60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಕೆ ಕಡ್ಡಾಯ: ಸಿಎಂ ಎಚ್ಚರಿಕೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ ಇದ್ದರೂ, ಕಳೆದ ಆರು ತಿಂಗಳಲ್ಲಿ ಕೇವಲ ಶೇಕಡಾ 84 ಪ್ರಕರಣಗಳಲ್ಲಿ ಮಾತ್ರ ನಿಯಮ ಪಾಲನೆಗೊಂಡಿರುವುದನ್ನು ಅವರು ಆಕ್ಷೇಪಿಸಿದರು. ಸೋಮವಾರ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ಪ್ರಕರಣದಲ್ಲೂ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಲೇಬೇಕು. ಪೊಲೀಸರು ಯಾವ ನೆಪಕ್ಕೂ ಜಾಗ ಬಿಡುವುದಿಲ್ಲ. ನ್ಯಾಯಾಲಯದಲ್ಲಿ ತಡೆ ಆದೇಶ ಇದ್ದರೆ ಅದನ್ನು ಕೂಡಲೇ ತೆರವುಗೊಳಿಸಿ ಪ್ರಕರಣ ಮುಂದುವರಿಸಬೇಕು” ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಸಭೆಯ ಮುಖ್ಯಾಂಶಗಳು: ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಶಿಕ್ಷೆಯ ಪ್ರಮಾಣ ಈಗ ಕೇವಲ ಶೇಕಡಾ 10ರಷ್ಟಿದೆ; ಇದು ಹೆಚ್ಚಾಗಬೇಕೆಂದು ಸಿಎಂ ಸೂಚನೆ.…

ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ

ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ ನಿಲ್ದಾಣ ಒದಗಿಸಲಾಗಿದೆ. ಗೋವಾದ ಮಡಗಾಂವ್‌ನಿಂದ ಕೇರಳದ ಎರ್ನಾಕುಲಂವರೆಗೆ ಸಂಚರಿಸುವ ಈ ರೈಲು ಇದೀಗ ಬೈಂದೂರಿನಲ್ಲಿ ನಿಲುಗಡೆ ಮಾಡಲಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಬಿದ್ದಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. “ಆ ಭಾಗದ ಪ್ರಯಾಣಿಕರು, ವಿಶೇಷವಾಗಿ ಮೂಕಾಂಬಿಕಾ ದೇವಾಲಯದ ಭಕ್ತಾದಿಗಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ. ಜನತೆಗೆ ರೈಲು ಸೇವೆ ಹೆಚ್ಚು ಅನುಕೂಲವಾಗಲಿದೆ” ಎಂದು ಸೋಮಣ್ಣ ಹೇಳಿದರು.

“ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ. ಇದರ ಜೊತೆಯಲ್ಲೇ, ರಿಟ್ ಅಧಿಕಾರ (writ powers) ಸಂಬಂಧದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯಗಳಲ್ಲಿ ನಡೆಸಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ತರುವಂತೆಯೂ ಮಂಗಳೂರಿನ ವಕೀಲರ ಸಮೂಹ ಒತ್ತಾಯಿಸಿದೆ. ವಕೀಲರ ಈ ಆಗ್ರಹ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಮಂಗಳೂರಿನಲ್ಲಿ ಮಾಜಿ ಸರ್ಕಾರಿ ಅಭಿಯೋಜಕ ಮನೋರಾಜ್ ರಾಜೀವ್ ಅವರು ವಕೀಲರಾದ ಶಿಶಿರ್ ಭಂಡಾರಿ, ರೋಶನಿ ಸೊರಬ್, ನಂದಿನಿ ಅಖಿಲ್ ಸಹಿತ ಕರಾವಳಿಯ ಕಾನೂನು ತಜ್ಞರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯದ ಬಗ್ಗೆ ಗಮನಸೆಳೆದರು. ಹಲವು ವರ್ಷಗಳಿಂದ ಈ ಬಗ್ಗೆ ಆಗ್ರಹಿಸುತ್ತಾ ಬರಲಾಗಿದೆ. ಅದು ಈಡೇರಬೇಕಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಕರಾವಳಿಯ ಹಿರಿಯ ನ್ಯಾಯವಾದಿ ಮನೋರಾಜ್ ರಾಜೀವ್ ಒತ್ತಾಯಿಸಿದರು. ಅದರ ಜೊತೆಗೆ,…

ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್‌ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು.  ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್‌

ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿ 39 ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್‌ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರಡಿ ಪ್ರಸ್ತಾಪವಾದ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, “ಜಲಾಶಯ ಬೋರ್ಡ್‌ 1633 ಅಡಿ ಬದಲಿಗೆ 1626 ಅಡಿ ಮಟ್ಟದಲ್ಲಿ ನೀರು ಸಂಗ್ರಹಿಸಲು ಸೂಚಿಸಿದೆ. ತಾಂತ್ರಿಕ ತೊಂದರೆಯಿಂದಾಗಿ ಈ ಬಾರಿ ರೈತರಿಗೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ” ಎಂದರು. ರೈತರ ಹಿತವನ್ನು ಕಾಪಾಡುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದ ಡಿ.ಕೆ.ಶಿವಕುಮಾರ್, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದಾಗಿ ತಿಳಿಸಿದರು. ಜೊತೆಗೆ, ದುರಸ್ತಿ ಕಾಮಗಾರಿಗಳು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣ; ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ

ಬೆಂಗಳೂರು: ರಾಜ್ಯ ಸರ್ಕಾರವು ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದ ದಂಡ ಪಾವತಿಗೆ ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ. ಆಗಸ್ಟ್‌ 23ರಿಂದ ಸೆಪ್ಟೆಂಬರ್‌ 12ರವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. 2023ರ ಫೆಬ್ರವರಿ 11ರೊಳಗೆ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಅನೇಕ ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಈ ಅವಕಾಶ ದೊರಕಲಿದೆ. 2023ರ ಫೆಬ್ರವರಿ 12ರ ನಂತರ ದಾಖಲಾಗಿರುವ ಪ್ರಕರಣಗಳಿಗೆ ಮುಂದಿನ ವರ್ಷ ಇದೇ ರೀತಿಯ ರಿಯಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ದಂಡ ಪ್ರಕರಣಗಳ, ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶ. ಪೊಲೀಸ್ ಇಲಾಖೆಯ ಸಂಚಾರಿ ಇ…

ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು. ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D — Siddaramaiah (@siddaramaiah) August 21, 2025

ಮಣ್ಣಿನ ಗಣಪನೆ ಪೂಜಿಸಿ, ವಿಸರ್ಜಿಸಿರಿ : ಸಚಿವ ಖಂಡ್ರೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ ಬಳಸುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬವು ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು. ಪಿಓಪಿ ಮೂರ್ತಿಗಳು ನೀರಲ್ಲಿ ಕರಗದೇ, ವಿಷಕಾರಿ ಅಂಶ ಸೇರಿಸುತ್ತವೆ. ಮಣ್ಣಿನ ಗಣಪ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು” ಎಂದು ಮನವಿ ಮಾಡಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪ ಮೂರ್ತಿಗಳ ಪೂಜೆ ನಡೆಯುತ್ತಿದೆ. “ಅಲ್ಲಿ ಸಾಧ್ಯವಾಗುತ್ತಿರುವುದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ…

ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು: ಆಗಸ್ಟ್‌ 24ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಆಗಸ್ಟ್‌ 19ರಂದು (ಮಂಗಳವಾರ) ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಜಾರಿಯಲ್ಲಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.