ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಗಣೇಶ ಚತುರ್ಥಿಯನ್ನು ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ ಈಗ ನವರಾತ್ರಿ, ದೀಪಾವಳಿಯ ಸಂಭ್ರಮವನ್ನೂ ಹಾಳು ಮಾಡಲು ಮುಂದಾಗಿದೆ. ʼಎʼ ದರ್ಜೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯ ದರವನ್ನು ಏರಿಸುವ ಮೂಲಕ ಹಿಂದೂ ಧರ್ಮೀಯರ ಮೇಲೆ ತನ್ನ ಅಸಹನೆಯನ್ನು ತೋರಿಸಿದೆ ಎಂದು ಬಿಜೆಪಿ ದೂರಿದೆ. ಹಿಂದೂಗಳು ಸುಮ್ಮನಿದ್ದಾರೆ, ಏನು ಮಾಡಿದರೂ ನಡೆಯುತ್ತದೆ ಎಂದು ಸಿದ್ದರಾಮಯ್ಯ ಸರ್ಕಾರ ಅಹಂಭಾವ ಪ್ರದರ್ಶಿಸುತ್ತಿದೆ. ಕಟೀಲು ದೇವಸ್ಥಾನವೊಂದರಲ್ಲೇ ಅತಿಹೆಚ್ಚು ಜನರು ಭಕ್ತಿಯಿಂದ ಸಮರ್ಪಿಸುವ ಹೂವಿನ ಪೂಜೆಯ ದರವನ್ನು ಬರೋಬ್ಬರಿ 184% ಹೆಚ್ಚಳ ಮಾಡಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ ಸೇವೆಗಳ ಸೇವಾ ದರವನ್ನೂ ಹೆಚ್ಚಿಸಿರುವುದು ಸರ್ಕಾರದ ಹಿಂದೂ…
Category: ಬೆಂಗಳೂರು
ಬೆಂಗಳೂರಿನಲ್ಲಿ ನವೆಂಬರ್ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ
ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. “ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ…
ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ; ಸರ್ಕಾರದ ನಡೆಗೆ CSS ಆಕ್ಷೇಪ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು ‘ಸರ್ವ ಜನಾಂಗಗಳ ಶಾಂತಿಯ ತೋಟ’ವನ್ನಾಗಿ…
ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ; ಹೆಚ್ಡಿಕೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಎಂದವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಬೆಂಗಳೂರು ನಗರದ ಪರಿಸ್ಥಿತಿ ಬಗ್ಗೆ ತಮ್ಮದೇ ಶಾಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ…
ಕರ್ನಾಟಕದ ಸಿಐಡಿ ಕೇಳಿದ ಮಾಹಿತಿಯನ್ನು ಯಾವಾಗ ಒದಗಿಸುತ್ತೀರಿ? ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪ್ರಶ್ನೆ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ಗಾಂಧೀ ಅವರು ಮತಗಳ್ಳತನ ಬಗ್ಗೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎತ್ತಿರುವ ಪ್ರಶ್ನೆ ಗಮನಸೆಳೆದಿದೆ. . ಕರ್ನಾಟಕದ ಸಿಐಡಿ ಕೇಳಿದ ಮಾಹಿತಿಯನ್ನು ಯಾವಾಗ ಒದಗಿಸುತ್ತೀರಿ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಅವರು ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ. ಆಳಂದದಲ್ಲಿ ಮತಗಳ್ಳತನವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಮಾಡಿರುವ ಆರೋಪವನ್ನು ಅಲ್ಲಗಳೆದಿರುವ ಭಾರತೀಯ ಚುನಾವಣಾ ಆಯೋಗಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಕ್ಸ್ ನಲ್ಲಿ ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ. ಕರ್ನಾಟಕದ ಸಿಐಡಿ ಕೇಳಿದ ಮಾಹಿತಿಯನ್ನು ಯಾವಾಗ ಒದಗಿಸುತ್ತೀರಿ? ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನಿಮಗೆ ನೀಡಿರುವ ಮಾಹಿತಿ ಕುರಿತು ನೀವು ಯಾವಾಗ ಪ್ರತಿಕ್ರಿಯಿಸುತ್ತೀರಿ? ನೀವು ಕಾಲಮಿತಿಯ ವಿಚಾರಣೆ ನಡೆಸಿ ಮುಕ್ತಾಯಗೊಳಿಸುವುದು ಯಾವಾಗ? ಇದಿಷ್ಟೇ ನಾವೆಲ್ಲರೂ ಹುಡುಕುತ್ತಿರುವ ಸತ್ಯ. ಭಾರತೀಯ…
ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ಮುಡಾ ಮಾಜಿ ಆಯುಕ್ತರಿಗೆ 9 ದಿನಗಳ ಇಡಿ ವಶ
ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧಿತರಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದಿದೆ. ಹಣ ವರ್ಗಾವಣೆ ಮತ್ತು ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಮಂಗಳವಾರ ಇಡಿ ಅಧಿಕಾರಿಗಳು ದಿನೇಶ್ ಕುಮಾರ್ ಅವರನ್ನು ಬಂಧಿಸಿದ್ದರು. ವಿಚಾರಣೆ ನಂತರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಒಂದು ದಿನ ಕಸ್ಟಡಿಗೆ ಪಡೆದಿದ್ದ ಇಡಿ, ಬುಧವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು. ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ತಮ್ಮ ವಶಕ್ಕೆ ಒಪ್ಪಿಸುವಂತೆ ಇಡಿ ಮನವಿ ಮಾಡಿತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ಮಾಡಿದೆ.
