ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ. ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಜಗದೀಶ್ ಅವರು ಬಿಗ್ಬಾಸ್ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ…
Category: ಸಿನಿಮಾ
ಅರ್ಜುನ್ ಜನ್ಯ ಅವರ ‘45’ ಸಿನಿಮಾದಲ್ಲಿ ಶಿವಣ್ಣ-ಉಪ್ಪಿ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರೂ ಕಾಣಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರ ಫರ್ಸ್ಟ್ ಲುಕ್ ಅನಾವರಣಗೊಳಿಸುವ ‘45’ ಸಿನಿಮಾ ಬಗ್ಗೆ ಕುತೂಹಲವನ್ನು ಚಿತ್ರ ತಂಡ ಹೆಚ್ಚಿಸಿದೆ.
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ ‘ಮೇಘ’ ನವೆಂಬರ್ ಅಂತ್ಯಕ್ಕೆ ಬಿಡುಗಡೆ
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ ‘ಮೇಘ’ ಚಿತ್ರ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರವನ್ನು ಚರಣ್ ನಿರ್ದೇಶಿಸಿದ್ದಾರೆ. ಶೋಭರಾಜ್, ಸುಂದರ್ ವೀಣಾ, ಸಂಗೀತಾ ಮುಂತಾದ ಕಲಾವಿದರು ‘ಮೇಘ’ ಚಿತ್ರದಲ್ಲಿ ನಟಿಸಿದ್ದಾರೆ. ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಅವರ ನಟನೆಯೂ ಗಮನಸೆಳೆಯಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಹಾಗೂ ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ವಿಧಿವಶ; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಬೆಂಗಳೂರು: ಕನ್ನಡ ಸಿನಿಲೋಕದ ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್ ವೇಳೆ ಧಿವಶರಾಗಿದ್ದಾರೆ. ಭಾನುವಾರ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ ಸಹಿತ ಅನೇಕ ಸಿನಿಮಾಗಳ ಮೂಲಕ ಖ್ಯಾತಿಯಾಗಿದ್ದ ನಿರ್ದೇಶಕ 52 ವರ್ಷ ಹರೆಯದ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಅವರು ವಾಸವಿದ್ದರು. ಭಾನುವಾರ ಬೆಳಿಗ್ಗೆ ಅಪಾರ್ಟ್‌ಮೆಂಟ್ ಆವರಣದಲ್ಲಿ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ನಿವಾಸಿಗಳ ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಶೋಧಿಸಿದಾಗ ಗುರುಪ್ರಸಾದ್ ವಾಸವಿದ್ದ ಫ್ಲಾಟ್‌ನಲ್ಲಿ ವಾಸನೆ ಬರುತ್ತಿದ್ದುದು ಗೊತ್ತಾಯಿತು. ಕೂಡಲೇ ಮನೆಯನ್ನು ಪರಿಶೀಲಿಸಿದಾಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ಅವರು ಶನಿವಾರ ದಾಖಲಾಗಿದ್ದಾರೆ. ದರ್ಶನ್ ಆಗಮನ ಹಿನಯ ಆಸ್ಪತ್ರೆಗೆ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರಣದಿಂದಾಗಿ ಆಸ್ಪತ್ರೆ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..
ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯ ಕೋರಿ ಪೋಸ್ಟ್ ಹಾಕಿರುವ ಧನಂಜಯ್, ‘ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ’ ಎಂದು ಕೋರಿದ್ದಾರೆ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗೋಕು ಎಂದೂ ಬರೆದುಕೊಂಡಿದ್ದಾರೆ. ಸ್ತ್ರೀರೋಗ ತಜ್ಞೆಯಾಗಿರುವ ಧನ್ಯತಾ ಜೊತೆ ಡಾಲಿ ಧನಂಜಯ ಅವರು ಅನೇಕ ವರ್ಷಗಳ ಪರಿಚಯ ಹೊಂದಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇವರು ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. View this post on Instagram A post shared by Daali Dhananjaya (@dhananjaya_ka)…
ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ
ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕೋರಿಕೆಯನ್ನು ಮನ್ನಿಸಿ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಆದೇಶದಿಂದ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು. ಜೊತೆಗೆ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಸೂಚಿಸಿದೆ. ಈ ಜಾಮೀನು ಅವಧಿಯಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.
ತೆಲುಗು ಬಿಗ್ಬಾಸ್ ವೇದಿಕೆಯಲ್ಲಿ ಕನ್ನಡದಲ್ಲೇ ಮಾತನಾಡಿದ ಜೂ.ಎನ್ಟಿಆರ್
View this post on Instagram A post shared by Memes Rajadhani™ (@memes.rajadhani)
ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು ‘ಸಿಂಗಂ ಅಗೈನ್’ ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ. ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು ‘ಸಿಂಗಂ ಅಗೈನ್’ ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.
