ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರಿಸಿದೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಚರ್ಚಿಸಲು ಶನಿವಾರ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ನಡೆದ ಪ್ರಮುಖರ ಸಭೆ ಗಮನಸೆಳೆಯಿತು. ಅನ್ನದಾತರ ನೆರವಿಗೆ ಎಂದೂ ಬಾರದ ಈ ರಾಜ್ಯ ಸರ್ಕಾರ, ಅತಿವೃಷ್ಟಿ, ಅನಾವೃಷ್ಟಿ, ಬೆಳೆನಾಶ, ಸಾಲಬಾಧೆ, ಸೇರಿದಂತೆ ರೈತರ ಬಗ್ಗೆ ಕನಿಷ್ಠ ಕಾಳಜಿಯನ್ನೂ ತೋರಿಸಲಿಲ್ಲ. ಈಗ ತುಂಗಭದ್ರಾ ಪ್ರದೇಶದ ರೈತರ ಎರಡನೇ ಬೆಳೆಯ ಈ ಗಂಭೀರ ಸಮಸ್ಯೆಗೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ರೈತರ ಹಿತರಕ್ಷಣೆಗಾಗಿ ಹಾಗೂ ಅವರ ಧ್ವನಿಯಾಗಿ ಹೋರಾಟ ರೂಪಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಹೋರಾಟದ ಮುಂದಿನ ರೂಪರೇಷೆಗಳ ಕುರಿತು ಚರ್ಚಿಸಲಾಯಿತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು…

ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶ

ಬೆಂಗಳೂರು: ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಸಮೀಪ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಮಕ್ಕಳಿಲ್ಲದ ಅವರು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಬೆಳೆಸಿದ್ದರು. ಹಾಗಾಗಿ ಅವರು ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾದಾರು. ಅವರ ಈ ಸಾಧನೆಯನ್ನು ಗೌರವಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ನೀಡಿತ್ತು. ಸಂತಾಪ: ಗಿಡಮರಗಳ ಲಾಲನೆ-ಪಾಲನೆ ಪರಿಸರ ಸಂರಕ್ಷಣೆಗೆ ಟೊಂಕಕಟ್ಟಿ ನಿಂತಿರುವ ಸಾವಿರಾರು ಪರಿಸರ ಪ್ರೇಮಿಗಳಿಗೆ ಆದರ್ಶವಾಗಿರುವ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114 ವರ್ಷ) ಅವರು ಇಹಲೋಕ ತ್ಯಜಿಸಿದರು ಎನ್ನುವ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ…

2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿ ಅನುಮೋದನೆಗೊಂಡಿದೆ. ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಧಾರ್ಮಿಕ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ರಜೆಗಳು ಈ ಪಟ್ಟಿ ಒಳಗೊಂಡಿವೆ. 2026ರ ಸಾರ್ವತ್ರಿಕ ರಜಾ ದಿನಗಳು: ಜನವರಿ 15 (ಗುರುವಾರ) – ಉತ್ತರಾಯಣ ಪುಣ್ಯಕಾಲ / ಮಕರ ಸಂಕ್ರಾಂತಿ ಜನವರಿ 26 (ಸೋಮವಾರ) – ಗಣರಾಜ್ಯೋತ್ಸವ ಮಾರ್ಚ್ 19 (ಗುರುವಾರ) – ಯುಗಾದಿ ಹಬ್ಬ ಮಾರ್ಚ್ 21 (ಶನಿವಾರ) – ಖುತುಬ್-ಎ-ರಂಜಾನ್ ಮಾರ್ಚ್ 31 (ಮಂಗಳವಾರ) – ಮಹಾವೀರ ಜಯಂತಿ ಏಪ್ರಿಲ್ 3 (ಶುಕ್ರವಾರ) – ಗುಡ್ ಫ್ರೈಡೇ ಏಪ್ರಿಲ್ 14 (ಮಂಗಳವಾರ) – ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 20 (ಸೋಮವಾರ) – ಬಸವ ಜಯಂತಿ / ಅಕ್ಷಯ ತೃತೀಯ…