ಸಾವಿನಲ್ಲೂ ಮಾನವೀಯತೆ; ಪ್ರಯಾಣಿಕರ ಜೀವ ಉಳಿಸಿ ಕೊನೆಯುಸಿರೆಳೆದ KSRTC ಚಾಲಕ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ರಾಜೀವ್ ಬೀರಸಾಲ ಎಂಬವರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. 56 ವರ್ಷ ವಯಸ್ಸಿನ ರಾಜೀವ್ ಬೀರಸಾಲ ಅವರು KSRTC ಬಸ್ಸಿನಲ್ಲಿ ಚಾಲಕ- ಕಂ-ನಿರ್ವಾಹಕ ಹುದ್ದೆಯಲ್ಲಿದ್ದರು. ಇವರು ಹರಿಹರ ಘಟಕದ ‘ರಾಜಹಂಸ’ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ರಾಜೀವ್ ಬೀರಸಾಲ ಅವರಿಗೆ ಹೃದಯಾಘಾತವಾಗಿದೆ. ಆದರೂ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಪ್ರಯಾಣಿಕರ ಜೀವದ ಬಗ್ಗೆ ಕಾಳಜಿ ತೋರಿದ ಈ ಚಾಲಕ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಕೊನೆಯುಸಿರೆಳೆದಿದ್ದಾರೆ. ಚಾಲಕನ ಅಕಾಲಿಕ ನಿಧಾನ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರಿರುವ ಅವರು,…
ನೆಫ್ರೋ ಸಂಸ್ಥೆಗೆ NABH ಮಾನ್ಯತೆ; ಈ ಗರಿಮೆ ಪಡೆದ ಕರ್ನಾಟಕದ ಎರಡನೇ ಸರ್ಕಾರಿ ಆಸ್ಪತ್ರೆ
ಬೆಂಗಳೂರು: ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ. ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಂತರ ಈ ಸ್ಥಾನಮಾನ ಪಡೆದ ಎರಡನೇ ಸಂಸ್ಥೆಯಾಗಿದೆ. ನೆಫ್ರೋ ಸಂಸ್ಥೆಗೆ NABH ಮಾನ್ಯತೆ ಸಿಕ್ಕಿರುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಮಾನ್ಯತೆ ಪಡೆದ ಆಸ್ಪತ್ರೆಗಳು ರೋಗಿಗಳ ಸುರಕ್ಷತೆ ಮತ್ತು ಆರೈಕೆಯಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತದೆ. ಆರೋಗ್ಯ ಆರೈಕೆ ಗುಣಮಟ್ಟ ಸೊಸೈಟಿ (ISQua) ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳು ನೀಡುವ ಗುಣಮಟ್ಟದ ಸರ್ಟಿಫಿಕೇಟ್ ಪಡೆದುಕೊಂಡಿದೆ. ರೋಗಿಯ ಸುರಕ್ಷತೆ, ಆರೈಕೆಯ ಗುಣಮಟ್ಟ, ಸೋಂಕು…
ತಪಾಸಣಾ ವರದಿಗೆ ಲಂಚ; ವೈದ್ಯರ ಅಮಾನತು
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ. ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ…
15 ದಿನಗಳಲ್ಲಿ 1.5 ಕೋಟಿ ಮನೆಗಳ ಸಮೀಕ್ಷೆ ಸಾಧ್ಯವೇ? ಜಾತಿಗಣತಿ ಬಗ್ಗೆ ಅನುಮಾನ
ಬೆಂಗಳೂರು: ಕರ್ನಾಟಕದಾದ್ಯಂತ ಮನೆ ಮನೆಗೆ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕಾರ್ಯವನ್ನು ವಹಿಸಲಾಗಿರುವ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿಯನ್ನು ಕೈಗೊಳ್ಳುವ ಅಧಿಕಾರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಪ್ರಮುಖ ನಾಯಕರ ಸಭೆಯ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ದೇಶಾದ್ಯಂತ ಅಧಿಕೃತವಾಗಿ ಜಾತಿ ಗಣತಿಯನ್ನು ಕೈಗೊಳ್ಳುವುದಾಗಿ ಕೇಂದ್ರವು ಈಗಾಗಲೇ ಘೋಷಿಸಿದೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯು ರಾಜ್ಯದ ಜನರನ್ನು ವಂಚಿಸುತ್ತಿದೆ. ಅವರು 15 ದಿನಗಳಲ್ಲಿ 1.5 ಕೋಟಿ ಮನೆಗಳನ್ನು ಸಮೀಕ್ಷೆ ಮಾಡುವ ಗುರಿಯನ್ನು ಹೊಂದಿದ್ದಾರೆ ಮತ್ತು ಪ್ರತಿ ಮನೆಯು 60 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಇದಕ್ಕೆ ಉತ್ತರಿಸಲು ಎಷ್ಟು ಸಮಯ ಬೇಕಾಗುತ್ತದೆ? ಇದು ಅಸಾಧ್ಯವಾದ ಕೆಲಸ ಎಂದರು. ರಾಜ್ಯ ಸರ್ಕಾರವು ಜಾತಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ಹಿಂದುಳಿದ ವರ್ಗ ಆಯೋಗಕ್ಕೆ ನೀಡಿದೆ. ಆಯೋಗವು…
