‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-2024 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಯಕ್ಷಗಾನದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕಿದೆ ಎಂದು ಪ್ರತಿಪಾದಿಸಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ…

ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ನಿರಾಶ್ರಿತರ ನೆರವಿಗೆ ಧಾವಿಸಿರುವ ಚಿತ್ರೋದ್ಯಮದ ಗಣ್ಯರು ಧನಸಹಾಯ ಮಾಡುತ್ತಿದ್ದಾರೆ. ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನ‌ಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್‌ ಅವರು 2 ಕೋಟಿ ರೂ. ನೆರವು ನೀಡಿದ್ದಾರೆ. ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಅವರು ಈ ಮೊತ್ತವನ್ನು ಪಾವತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ಹೈದರಾಬಾದ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರ್ಘಟನೆಯ ಸಂತ್ರಸ್ತರ ನೆರವಿಗೆ ಧಾವಿಸಿರುವ ದಕ್ಷಿಣ ಭಾರತದ ಖ್ಯಾತ ನಟರಾದ ಚಿರಂಜೀವಿ ಹಾಗೂ ರಾಮ್ ಚರಣ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ, ಈ ದುರಂತದಲ್ಲಿ 380ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಸಾವಿರಾರು ಮಂದಿ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂತ್ರಸ್ತರ ನೆರವಿಗೆ ಸಿನಿಮಾ ತಾರೆಯರು ಸಹಾಯ ಹಸ್ತ ಚಾಚಿದ್ದಾರೆ. ಇದೇ ವೇಳೆ, ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

ಸಿನಿರಂಗದಲ್ಲಿ ‘ವೇದಾ’ ಚಿತ್ರದ ತೀವ್ರ ಕುತೂಹಲ ಕೆರಳಿಸಿದೆ. ನಟ ಜಾನ್ ಅಬ್ರಹಾಂ ಮತ್ತು ಶ್ರಾವರಿ ಅವರು ‘ವೇದಾ’ದಲ್ಲಿ ನಟಿಸಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿಖಿಲ್ ಅಡ್ವಾಣಿ ಅವರು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟ್ರೇಲರ್ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷೆಯ ಈ‌ ಸಿನಿಮಾ ಸ್ವಾತಂತ್ರ್ಯ ದಿನದಂದು ತೆರೆಕಾಣಲಿದೆ ಎಂದು ನಟ ಜಾನ್ ಅಬ್ರಹಾಂ ಮಾಹಿತಿ ಹಂಚಿಕೊಂಡಿದ್ದಾರೆ.

ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ. ನಟಿ ಸಮಂತಾ ರೂತ್ ಪ್ರಭು ಮತ್ತು ವರುಣ್ ಅಭಿನಯದ ಸಿಟಡೆಲ್: ಹನಿ ಬನ್ನಿ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. ಈ ಚಿತ್ರವನ್ನು ರಾಜ್ ಮತ್ತು ಡಿ.ಕೆ. ನಿರ್ದೇಶಿಸಿದ್ದಾರೆ. ಸಿನಿ ಲೋಕದಲ್ಲಿ ಮತ್ತೊಂದು ರಂಜನೆಯ ಕ್ಷಣಗಳಿಗೆ ಈ ಸಿನಿಮಾ ಸಾಕ್ಷಿಯಾಗಲಿದೆ ಎಂಬ ಕಮೆಂಟ್ಸ್ ಗಮನಸೆಳೆದಿದೆ.

ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರ್ಘಟನೆ ನೂರಾರು ಮಂದಿಯನ್ನು ಬಲಿತೆಗೆದುಕೊಂಡಿದೆ. ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿವೆ. ಅಸಂಖ್ಯ ಮಂದಿ ಇನ್ನೂ ನಾಪತ್ತೆಯಾಗಿದ್ದು, ಸಂತ್ರಸ್ತರ ಆಕ್ರಂದನ ಮುಗಿಲುಮುಟ್ಟಿದೆ. ಈ ದುರ್ಘಟನೆಯಿಂದಾಗಿ ವಯನಾಡಿನಲ್ಲಿ ಸೂತಕದ ಛಾಯೆ ಆವರಿಸಿಕೊಂಡಿದೆ. ತಮ್ಮವರನ್ನು ಕಳೆದುಕೊಂಡವರ ರೋದನ ಮನಕಲಕುವಂತಿದೆ. ಈ ಸಂದರ್ಭದಲ್ಲಿ ನಟಿ ಕನ್ನಡತಿ ರಶ್ಮಿಕಾ ಮಂದಣ್ಣ ಮಾನವೀಯತೆ ಮೆರೆದಿದ್ದಾರೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ರಶ್ಮಿಕಾ ನಡೆಯಿಂದ ಪ್ರೇರಿತವಾಗಿರುವ ಅನೇಕ ಸಿನಿಮಾ ತಾರೆಯರು ಧನಸಹಾಯಕ್ಕೆ ಮುಂದಾಗಿದ್ದಾರೆ.