ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಬಳಿಯ ಟೊಯೋಟಾ ಕಾರ್ಖಾನೆಯ ಸ್ನಾನಗೃಹದ ಗೋಡೆಗಳ ಮೇಲಿನಪಾಕಿಸ್ತಾನ ಪರವಾದ ಬರಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು 24 ವರ್ಷದ ಹೈಮದ್ ಹುಸೇನ್ ಮತ್ತು 20 ವರ್ಷದ ಸಾದಿಕ್ ಎಂದು ಗುರುತಿಸಲಾಗಿದೆ, ಇಬ್ಬರೂ ಟೊಯೋಟಾ ಬೊಶೋಕು ಆಟೋಮೋಟಿವ್ ಇಂಡಿಯಾ ಕಂಪನಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿದ್ದು ಅವರು ಉತ್ತರ ಕರ್ನಾಟಕ ಮೂಲದವರೆನ್ನಲಾಗಿದೆ. ಹಸಿರು ಬಣ್ಣವನ್ನು ಬಳಸಿ ಕನ್ನಡದಲ್ಲಿ ಬರೆಯಲಾದ ಈ ಬರಹದಲ್ಲಿ ‘ಪಾಕಿಸ್ತಾನಕ್ಕೆ ವಿಜಯ’ ಮುಂತಾದ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿವೆ. ಕಾರ್ಖಾನೆಯು ಮೂರು ಪಾಳಿಗಳಲ್ಲಿ ಕೆಲಸ ಮಾಡುವ 2,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಪ್ರತಿ ಪಾಳಿಯಲ್ಲಿ 600 ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಮಾರ್ಚ್ 16 ರಂದು ಮೊದಲ ಪಾಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.…

ರಾಜ್ಯದ ವಿದ್ಯಾರ್ಥಿಗಳಿಗೆ AI ತರಬೇತಿ; NIELIT ಜೊತೆ GTTC ಒಪ್ಪಂದ

ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. GTTC ಕ್ಯಾಂಪಸ್‌ನಲ್ಲಿ NIELIT ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ನೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ (MoU) ಬುಧವಾರ ಸಹಿ ಹಾಕಲಾಯಿತು. ಈ ಸಹಯೋಗವು ವಿದ್ಯಾರ್ಥಿಗಳಿಗೆ – ವಿಶೇಷವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಚಿನಲ್ಲಿರುವ ಸಮುದಾಯಗಳವರಿಗೆ – ಕೃತಕ ಬುದ್ಧಿಮತ್ತೆ (AI), ಇಂಟರ್ನೆಟ್ ಆಫ್ ಥಿಂಗ್ಸ್ (IoT), ಡೇಟಾ ವಿಶ್ಲೇಷಣೆ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಅತ್ಯಾಧುನಿಕ ತರಬೇತಿ ಒದಗಿಸಲು ನೆರವಾಗಲಿದೆ. ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ GTTC ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ದಿನೇಶ್ ಕುಮಾರ್ ಮತ್ತು NIELIT…

ಮಲ್ಪೆಯಲ್ಲಿ‌ ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಉಡುಪಿ: ಮೀನು ಅಳ್ಳತನ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದಲ್ಲಿ ಉಡುಪಿ ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಲಾಗಿತ್ತು. ಮಾರ್ಚ್ 18 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೊಂದೆಡೆ, ಹಲ್ಲೆ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದಿರುವ ಸಿಎಂ, ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧ ಎಂದಿದ್ದಾರೆ. ಇಂತಹ…

ಠಾಣೆಯೊಳಗೆ ಇಸ್ಪೀಟ್ ಆಟ; ಅಗತ್ಯ ಕಾನೂನು ಕ್ರಮಕ್ಕೆ ಸಚಿವ ಖರ್ಗೆ ಸೂಚನೆ

ಬೆಂಗಳೂರು: ಪೊಲೀಸ್ ಠಾಣೆಯೊಳಗೆ ಇಸ್ಪೀಟ್ ಆಡಿದ ಆರೋಪದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಠಾಣೆಯ ಐವರು ಪೊಲೀಸರನ್ನು ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ, ವೈರಲ್ ಆಗಿರುವ ವೀಡಿಯೋ ಹಲವು ತಿಂಗಳ ಹಿಂದೆ ನಡೆದ ಘಟನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಡುತ್ತಿರುವ ವಿಡಿಯೋ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಇದು ಹಲವು ತಿಂಗಳ ಹಿಂದೆ ನಡೆದ ಘಟನೆ ಎನ್ನುವುದು ತಿಳಿದು ಬಂದಿರುತ್ತದೆ. ಇಸ್ಪೀಟ್ ಆಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್ ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದವರು ಸಾಮಾಜಿಕ…

ಠಾಣೆಯೊಳಗೆ ಇಸ್ಪೀಟ್ ಆಟ; ಐವರು ಪೊಲೀಸರ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯೊಳಗೆ ಇಸ್ಪೀಟ್ ಆಡಿದ ಆರೋಪದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಠಾಣೆಯ ಐವರು ಪೊಲೀಸರನ್ನು ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಮಿಯಾ, ಹೆಡ್ ಕಾನ್‌ಸ್ಟೆಬಲ್‌ಗಳಾದ ಇಮಾಮ್, ನಾಗರಾಜ್, ಸಾಯಿಬಣ್ಣ, ಕಾನ್‌ಸ್ಟೆಬಲ್ ನಾಗಭೂಷಣ್ ಎಂಬವರು ಅಮಾನತುಗೊಂಡಿರುವ ಪೊಲೀಸರು. ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರು ಈ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಸುನೀತಾ ವಿಲಿಯಮ್ಸ್ ಸ್ಫೂರ್ತಿಯಾಗಿದ್ದಾರೆ; ಸಿದ್ದರಾಮಯ್ಯ

