ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆ ವೈಭವ ಹೆಚ್ಚಿಸಿತು. ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರನ್ನು ರಂಜಿಸಿತು. 750 ಕೆ.ಜಿ ತೂಕದ ಅಂಬಾರಿ ಹೊತ್ತ ಅಭಿಮನ್ಯು ಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮನಮುಟ್ಟಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಸಾಥ್ ನೀಡಿದವು. ಅರಮನೆಯ ಬಲರಾಮ ದ್ವಾರದಿಂದ ಪ್ರಾರಂಭವಾದ ಜಂಬೂ ಸವಾರಿ, ಸುಮಾರು 5 ಕಿ.ಮೀ ಉದ್ದದ ಮಾರ್ಗದಲ್ಲಿ ಸಾಗಿತು. ಮಾರ್ಗಮಧ್ಯೆ ನಡೆದ 58 ಸ್ತಬ್ಧಚಿತ್ರಗಳು ಜನರ ಕುತೂಹಲ ಕೆರಳಿಸಿದವು. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮುಂದಿಡುವ ಉದ್ದೇಶದಿಂದ ಸ್ತಬ್ಧಚಿತ್ರಗಳನ್ನು ರೂಪಿಸಲಾಗಿತ್ತು. ವಿಶೇಷವಾಗಿ ಮಹಿಳೆಯರಿಗೆ ಉಚಿತ ಸಾರಿಗೆ ಒದಗಿಸಿರುವ ‘ಶಕ್ತಿ’ ಗ್ಯಾರೆಂಟಿ ಯೋಜನೆಯ ಸ್ತಬ್ಧಚಿತ್ರ ಜನಮೆಚ್ಚುಗೆಗೆ ಪಾತ್ರವಾಯಿತು. ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಿರುವ ಈ ಯೋಜನೆಯ ಯಶಸ್ಸು ಮೆರವಣಿಗೆಯಲ್ಲಿ…
Category: ಜಿಲ್ಲೆ | ತಾಲೂಕು
ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಉತ್ಸವದ ಪರಮೋತ್ಸವಾದ ಜಂಬೂ ಸವಾರಿ ಮೆರವಣಿಗೆ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಯದುವೀರ್ ಒಡೆಯರ್, ವಿಧಾನದ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ 4.42ರಿಂದ 5.06ರ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಯ ಆರಂಭ ಮಾಡಿದರು. ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರ ಮುಂದೆ ಗಾಂಭೀರ್ಯದ ಹೆಜ್ಜೆ ಹಾಕುತ್ತ ಸಾಗಿದ ದೃಶ್ಯ ಎಲ್ಲರ ಮನ ಸೆಳೆಯಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಕೂಡಾ ಸಾಥ್ ನೀಡಿದವು. ಅಂಬಾರಿಯ ಮೇಲಿದ್ದ ನಾಡದೇವಿಯನ್ನು ಕಂಡು ಭಕ್ತಜನರು ಪುನೀತರಾದರು. ಅರಮಣಕ್ಕಿಯ ಬಲರಾಮ ದ್ವಾರದಿಂದ ಪ್ರಾರಂಭಗೊಂಡ ಜಂಬೂ ಸವಾರಿ, ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ,…
ಗಾಂದೀಜಿ ಹಾದಿಯಲ್ಲಿ ರಾಜ್ಯ ಸರ್ಕಾರ; ಆರ್ಥಿಕ ದುರ್ಬಲರಿಗೆ ಗ್ಯಾರಂಟಿ ಮೂಲಕ ‘ಶಕ್ತಿ’ಯಾಗಿದ್ದೇವೆ ಎಂದ ರಾಮಲಿಂಗಾ ರೆಡ್ಡಿ
ಬೆಂಗಳೂರು: ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ರವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ, ಸರ್ಕಾರದ ಪರವಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಷ್ಟ್ರನಾಯಕರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು ಅಂದರೆ ಅದು ರಾಷ್ಟ್ರಪಿತ ಮಹಾತ್ಮ ಗಾಂಧಿ. ಅಹಿಂಸಾ ಮಾರ್ಗದಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಗಾಂಧಿಜಿ ದೇಶ ಕಂಡ ಮಹಾನ್ ನಾಯಕ ಎಂದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಹನೀಯರು ಮಹತ್ವದ ಪಾತ್ರವಹಿಸಿದ್ದಾರೆ. ಮಹಾರಾಷ್ಟ್ರ ಪ್ರಾಂತ್ಯದಲ್ಲಿ ಗೋಪಾಲಕೃಷ್ಣ ಗೋಖಲೆ (ಗಾಂಧಿಯವರು ಗುರುಗಳು), ಲಾಲಲಜಪತರಾಯ್ ಪಂಜಾಬ್, ಬಿಪಿನ್ ಚಂದ್ರ ಪಾಲ್ ಬಂಗಾಳ, ಬಾಲಗಂಗಾಧರ ನಾಥ್ ತಿಲಕ್ , ಮೋತಿಲಾಲ್ ನೆಹರು, ಇವರೆಲ್ಲರೂ 1930 ರ ಮುಂಚೆಯೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಪಶ್ಚಿಮ ಬಂಗಾಳದಲ್ಲಿ…
