ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಆರು ತಿಂಗಳ ಹಿಂದೆ ನಟ ದರ್ಶನ ಹಾಗೂ ಇತರ ಆರೋಪಿಗಳೊಂದಿಗೆ ಜೈಲು ಸೇರಿದ್ದ ಪವಿತ್ರಾ ಗೌಡ ಇದೀಗ ಬಂಧಮುಕ್ತರಾಗಿದ್ದಾರೆ.
Category: ಸಿನಿಮಾ
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ ಜಾಮೀನಿನಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಅಧಿಕೃತವಾಗಿ ಜಾಮೀನು ಮಂಜೂರಾಗಿದೆ. ಅಷ್ಟೇ ಅಲ್ಲ ಇತರ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಶುಕ್ರವಾರ ಆದೇಶಿಸಿದೆ.
‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ
ಹೈದರಾಬಾದ್: ‘ಪುಷ್ಪ-2: ದಿ ರೂಲ್’ ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ-2: ದಿ ರೂಲ್’ ಚಿತ್ರ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈ ಡಿಸೆಂಬರ್ 4ರಂದು ಸಂಭವಿಸಿದ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಪ್ರಕರಣ ದಾಖಲಿಸಿರುವ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ನಾಂಪಲ್ಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಅಲ್ಲು ಅರ್ಜುನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Cult Movie Shooting Member Suicide Attempt Case
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ ಶೂಟಿಂಗ್ ತಂಡದ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ‘ಕಲ್ಟ್’ ಸಿನಿಮಾದಲ್ಲಿ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣ ನಂತರ ಇಡೀ ಚಿತ್ರ ತಂಡ ವಿವಾದದಲ್ಲಿ ಸಿಲುಕಿದೆ.
ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಆರೋಪ; ಪ್ರಕರಣ ದಾಖಲು
ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟಿ ದೀಪಿಕಾ ದಾಸ್ ತಾಯಿ ಪದ್ಮಲತಾ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು, ತುಮಕೂರು ರಸ್ತೆಯ ಅಪಾರ್ಟ್ ಮೆಂಟ್‌ನಲ್ಲಿ ವಾಸವಾಗಿದ್ದಾರೆ, 8 ತಿಂಗಳ ಹಿಂದೆ ಮಗಳು ದೀಪಿಕಾ ದಾಸ್ ದೀಪಕ್ ಕುಮಾರ್ ಜೊತೆ ಮದುವೆಯಾಗಿದ್ದು, ಒಂದು ತಿಂಗಳ ಆಕೆಯ ಅಳಿಯ ಮಗಳು ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಕಳೆದ 7 ತಿಂಗಳಿಂದ ವ್ಯಕ್ತಿಯೊಬ್ಬ ಪದ್ಮಲತಾಗೆ ಯಶವಂತ್ ಎಂಬ ವ್ಯಕ್ತಿ ಪೋನ್ ಮಾಡಿ ನಿಮ್ಮ ಅಳಿಯ ದೀಪಕ್ ಕುಮಾರ್ ಜೈಲಿಗೆ ಹೋಗಿ ಬಂದಿದ್ದಾನೆ, ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿ ಮೋಸ ಮಾಡಿದ್ದಾನೆಂದು ಹೇಳುತ್ತಿದ್ದಾರೆಂತೆ. ಕೆಲವು ದಿನಗಳ ನಂತರ ದೀಪಿಕಾ ದಾಸ್ ಗೂ ಪೋನ್ ನಿಮ್ಮ ಗಂಡನ…
ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು.
ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.
ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’
ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು. ‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು. . ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ…
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್’ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಂಬೈನ ಮಿಥಿಬಾಯಿ ಕಾಲೇಜ್’ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. Why do we fall, sir (#Kushi, #FamilyStar) So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024
‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು
ರಿಯಾಲಿಟಿ ಶೋ ‘ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್, ಉಗ್ರಂ ಮಂಜು ಅಭಿನಯದ ‘ಟೆನಂಟ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.
ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ
ಮುಂಬೈ: ಬಾಲಿವುಡ್ ತಾರೆಯರಿಗೆ ಜೀವ ಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ ಪೊಲೀಸರು ಆರೋಪಿಗಾಗಿ ಬಲೇ ಬೀಸಿದ್ದಾರೆ. ನಟ ಶಾರುಖ್ ಖಾನ್ ಅವರಿಗೆ ಕರೆ ಮಾಡಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನವೆಂಬರ್ 5 ರಂದು ಪ್ರಕರಣ ದಾಖಲಿಸಿಕೊಂಡ ಬಾಂದ್ರಾ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಛತ್ತೀಸ್ ಘಡದ ರಾಯ್‌ಪುರದಲ್ಲಿ ಇರಬಹುದೆಂಬ ಸುಳಿವು ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
