ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್‌. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್‌ ಡೆಂಟಲ್‌ ಅಸೋಸಿಯೇಷನ್‌ ಆಯೋಜಿಸಿದ ಡೆಂಟಿಸ್ಟ್‌ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು. ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ.…

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್‌ ಬಂಡೆಯಂತೆ ಆಗುತ್ತಿದ್ದಾರೆ. ಇವರು…

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ…

ಮಾತೃಭೂಮಿ ಬಗ್ಗೆ ಗುಣಗಾನ ಮಹಾಪಾಪವೆ? ಕಾಂಗ್ರೆಸ್’ಗೆ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ’ ಎಂದು ತೋರಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ. ‘ನಮಸ್ತೇ ಸದಾ ವತ್ಸಲೇ ಮಾತೃಭೂಮಿ…’ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ ಎಂದು ವಿಜಯೇಂದ್ರ ಹೇಳಿದ್ದಾರೆ. ನಮ್ಮನ್ನು ಹೆರುವ ತಾಯಿಗೆ ಮಡಿಲ ಆಸರೆ ನೀಡುವವಳು ಭೂಮಿತಾಯಿ. ಈ ಹಿನ್ನಲೆಯಲ್ಲಿಯೇ ‘ಮಾತೃ ಭೂಮಿ’ ಎಂದು ಜನ್ಮದಾತೆಯಷ್ಟೇ ಜನ್ಮಭೂಮಿಯನ್ನು ಆರಾಧಿಸುತ್ತೇವೆ, ತಾಯ್ನೆಲಕ್ಕಾಗಿ ನಮ್ಮನ್ನೇ ಸಮರ್ಪಿಸಿಕೊಳ್ಳುವಷ್ಟು ಭಾವುಕರಾಗುತ್ತೇವೆ. ಜನನಿ, ಜನ್ಮ ಭೂಮಿ ಮಹತ್ವ ತಿಳಿಸಿಕೊಟ್ಟು ರಾಷ್ಟ್ರ ಭಕ್ತಿ ಪಡಿಮೂಡಿಸುವ RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲೂ ಅಸಹನೆ ಏಕೆಂದರೆ ಗುಲಾಮಿ ಚೌಕಟ್ಟಿನಲ್ಲಿ…

ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ; ರಾಜ್ಯದ ಬೊಕ್ಕಸ ಬರಿದು?

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು ವಿಶ್ಲೇಷಿಸಿದೆ. ತೆಲಂಗಾಣದಲ್ಲೂ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ಈಗ ಸಂಪೂರ್ಣ ದಿವಾಳಿಯಾಗಿ ಬಿಟ್ಟಿದೆ ಏನು ಜೆಡಿಎಸ್ ಪಕ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿಹೊಡೆದು, ಆ ದುಡ್ಡಲ್ಲಿ ಸರ್ಕಾರ ರಚಿಸಿದ್ದ ತೆಲಂಗಾಣ ಕಾಂಗ್ರೆಸ್‌ ಇಂದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ನಯಾಪೈಸೆ ಇಲ್ಲವಾಗಿದೆ. ಭಿಕ್ಷೆ ಬೇಡಿದರೂ ಒಂದು ರೂ. ಸಿಗುತ್ತಿಲ್ಲ. ಸರ್ಕಾರದ ಬೊಕ್ಕಸವೂ ಬತ್ತಿಹೋಗಿದೆ. ಅಡಮಾನವಿಟ್ಟು ಹಣ ಪಡೆಯಲು 1 ಇಂಚು ಜಾಗವೂ ಸಹ ಸರ್ಕಾರದ ಬಳಿ ಇಲ್ಲ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಮ್ಮ…

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು. 5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l — Ballari Tweetz (@TweetzBallari) August 25, 2025 ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು. ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿಯನ್ನು…

KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ:ಆಇ 339 ವೆಚ್ಚ-1/2025 2:26.08.2025 ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ. ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾ‌ರ್…

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತರೂಢ ಕಾಂಗ್ರೆಸ್ ನಾಯಕರ ನಡೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದೇ ವೇಳೆ, ಮೈಸೂರು ರಾಜಮನೆತನ ಕೂಡಾ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಡೆಯನ್ನು ರಾಜವಂಶಸ್ಥರೂ ಆದ ಮೈಸೂರು ಸಂಸದ ಯಧುವೀರ್ ಬಲವಾಗಿ ವಿರೋಧಿಸಿದ್ದಾರೆ. ‘ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು…