲಾಗಿದೆ. “ಯೋಜನೆಗಳನ್ನು ನಮಗೆ ಉಪಗುತ್ತಿಗೆ ನೀಡಿದಾಗ…
ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು
ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್ ಒಂದೇ ರೈಲು ಕಾರ್ಯನಿರ್ವಹಿಸುತ್ತಿತ್ತು. ಹೊಸ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಕಡಿಮೆ ವೆಚ್ಚದಲ್ಲಿ ಸುಗಮ ಸಂಚಾರ ಸಿಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿರುವ ತೇಜಸ್ವಿ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. I have some great news for people of Bengaluru and Mumbai. From last 30 years, our two great cities were connected by only one super fast train -Udyan Express. Even that train took…