ಬೆಂಗಳೂರು: ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಭೂಮಿಗೆ ಮರಳಿ ಸ್ವಾಗತ ಎಂದಿರುವ ಸಿದ್ದರಾಮಯ್ಯ, ಬಾಹ್ಯಾಕಾಶದಲ್ಲಿ ಅದ್ಭುತ ಪ್ರಯಾಣದ ನಂತರ ನೀವು ಸುರಕ್ಷಿತವಾಗಿ ಹಿಂದಿರುಗಿದ್ದೀರಿ ಎಂದು ಕೇಳಿ ಸಂತೋಷವಾಯಿತು ಎಂದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ನಿಮ್ಮ ಸಾಧನೆಗಳು ಮಾನವ ಪರಿಶ್ರಮ ಮತ್ತು ವೈಜ್ಞಾನಿಕ ಶ್ರೇಷ್ಠತೆಗೆ ಸಾಕ್ಷಿಯಾಗಿದೆ’ ಎಂದು ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಗ್ಗೆ ಬರೆದುಕೊಂಡಿರುವ ಸಿಎಂ, ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ವರ್ಣಿಸಿದ್ದಾರೆ. Welcome back to Earth, Sunita Williams (@Astro_Suni)…

ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 600 ಕೋ.ರೂ. ಹಣವನ್ನು ನಾವು ತೀರಿಸಿದ್ದೇವೆ: ಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 600 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನಮ್ಮ ಸರ್ಕಾರ ತೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಲಿನ ಉತ್ಪಾದನೆ ಜಾಸ್ತಿಯಾಗಿದೆ ನಿಜ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 7 ರೂ. ಕೊಡುವುದಾಗಿ ತಿಳಿಸಿದ್ದೆವು, ಅದರಂತೆ ಮುಂದಿನ ದಿನಗಳಲ್ಲಿ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದರು. ಹಾಲಿನ ಪ್ರೋತ್ಸಾಹ ಧನವನ್ನು 2ರೂ. ನಿಂದ 5 ರೂ. ಗೆ ಹೆಚ್ಚಳ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ಈ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರ ಈ ಪ್ರೋತ್ಸಾಹ ಧನ ಹೆಚ್ಚು ಮಾಡಲಿಲ್ಲ ಎಂದ ಅವರು, ಹಿಂದಿನ ಬಿಜೆಪಿ ಸರ್ಕಾರ 2019-20 ರಲ್ಲಿ ರೂ. 364 ಕೋಟಿ, 2020-21 ರಲ್ಲಿ ರೂ. 106 ಕೋಟಿ, 2021-22 ರಲ್ಲಿ ರೂ. 130 ಕೋಟಿ ಸೇರಿದಂತೆ ಒಟ್ಟು ರೂ. 600 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಬಿಟ್ಟು ಹೋಗಿತ್ತು. ನಮ್ಮ…

ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ ನಡೆಯಲಿದ್ದು, ಸಂಘದ ಮುಂದಿನ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಯಲಿದೆ ಹಾಗೂ ಪ್ರಮುಖ ನಿರ್ಧಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು RSS ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ. ABPS ನಡೆಯುವ ಚನ್ನೇನಹಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯುನ್ನತ ನೀತಿ ನಿರ್ಧಾರಗಳನ್ನು ನಿರೂಪಿಸುವ ಸಭೆ ಇದಾಗಿದೆ. ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆ ನಡೆಯಲಿದ್ದು, ಮುಂದಿನ ಸಂಘಟನಾ ಕಾರ್ಯತಂತ್ರಗಳ‌ ಬಗ್ಗೆ ಚರ್ಚೆಯಾಗಲಿದೆ ಎಂದರು. ಸರಸಂಘಚಾಲಕ್ ಡಾ.ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಿರಿಯ ಪದಾಧಿಕಾರಿಗಳು, ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ…

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಕೇಂದ್ರ ನಕಾರ

ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಕುರಿತು ಪ್ರಸ್ತಾಪ ಮುಂದಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರ ಆಗ್ರಹ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಸ್ಲಿಮರಿಗೆ ಶೇ.4 ಟೆಂಡರ್ ಮೀಸಲಾತಿಗೆ ಬಿಜೆಪಿ ವಿರೋಧ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ಬೆಂಗಳೂರು: ಸರ್ಕಾರಿ ಗುತ್ತಿಗೆ ಕಾಮಗಾರಿ ಟೆಂಡರಿನಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧದ ಕಾನೂನು ಜಾರಿಗೆ ಅವಕಾಶ ನೀಡದಂತೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದರು. ಈ ವಿಧೇಯಕ ಮಂಡನೆಯಾದ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದಾರೆ. ಈ ಪಾತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. I have written to the Hon'ble Governor Shri @TCGEHLOT Ji requesting him not to provide consent to the contentious amendments to…