ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಬೆಂಗಳೂರು: “ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…

ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ…

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ.…

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ…

“77 ವರ್ಷಗಳ ನಂತರವೂ ದಲಿತರಿಗೆ ನ್ಯಾಯ ತಲುಪಿಲ್ಲ”

ದಲಿತರ ಮೇಲಿನ ದೌರ್ಜನ್ಯಗಳ ಖಂಡನೆ: ಸಂಘಟನೆಗಳ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ಅನ್ಯಾಯ, ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ, ಹಲವಾರು ದಲಿತ ಸಂಘಟನೆಗಳ ಒಕ್ಕೂಟ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ತಮಟೆ ಚಳುವಳಿಯನ್ನು ನಡೆಸಿತು. ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ಜೈ ಮಾದಿಗರ ಬೌದ್ಧಿಕ ವೇದಿಕೆ ಹಾಗೂ ಜೈಭೀಮ್ ದಲಿತ ಭೂ ರಕ್ಷಣಾ ವೇದಿಕೆಗಳು, ತಮ್ಮ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಬಿ.ಆರ್. ಮುನಿರಾಜರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ವಿವಿಧ ಇಲಾಖೆಗಳು ದಲಿತರ ವಿರುದ್ಧ ತೋರಿಸುತ್ತಿರುವ ‘ವ್ಯವಸ್ಥಿತ ಅನ್ಯಾಯ’ಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಿದವು. ಖಾಸಗಿವಾಗಿ, ಕಂದಾಯ ಇಲಾಖೆಯ ಭೂದಾಖಲೆಗಳ ಉಪ ನಿರ್ದೇಶಕರಾದ ಸುಜಯ್ ಕುಮಾರ್, ಶ್ರೀನಿವಾಸ್ ಮತ್ತು ಭಾನುಪ್ರಕಾಶ್‌ ವಿರುದ್ಧ “ದಲಿತ ವಿರೋಧಿ ನಿಲುವು ಮತ್ತು ಅಕ್ರಮ” ಆರೋಪಿಸಿ, ಅವರನ್ನು ಅಮಾನತು…

ರೌಡಿಶೀಟರ್ ಗಳನ್ನು ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ…

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ ತಮಲೇಹಳ್ಳಿ, ಗೌಡಗೊಂಡನಹಳ್ಳಿ, ಕೆಳಗೋಟೆ, ಚಿಕ್ಕಮ್ಮನಹಟ್ಟಿ, ಹಿರೇಬನ್ನಿಹಟ್ಟಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಸೇರಿ ಎಇಇ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು. ಯುವ ಮುಖಂಡ ತಮಲೇಹಳ್ಳಿ ಶ್ರೀನಿವಾಸ್ ಮಾತನಾಡಿ, “ಕೊಂಡಕುರಿ ಅಂಚಿನಲ್ಲಿರುವ ಹಲವು ಗ್ರಾಮಗಳ ರೈತರು ರಾತ್ರಿ ವೇಳೆ ಜಮೀನಿಗೆ ತೆರಳುವುದೇ ಭಯ. ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವುದರಿಂದ ರಾತ್ರಿ ಬದಲಿಗೆ ಹಗಲಿನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಎಇಇ ಮಲ್ಲಿಕಾರ್ಜುನ್, “ಸೊಕ್ಕೆ–ಪಲ್ಲಾಗಟ್ಟೆ ಮಾರ್ಗದ ವಿದ್ಯುತ್ ಸಂಪರ್ಕವನ್ನು ಬೇರ್ಪಡಿಸಿ, ತುರವನೂರು ಮಾರ್ಗದಿಂದ ಲಿಂಕ್ ಲೈನ್ ಮೂಲಕ ಬೆಳಗಿನ ವೇಳೆಯಲ್ಲಿ ವಿದ್ಯುತ್ ಪೂರೈಸಲು ಕ್ರಮಜರುಗಿಸಲಾಗುತ್ತಿದೆ. ಬುಧವಾರದೊಳಗಾಗಿ ಪರಿಷ್ಕೃತ ವ್ಯವಸ್ಥೆ ಜಾರಿಗೆ ಬರಲಿದೆ”…

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ. A teacher from Agra was fined for not wearing helmet inside a car Post that incident, he now wears a helmet Magical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025