ಕಿಚ್ಚ ಸುದೀಪ್ ಅವರ ‘ಮಾರ್ಕ್’; 110 ದಿನಗಳ ಶ್ರಮದ ಫಲ

ಚೆನ್ನೈ: ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮಾಸ್ ಆಕ್ಷನ್ ಎಂಟರ್‌ಟೈನರ್ “ಮಾರ್ಕ್” ಚಿತ್ರವು ಈ ವರ್ಷದ ಕ್ರಿಸ್‌ಮಸ್ ಸಮಯದಲ್ಲಿ ಬಿಡುಗಡೆಯಾಗಲಿದೆ. ಸುಮಾರು 110 ದಿನಗಳ ಕಾಲ ನಡೆದ ನಿರಂತರ ಶೂಟಿಂಗ್ ಹಾಗೂ ಅಸಂಖ್ಯಾತ ಕಾಲ್‌ಶೀಟ್‌ಗಳ ನಂತರ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ತಂಡದವರೊಂದಿಗೆ ಗುಂಪುಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸುದೀಪ್, “ಮಾರ್ಕ್ ಚಿತ್ರದ ಯಶಸ್ಸು ಒಟ್ಟಾಗಿ ಕೆಲಸ ಮಾಡಿದ ತಂಡದ ಸಾಮೂಹಿಕ ಪ್ರಯತ್ನದ ಫಲ. ಪ್ರತಿ ದಿನ ಗುರಿಯತ್ತ ನಿಷ್ಠೆಯಿಂದ ಕೆಲಸ ಮಾಡಿದ ತಂಡದ ಶ್ರಮದ ಫಲ ಇದು,” ಎಂದು ತಿಳಿಸಿದ್ದಾರೆ. “ಜುಲೈ 7 ರಂದು ನಮ್ಮ ಪ್ರಯಾಣ ಆರಂಭವಾಯಿತು. ಪ್ರಾರಂಭದಲ್ಲಿ ಅಸಾಧ್ಯವೆಂದು ತೋರಿದ್ದುದನ್ನು ಸಾಧಿಸುವ ದೃಢನಿಶ್ಚಯದಿಂದ ನಾವು ಹೊರಟಿದ್ದೆವು. ಈ ಪ್ರಯಾಣ ಯಶಸ್ವಿಯಾಗಲು ಕೆಲವರ ಶ್ರಮವಲ್ಲ, ಪ್ರತಿಯೊಬ್ಬ ಸದಸ್ಯನ ಪರಿಶ್ರಮ ಕಾರಣವಾಗಿದೆ. ಪ್ರತಿದಿನ ಒಂದೇ ಉದ್ದೇಶದಿಂದ ಎಲ್ಲರೂ ಕೆಲಸ ಮಾಡಿದರು — ಗುರಿ…

‘ಮೇಕೆದಾಟು’ ಯೋಜನೆ; ‘ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ’ ಎಂದ AG ಶಶಿಕಿರಣ್ ಶೆಟ್ಟಿ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ ಎಂದಿದ್ದಾರೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರೆಯಲು ಹಾದಿ ಸುಲಭವಾದಂತಾಗಿದೆ ಎಂದು ಕೆ ಶಶಿ ಕಿರಣ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.…

ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಕೃಷಿ ಮೇಳ’; ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿ

ಬೆಂಗಳೂರು: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸಮೃದ್ಧ ಕೃಷಿ -ವಿಕಸಿತ ಭಾರತ ನೆಲ,ಜಲ ಮತ್ತು ಬೆಳೆ ಶೀರ್ಷಿಕೆ ಅಡಿಯಲ್ಲಿ ನಾಲ್ಕು ದಿನಗಳವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮೇಳ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಬೆಂಗಳೂರು ಕೃಷಿ ವಿವಿಯೂ ಪ್ರತಿವರ್ಷ ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿದ್ದು, ಉತ್ತಮ ತಳಿಗಳನ್ನು ಈ ಭಾರಿ ಬಿಡುಗಡೆಗೊಳಿಸಿದೆ. ರೈತರಿಗೆ ಕೃಷಿ ವಿವಿಗಳು ನೀಡಬೇಕಾಗಿರುವುದು ಇದನ್ನೆ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್…

‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ

ಬೆಂಗಳೂರು: ‘ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು. ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ…

ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಆರ್.ಅಶೋಕ ಗೇಲಿ

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು. ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು…

ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ

ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವುದಾಗಿ ಸಾರಿಗೆ ಸಚಿವ ರಾಮಲೀಗಾ ರೆಡ್ಡಿ ನೀಡಿರುವ ಭರವಸೆ ಈಡೇರಿದೆ. ಹೊಸದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭವಾಗಿದ್ದು, ಈ ಬಸ್ಸುಗಳಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಚಾಲನೆ ನೀಡಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದ ಸಚಿವರು,ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆ ಮಾಡಿ ನೂತನ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ…

ದೆಹಲಿ ಸ್ಫೋಟ; ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ಹಿಂಪಡೆಯಬೇಕು

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ, ಮತ್ತಿತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ, ದೇಶದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ ಎಂದಿದ್ದಾರೆ. 2019ರ ಭೀಕರ ಪುಲ್ವಾಮಾ ದಾಳಿಯ…