ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ ‘ಅಪ್ಪು’ ರೀ- ರೀಲಿಸ್ ಆಗಲಿದೆ. ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಅಪ್ಪು’ ಚಿತ್ರವನ್ನು PRK Productions ಮರು ಬಿಡುಗಡೆ ಮಾಡುವ ಕುರಿತು ಪಿಆರ್ ಕೆ ಪ್ರೊಢಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣ ‘X’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Misunderstanding ಬೇಡ! 💞 Get ready to relieve the magic. #Appu returns to theaters in honor of Dr. Puneeth Rajkumar’s 50th birthday. ▶️ In Cinemas on 14th March 2025 A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q — Ashwini Puneeth Rajkumar (@Ashwini_PRK) February 26, 2025
Category: ಸಿನಿಮಾ
ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ: ಮಹಾ ಕುಂಭಮೇಳದಲ್ಲಿ ‘ಒಡೆಲಾ 2’ ಟೀಸರ್ ಬಿಡುಗಡೆ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ ‘ಒಡೆಲಾ 2′ ಸಿನಿಮಾ ಟೀಸರ್’ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ ‘ಒಡೆಲಾ 2’ ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ ‘ಒಡೆಲಾ 2’ನಲ್ಲಿ ಸಾದ್ವಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ‘ಒಡೆಲಾ 2’ ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್’ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ.
ಯಶ್ ‘ರಾಮಾಯಣ’ ಪಯಣ ಆರಂಭ; ರಾವಣ ಪಾತ್ರಕ್ಕಾಗಿ ಶೂಟಿಂಗ್
ಮುಂಬೈ: ನಟ ಯಶ್ ‘ರಾಮಾಯಣ’ ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಮೊದಾಲದವರೂ ನಟಿಸುತ್ತಿದ್ದಾರೆ. ತಿವಾರಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಭಾರತದಲ್ಲಿ ನಡೆಯುತ್ತಿದೆ. ನಟ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಮತ್ತು ನಟಿ ಸಾಯಿ ಪಲ್ಲವಿ ಸೀತಾದೇವಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ರಣಬೀರ್ ಮತ್ತು ಪಲ್ಲವಿ ಚಿತ್ರದ ಕೆಲವು ಭಾಗಗಳನ್ನು ಮುಂಬೈನಲ್ಲಿ ಚಿತ್ರೀಕರಿಸಿದ್ದಾರೆ. ಮತ್ತು ಈಗ, ಚಿತ್ರದ ನಿರ್ಮಾಪಕರೂ ಆಗಿರುವ ಯಶ್ ಮುಂಬೈನಲ್ಲಿ ತಮ್ಮ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಫೆಬ್ರವರಿ 21 ರಂದು ಯಶ್ ರಾಮಾಯಣಕ್ಕಾಗಿ ತಮ್ಮ ಭಾಗಗಳ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಶೂಟಿಂಗ್ ಭಾಗವು ಯುದ್ಧದ ಸನ್ನಿವೇಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ತಂಡವು ಮುಂಬೈನ ಅಕ್ಸಾ ಬೀಚ್‌ನಲ್ಲಿ ಕೆಲವು ನಿರ್ಣಾಯಕ ಯುದ್ಧ ದೃಶ್ಯಗಳನ್ನು ಚಿತ್ರೀಕರಿಸಲಿದೆ ಎಂದು ಮೂಲಗಳು.…
ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ. ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು ,…
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್ಡಮ್’; ಟೀಸರ್ ಅನಾವರಣ
ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್ಡಮ್’ ಎಂದು ಹೆಸರಿಡಲಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಭಾಸೆಗಳಲ್ಲಿ ‘ಕಿಂಗ್ಡಮ್’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್ ಎನ್ಟಿಆರ್, ಹಿಂದಿಯಲ್ಲಿ ರಣಬೀರ್ ಕಪೂರ್ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್ಕಮ್’ ಟೀಸರ್ಗೆ ಧ್ವನಿ ನೀಡಿರುವುದು ವಿಶೇಷ..
ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ
ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!’ ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ.
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ.
ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್
‘ದಿ ಐ’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ. ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ…