ಆರ್‌ಎಸ್‌ಎಸ್ ಶತಮಾನೋತ್ಸವ: ಸಾವಿರಾರು ಸ್ವಯಂಸೇವಕರ ವಿಜಯದಶಮಿಯ ಪಥಸಂಚಲನ
ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು ಡಾ. ಕೇಶವ್ ಬಲಿರಾಮ ಹೆಡ್ಗೆವಾರ್ ಸಂಘವನ್ನು ಸ್ಥಾಪಿಸಿದ್ದರು. ಈ ಸಂಘಟನೆಗೆ ಇದೀಗ ಶತಮಾನೋತ್ಸವ. ಈ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ವಿಜಯದಶಮಿ ಪೂಜೆ ಹಾಗೂ ಪಥಸಂಚಲನಗಳನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಶಾಸ್ತ್ರಪೂಜೆ ಮತ್ತು ಪಥಮೆರವಣಿಗೆಗಳು ಸೇರಿದಂತೆ ದೇಶಾದ್ಯಂತ 346 ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಿದವು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಸ್ವಯಂಸೇವಕರು ಸಂಪೂರ್ಣ ಸಮವಸ್ತ್ರದಲ್ಲಿ ಸಾಂಪ್ರದಾಯಿಕ ಸಂಘ ಘೋಷ್ ಜೊತೆ ಪಥಸಂಚಲನ ನಡೆಸಿದರು. ಅನೇಕರು ವ್ಯವಸ್ಥಾಪನಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಪಥಸಂಚಲನ ಹಾದುಹೋದ ಮಾರ್ಗದಲ್ಲಿ ನಾಗರಿಕರು ಪುಷ್ಪಾರ್ಚನೆ ಮೂಲಕ ಸ್ವಾಗತಿಸಿದರು. ಆರ್‌ಎಸ್‌ಎಸ್ ರಾಷ್ಟ್ರೀಯ ಹಾಗೂ ಪ್ರಾಂತೀಯ ನಾಯಕರು ವಿವಿಧ ಕೇಂದ್ರಗಳಲ್ಲಿ ಭಾಗವಹಿಸಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಪಶ್ಚಿಮ ವಿಹಾರ್‌ನಲ್ಲಿ ಡಾ. ಅನಿಲ್ ಅಗರ್ವಾಲ್ ಮತ್ತು ಇಂದ್ರೇಶ್…
ಸಿಎಂ ಹುದ್ದೆ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ: ಜೋಶಿ ಆರೋಪ
ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಾಯಕರು ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆ ಉಳಿಸಿಕೊಳ್ಳಲು ರಾಜಕೀಯ ಲೆಕ್ಕಾಚಾರವಾಗಿ ಜಾತಿ ಜನಗಣತಿಯನ್ನು ಮುನ್ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಅನಗತ್ಯ ಹಾಗೂ ವೈಯಕ್ತಿಕ ಪ್ರಶ್ನೆಗಳನ್ನು ಒಳಗೊಂಡಿದೆ ಎಂದು ಅವರು ಟೀಕಿಸಿದರು. “ಕ್ರಿಶ್ಚಿಯನ್ ಲಿಂಗಾಯತ ಅಥವಾ ಕ್ರಿಶ್ಚಿಯನ್ ಬ್ರಾಹ್ಮಣ ಎಂದು ವರ್ಗೀಕರಣ ಮಾಡುವುದರ ಅರ್ಥವೇನು? ಇದು ಹಿಂದೂ ಮತಾಂತರಕ್ಕೆ ಉತ್ತೇಜನ ನೀಡುವ ಸಮೀಕ್ಷೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ವೀರಶೈವ-ಲಿಂಗಾಯತ ಮಠಾಧೀಶರೂ ಸಹ ಎಲ್ಲರೂ ಹಿಂದೂಗಳೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ವೈದ್ಯರು ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಿದ್ದರಿಂದ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ವೈದ್ಯರ ಸಲಹೆ-ಸೂಚನೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಎಂದಿನ ದೈನಂದಿನ ಕಾರ್ಯ…
ಜಾತಿ ಸಮೀಕ್ಷೆ ಟೀಕಿಸಿದ ಜೋಶಿ, ಸೂರ್ಯ ವಿರುದ್ಧ ಬಿಜೆಪಿ ಹೈಕಮಾಂಡ್’ಗೆ ‘ಕೈ’ದೂರು
