ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಚಾಲನೆ ಸಿಕ್ಕಿದ್ದು, ಈ ಬಾರಿ ಬರೋಬ್ಬರಿ 16 ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ, ಸಿನಿಮಾ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಯ ಆಟಕ್ಕೆ ಕಾಲಿಟ್ಟಿದ್ದಾರೆ. ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ. ಓಂ ಪ್ರಕಾಶ್ ರಾವ್: ಕನ್ನಡದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಈ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 4’ರಲ್ಲಿ ಕಾಣಿಸಿಕೊಂಡಿದ್ದರು. ಅನಾರೋಗ್ಯದ ಕಾರಣದಿಂದ ಶೋನಿಂದ ಹೊರಬಂದಿದ್ದ ಅವರು ಇದೀಗ ಮತ್ತೆ ದೊಡ್ಮನೆಗೆ ಮರಳಿದ್ದಾರೆ. ಸಂಗೀತಾ ಭಟ್: ಹಲವು ವರ್ಷಗಳಿಂದ ಚಿತ್ರರಂಗದಲ್ಲಿರುವ ಸಂಗೀತಾ ಭಟ್, ಒಂದು ಹಂತದಲ್ಲಿ ಸಿನಿಮಾ ಕ್ಷೇತ್ರದಿಂದ ದೂರ ಉಳಿದಿದ್ದರು. ಇದೀಗ ತಮ್ಮ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಪ್ರಥಮಾ ಪ್ರಸಾದ್: ಹಿರಿಯ ನಟಿ…

ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕ್ಷಮೆಯಾಚಿಸಿದರೂ, ಪ್ರಕರಣ ಹಿಂಪಡೆಯಲು ರಮ್ಯಾ ನಿರಾಕರಿಸಿದ್ದಾರೆ. ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಆರೋಪಿಗಳು ರಮ್ಯಾ ಅವರ ಬಳಿ ಕ್ಷಮೆ ಕೋರಿ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಮನವಿ ಮಾಡಿದ್ದಾರೆ. ಆರೋಪಿಗಳು ಕಣ್ಣೀರಿಟ್ಟು ಕ್ಷಮೆ ಕೇಳಿದ್ದು, ಕೆಲವರು ರಮ್ಯಾ ಅವರ ಕಾಲಿಗೆ ಬಿದ್ದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ರಮ್ಯಾ ತಮ್ಮ ನಿಲುವಿನಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ‘ಪ್ರಕರಣ ಹಿಂಪಡೆಯುವ ಪ್ರಶ್ನೆಯೇ ಇಲ್ಲ’ ಮೊಬೈಲ್ ಹಾಗೂ ಇಂಟರ್‌ನೆಟ್ ಸೌಲಭ್ಯವಿದೆ ಎಂಬ ಕಾರಣಕ್ಕೆ ಯಾರ ವಿರುದ್ಧ ಬೇಕಾದರೂ ಅಶ್ಲೀಲ ಹಾಗೂ ಅವಾಚ್ಯವಾಗಿ ಕಾಮೆಂಟ್ ಮಾಡಬಹುದೇ ಎಂದು ರಮ್ಯಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಟ್ರೋಲ್ ಮತ್ತು ಸೈಬರ್ ದೌರ್ಜನ್ಯದ ವಿರುದ್ಧ…

ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

ಬೆಂಗಳೂರು: ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್‌ ಮತ್ತು ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಗುರುವಾರ ಕರ್ನಾಟಕ ಹೈಕೋರ್ಟ್‌ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್‌ ಹಾಗೂ ಎಚ್. ಶಾಂತಿಭೂಷಣ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಾಗರತ್ನ ಹಾಗೂ ಮೂವರು ಮಕ್ಕಳ ಹಿತವನ್ನು ಪರಿಗಣಿಸಿದ ನ್ಯಾಯಾಲಯ, ವಿಜಯ್‌ ಅವರ ಸ್ಥಾನಮಾನ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ ಎಂದು ವರದಿಯಾಗಿದೆ. ಆದೇಶ ಹೊರಬಂದ ಬೆನ್ನಲ್ಲೇ ದುನಿಯಾ ವಿಜಯ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿ, ನ್ಯಾಯಾಲಯದ ತೀರ್ಪನ್ನು ಗೌರವದಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ನ್ಯಾಯಾಲಯದ ಮೇಲಿನ ತಮ್ಮ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದಿರುವ ಅವರು, ತಮ್ಮ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ್ದಾರೆ. ವಿಚ್ಛೇದನದ ವಿಚಾರವಾಗಿ…

ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

ಬೆಂಗಳೂರು: ‘ಪ್ರೇಮಲು’ ಸೇರಿದಂತೆ ಜನಪ್ರಿಯ ಚಿತ್ರಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ನಟಿ ಮಮಿತಾ ಬೈಜು ತೀವ್ರ ಜ್ವರ ಹಾಗೂ ಮೈಕೈ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಆಸ್ಟ್ರೇಲಿಯಾಗೆ ತೆರಳಿ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಸೆಪ್ಟೆಂಬರ್‌ 5ರಂದು ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ‘ಲೆಂಡಾಕ್ಸಿಸ್ ಕ್ಲೈಡ್ ಓಣಂ 2026’ ಕಾರ್ಯಕ್ರಮದಲ್ಲಿ ಮಮಿತಾ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕ್ಲೈಡ್ ಮಲಯಾಳಿ ಅಸೋಸಿಯೇಷನ್ ಕಾರ್ಯಕ್ರಮವನ್ನು ಮುಂದೂಡಿದೆ. ಕಾರ್ಯಕ್ರಮದ ಹೊಸ ದಿನಾಂಕ ನಿಗದಿಪಡಿಸಲು ಆಯೋಜಕರು ಮಮಿತಾ ಅವರ ತಂಡ ಹಾಗೂ ಕಾರ್ಯಕ್ರಮದ ಸ್ಥಳದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ವಿಡಿಯೋ ಸಂದೇಶದ ಮೂಲಕ ಅಭಿಮಾನಿಗಳು ಹಾಗೂ ಆಯೋಜಕರಿಗೆ ಮಾಹಿತಿ ನೀಡಿರುವ ಮಮಿತಾ, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರಯಾಣ…

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಹಲವು ವರ್ಷಗಳ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದೆ. ವಿಚ್ಛೇದನದ ಜತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ದುನಿಯಾ ವಿಜಯ್ ಅವರಿಗೆ ನ್ಯಾಯಾಲಯ ಸೂಚಿಸಿದೆ. ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ಜೀವನ ನಿರ್ವಹಣೆಯನ್ನು ಪರಿಗಣಿಸಿ ಜೀವನಾಂಶದ ಮೊತ್ತ ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಆದಾಯ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನೂ ಪರಿಗಣಿಸಲಾಗಿದೆ. ‘ದುನಿಯಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿದ ವಿಜಯ್ ಅವರ ವೈಯಕ್ತಿಕ…

ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

ಬೆಂಗಳೂರು: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಘೋಷಣೆಯಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಇದೀಗ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯನ ಭವ್ಯ ಇತಿಹಾಸವನ್ನು ತೆರೆಮೇಲೆ ಕಟ್ಟಿಕೊಡುವ ‘ದೇವರಾಯ’ ಚಿತ್ರ ಘೋಷಣೆಯಾಗಿದೆ. ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ವಿಶೇಷವಾದ ದಿನದಂದು ಒಂದು ಐತಿಹಾಸಿಕ ಪಾತ್ರ ಹಾಗೂ ಕಾಲವನ್ನು ಮೀರಿ ನಿಲ್ಲುವ ರಾಜನ ಪರಂಪರೆಯನ್ನು ಹಂಚಿಕೊಳ್ಳುತ್ತಿದ್ದೇನೆ. ಶ್ರೀ ಕೃಷ್ಣದೇವರಾಯನ ಈ ಪಯಣದ ಭಾಗವಾಗಲು ಹೆಮ್ಮೆ ಎನಿಸುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ. ಚಿತ್ರದಲ್ಲಿ ಸುದೀಪ್ ಅವರು ಶ್ರೀ ಕೃಷ್ಣದೇವರಾಯನ ಗಾಂಭೀರ್ಯಭರಿತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ ಈ ಪ್ಯಾನ್-ಇಂಡಿಯಾ ಬಿಗ್ ಬಜೆಟ್ ಚಿತ್ರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. Experience the rise of Devaraaya https://t.co/8JGsoMIWJm On a day filled with love, I share…

ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

ಬೆಂಗಳೂರು: ಕಿಚ್ಚ ಸುದೀಪ್ ಅವರ 53ನೇ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಕಾಂಬಿನೇಷನ್‌ನ ಬಿಗ್ ಬಜೆಟ್ ಚಿತ್ರ ಇದಾಗಿದ್ದು, ಪೋಸ್ಟರ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಹಿಮಾಚ್ಛಾದಿತ ಪ್ರದೇಶ, ಬೈಕ್ ಹಾಗೂ ಮೇಲ್ಭಾಗದಲ್ಲಿ ಹಾರುತ್ತಿರುವ ಹೆಲಿಕಾಪ್ಟರ್ ನಡುವೆ ಸುದೀಪ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಪೋಸ್ಟರ್‌ನ ಪ್ರಮುಖ ಆಕರ್ಷಣೆಯಾಗಿದೆ. ಸಿನಿಮಾ ಮುಂದಿನ ವರ್ಷ ತೆರೆಗೆ ಬರಲಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ‘ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ಸುದೀಪ್ ಮತ್ತು ಅನೂಪ್ ಭಂಡಾರಿ ಜೋಡಿ ಮತ್ತೆ ಒಂದಾಗಿರುವ ಸಿನಿಮಾ ಇದಾಗಿದೆ. ಪ್ರೈಮ್ ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅನೂಪ್ ಭಂಡಾರಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಫಸ್ಟ್ ಲುಕ್…

ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಪೂರ್ಣಗೊಳಿಸಿದ್ದು, ಮಿಶ್ರ ಪ್ರತಿಕ್ರಿಯೆಯ ನಡುವೆಯೂ ವಿಶ್ವದಾದ್ಯಂತ ₹315 ಕೋಟಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ₹300 ಕೋಟಿ ಕ್ಲಬ್ ಸೇರಿದೆ. ಚಿತ್ರ ಮೊದಲ ದಿನವೇ ಭಾರತದಲ್ಲಿ ₹101.10 ಕೋಟಿ ನೆಟ್ ಗಳಿಸುವ ಮೂಲಕ ಭರ್ಜರಿ ಆರಂಭ ಕಂಡಿತ್ತು. ಬಳಿಕ ಗಳಿಕೆಯಲ್ಲಿ ಇಳಿಕೆ ಕಂಡುಬಂದಿದೆ. ಮೊದಲ ದಿನ ₹101.10 ಕೋಟಿ, ಎರಡನೇ ದಿನ ₹37.65 ಕೋಟಿ, ಮೂರನೇ ದಿನ ₹27.20 ಕೋಟಿ, ನಾಲ್ಕನೇ ದಿನ ₹25.15 ಕೋಟಿ ಹಾಗೂ ಐದನೇ ದಿನ ₹23 ಕೋಟಿ ನೆಟ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ಏಳು ದಿನಗಳಲ್ಲಿ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ ₹229.60 ಕೋಟಿಗೆ ತಲುಪಿದೆ. ಭಾರತದ ಗ್ರಾಸ್ ಕಲೆಕ್ಷನ್ ₹274.25 ಕೋಟಿ ಎಂದು ಅಂದಾಜಿಸಲಾಗಿದೆ. ವಿದೇಶಿ ಮಾರುಕಟ್ಟೆಯಲ್ಲೂ ‘ಟಾಕ್ಸಿಕ್’ ಉತ್ತಮ ಗಳಿಕೆ…

ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಕ್ರೇಜಿಸ್ಟಾರ್’ ವಿ. ರವಿಚಂದ್ರನ್ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಸಾಂಸ್ಕೃತಿಕ ಕ್ಷೇತ್ರದಿಂದ ರವಿಚಂದ್ರನ್ ಅವರ ಹೆಸರನ್ನು ಪರಿಗಣಿಸಲು ಕಾಂಗ್ರೆಸ್ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ರವಿಚಂದ್ರನ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಾಲ್ಯದ ಸ್ನೇಹಿತ ಹಾಗೂ ಕ್ಲಾಸ್‌ಮೇಟ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಬಾಲ್ಯದ ಸ್ನೇಹಿತ ಶಿವಕುಮಾರ್ ಅವರನ್ನು ರವಿಚಂದ್ರನ್ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ರವಿಚಂದ್ರನ್ ಸೇವೆ ಸಲ್ಲಿಸಿದ್ದಾರೆ. ಅವರ ಕಲಾ ಕ್ಷೇತ್ರದ ಕೊಡುಗೆಯನ್ನು ಗುರುತಿಸಿ ಸಾಂಸ್ಕೃತಿಕ ಕ್ಷೇತ್ರದ ಕೋಟಾದಡಿ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಸರ್ಕಾರ ನಿರ್ಧರಿಸಿದೆ…

ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

ಹೈದರಾಬಾದ್: ನಟ ನಾಗಾರ್ಜುನ ಅಕ್ಕಿನೇನಿ ಅವರ ವೃತ್ತಿಜೀವನದ 100ನೇ ಚಿತ್ರಕ್ಕೆ ‘ಕಿಂಗ್ 100’ ಎಂದು ಶೀರ್ಷಿಕೆ ಇಡಲಾಗಿದೆ. ಆರ್.ಎ. ಕಾರ್ತಿಕ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 24ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ. ನಾಗಾರ್ಜುನ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅನ್ನಪೂರ್ಣ ಸ್ಟುಡಿಯೋಸ್ ಚಿತ್ರದ ಶೀರ್ಷಿಕೆಯೊಂದಿಗೆ ಬಹುನಿರೀಕ್ಷಿತ ಮೊದಲ ಗ್ಲಿಂಪ್ಸ್ ಬಿಡುಗಡೆ ಮಾಡಿದೆ. ಸುಮಾರು ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿದ್ದ ಸಿನಿಮಾವನ್ನು ಸಾಕಷ್ಟು ಗೌಪ್ಯವಾಗಿ ಇಡಲಾಗಿತ್ತು. ಸುಮಾರು ಒಂದೂವರೆ ನಿಮಿಷದ ಗ್ಲಿಂಪ್ಸ್‌ನಲ್ಲಿ ನಾಗಾರ್ಜುನ ಅವರನ್ನು ವಿಭಿನ್ನ ಹಾಗೂ ಸ್ಟೈಲಿಶ್ ಅವತಾರದಲ್ಲಿ ಪರಿಚಯಿಸಲಾಗಿದೆ. ‘‘ಈ ಜಗತ್ತಿನಲ್ಲಿ ಎರಡು ರೀತಿಯ ಜನರಿದ್ದಾರೆ. ಹಣವಿರುವವರು ಮತ್ತು ಹಣವಿಲ್ಲದವರು. ನನ್ನಲ್ಲಿ ಹಣವಿಲ್ಲದಾಗ ಅವರು ನನ್ನನ್ನು ಸೋತವನು ಎಂದರು. ಹಣವಿದ್ದಾಗ ರಾಜ ಎಂದರು. ಆದರೆ ಈ ಗುರುತು ಹಣಕ್ಕಿಂತ ಹೆಚ್ಚು ಶಕ್ತಿಶಾಲಿ’’ ಎಂಬ ಸಂಭಾಷಣೆ ಗಮನ ಸೆಳೆದಿದೆ. ONE KING 👑 ∞…