ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ ರಾಖೀ ಸಾವಂತ್

ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ…

ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಳ್ಳಿ ಹೈದ ಹನುಮಂತ ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಎಂಟ್ರಿಕೊಟ್ಟಿದ್ದ ಹನುಮಂತ ಪ್ರಶಸ್ತಿ ಗೆದ್ದು ಅಚ್ಚರಿ ಮೂಡಿಸಿದೆ. ಟಾಪ್ ಐವರ ಪೈಕಿ ಉಗ್ರಂ ಮಂಜು, ರಜತ್ ಮತ್ತು ಮೋಕ್ಷಿತ ಒಬ್ಬೊಬ್ಬರಾಗಿಯೇ ಹೊರನಡೆದರು. ಅಂತಿಮವಾಗಿ ತ್ರಿವಿಕ್ರಮ್ ಮತ್ತು ಹನುಮಂತ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕಿಚ್ಚ ಸುದೀಪ್ ಅವರು ಹನುಮಂತ ಅವರ ಗೆಲುವನ್ನು ಪ್ರಕಟಿಸುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ಕುತೂಹಲಕ್ಕೆ ತೆರೆ ಬಿದ್ದಿದೆ.

ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

ಬೆಂಗಳೂರು:​ ಕನ್ನಡ ‘ಬಿಗ್​ ಬಾಸ್’ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಗಲಾಟೆ ಸಂದರ್ಭದಲ್ಲಿ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು​ ಜಗದೀಶ್​ ಸಹಿತ ಹಲವರನ್ನು ಬಂಧಿಸಿದ್ದಾರೆ.

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ, ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ. ಕನ್ನಡದ ಕೆಲಸಕ್ಕೆ ನಮ್ಮ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ,…

‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

‘ಬಿಗ್ ಬಾಸ್ ಕನ್ನಡ’ ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ.   View this post on Instagram   A post shared by GANGA JADHAV (@ganga_jadhav__) ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು. ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ.

‘ಯಾವ ಪ್ರಶಸ್ತಿಯೂ ಬೇಡ’; ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಈ ಪುರಸ್ಕಾರವನ್ನು ತಾವು ಸ್ವೀಕರಿಸುವುದಿಲ್ಲ ಎಂದು ಸುದೀಪ್ ಹೇಳಿಕೊಂಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಕಿಚ್ಚ ಸುದೀಪ್ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆಯುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ನಾನು ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ , ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸುವ ನಿರ್ಧಾರ ಮಾಡಿಕೊಂಡಿದ್ದೇನೆ ಎಂದು ನಾನು ತಿಳಿಸಲೇಬೇಕು. ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ. ನಾನು ಬಯಸುವುದಕ್ಕಿಂತ ಹೆಚ್ಚು. ಅವರಲ್ಲಿ ಒಬ್ಬರು ಅದನ್ನು ಪಡೆಯುವುದನ್ನು ನೋಡುವುದು ನನಗೆ ಇನ್ನಷ್ಟು…

ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ. ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ ಎನ್ನಲಾಗಿದೆ. 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಇದೀಗ ರಾಮ್ ಗೋಪಾಲ್ ವರ್ಮಾವಿರುದ್ಧ ಕೋರ್ಟ್ ತೀರ್ಪು ಪ್ರಕಟಿಸಿದೆ. ಜ.21ರಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ದೂರುದಾರರಿಗೆ ಮೂರು ತಿಂಗಳಲ್ಲಿ 3.72 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೊತ್ತ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಘಟನೆ ಏನು?

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಡಿಸಿಪಿ ದೀಕ್ಷಿತ್‌ಕುಮಾರ್ ಅಶೋಕ್ ಗೆದಮ್ ಆರೋಪಿಯನ್ನು ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿರುವ ಹಿರಾನಂದಾನಿ ಎಸ್ಟೇಟ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಕಳ್ಳತನ ಸಂಬಂಧ ಆತ ಮನೆಯೊಳಗೆ ನುಗ್ಗಿದ್ದು, ಆತನಿಗೆ ತಾನು ನತಮ ಮನೆಯೊಳಗೆ ಪ್ರವೇಶಿಸಿದ್ದೇನೆ ಎಂಬುದು ಗೊತ್ತಿರಲಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದವರು ವಿವರಿಸಿದ್ದಾರೆ.

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ ಕೈ ಜೋಡಿಸಿದ್ದಾರೆ. ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ.   View this post on Instagram   A post shared by All About Mangaluru (@all_about_mangaluru)