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ ಸಮೀಕ್ಷೆಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಒಬಿಸಿ ಮೀಸಲಾತಿ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಲು ಕೋರಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ನಡೆ ಬಗ್ಗೆ ಈ ಪತ್ರದಲ್ಲಿ ರಮೇಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಅನುಗುಣವಾಗಿ ಕರ್ನಾಟಕದಲ್ಲಿ ಒಬಿಸಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ನೀತಿಗಳನ್ನು ರೂಪಿಸಲು ಮತ್ತು ಮೀಸಲಾತಿ…
60% ಕಮಿಷನ್ ಆರೋಪ; ಸಿದ್ದುಗೆ ಬಿಜೆಪಿ ಗುದ್ದು
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಬಗ್ಗೆ ಅಭಿಯಾನ ನಡೆಸಿ ಗೆದ್ದು ಬಂದ ಸಿದ್ದರಾಮಯ್ಯ ಅವರಿಗೆ ಇದೀಗ ತಾವು ಬಿಟ್ಟ ಬಾಣವೇ ತಿರುಗಿ ಬಂದಂತಾಗಿದೆ. ಗುತ್ತಿಗೆದಾರರು ಬರೆದಿರುವ ಪತ್ರವನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಬಗ್ಗೆ ಅಭಿಯಾನ ಆರಂಭಿಸಿದಂತಿದೆ. ಈ ಕುರಿತಂತೆ ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮುಖ್ಯಮಂತ್ರಿ @siddaramaiah ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಕಳ್ಳಾಟ ಭರ್ಜರಿಯಾಗಿ ನಡೆಯುತ್ತಿದೆ. ಗುತ್ತಿಗೆದಾರರ ಸಂಘವೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು 60% ಕಮಿಷನ್ ಆರೋಪವನ್ನು ಅಧಿಕೃತಗೊಳಿಸಿದೆ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಸುಳ್ಳು ಆರೋಪ ಮಾಡಿ Pay-CM ಅಭಿಯಾನ ನಡೆಸಿದ್ದ @INCKarnataka ನಾಯಕರಿಗೆ ಅದೇ… pic.twitter.com/SI51KVXzKn — BJP Karnataka (@BJP4Karnataka) September 30, 2025 ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್…
ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ
ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ…
ಕುದ್ರೋಳಿಯಲ್ಲಿ ಚಿಣ್ಣರ ಕಲರವ; ಜನರ ಚಿತ್ತ ಸೆಳೆದ ಕಿನ್ನಿಪಿಲಿ ಸ್ಪರ್ಧೆ
ಮಂಗಳೂರು: ಕರಾವಳಿ ದಸರಾದ ಕೇಂದ್ರ ಸ್ಥಾನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಭಾನುವಾರ ಪುಟಾಣಿಗಳ ಜಗತ್ತಾಗಿ ಮಾರ್ಪಟ್ಟಿತ್ತು. ಚಿಣ್ಣರ ಕಲರವ ಮಂಗಳೂರು ದಸರಾದ ಆಕರ್ಷಣೆಯನ್ನು ನೂರ್ಮಡಿಗೊಳಿಸಿತು. ಹೌದು ಪುಟಾಣಿಗಳ ಸಂತೋಷ, ಕ್ರೀಡೆ, ನಗು, ಕಲಾ ಕೌಶಲಗಳಿಗೆ ವೇದಿಕೆ ಸೃಷ್ಟಿಸುವ ಉದ್ದೇಶದಿಂದ ಹಲವು ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಗುಚ್ಛ ಮಕ್ಕಳ ದಸರಾ-2025ರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಸ್ರಾರು ಪುಟಾಣಿಗಳು ಸಾಕ್ಷಿಯಾಗಿದರು. ಕುದ್ರೋಳಿ ಕ್ಷೇತ್ರದ ದ್ವಾರದಿಂದ ವೇದಿಕೆ ತನಕ ಪುಟಾಣಿಗಳ ಮೆರವಣಿಗೆ ಈ ಕಾರ್ಯಕ್ರಮಕ್ಕೆ ಆಕರ್ಷಣೆ ತುಂಬಿತು. ಪುಣಿಗಳಿಗಾಗಿ ಬಿರುವೆರ್ ಕುಡ್ಲ ಪ್ರಾಯೋಜಕತ್ವದಲ್ಲಿ ಕಿನ್ನಿಪಿಲಿ ಸ್ಪರ್ಧೆ, ಭವಾನಿ ಶಿಪ್ಪಿಂಗ್ಸ್ ಪ್ರಾಯೋಜಕತ್ವದಲ್ಲಿ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದ್ದು, ಸಹಸ್ರಾರು ಪುಟಾಣಿಗಳು ಪಾಲ್ಗೊಂಡರು. ಸಾಮಾಜಿಕ ಜಾಲತಾಣ ತಾರೆ, ಸ್ಮಾರ್ಟ್ ಕಿಡ್ ಖ್ಯಾತಿಯ ಅಗ್ನಿವ್ ಮಕ್ಕಳ ದಸರಾ ಉದ್ಘಾಟಿಸಿದರು. ಡಾ.ಸುಶ್ಮಾ ಅಕ್ಕರಾಜು, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.,…
