ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಗುಂಡಿ ಬಿದ್ದ ರಸ್ತೆಗಳು ಮತ್ತು ಕಸ ವಿಲೇವಾರಿಯಾಗದೇ ಇರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಯಿತು. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮುನಿರತ್ನ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್, ಬಿಜೆಪಿ ಉತ್ತರ ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗುಂಡಿ ಬಿದ್ದ ರಸ್ತೆಗಳು ಹಾಗೂ ಕಸ ರಾಶಿಗಳು ಬಿದ್ದಿರುವ ಸ್ಥಳಕ್ಕೆ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಆರ್.ಅಶೋಕ್ ರವರು ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಗುಂಡಿಗಳ ಸರ್ಕಾರ, ಗುಂಡಿಗಳ ಕ್ಯಾಬಿನೇಟ್ ಆಗಿದೆ ಎಂದರು. ಎರಡುವರೆ ವರ್ಷಗಳಿಂದ ಯಾವುದೇ ಅಭವೃದ್ದಿ ಕೆಲಸವಾಗಿಲ್ಲ ಗ್ಯಾರೆಂಟಿ, ಗ್ಯಾರೆಂಟಿ ಎಂದು…
Category: ಜಿಲ್ಲೆ | ತಾಲೂಕು
‘ನಮ್ಮ ಮತ- ನಮ್ಮ ಹಕ್ಕು’: ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ
ಬೆಂಗಳೂರು: ‘ನಮ್ಮ ಮತ- ನಮ್ಮ ಹಕ್ಕು’ ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಯೂ ಆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ ಎಂದರು. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು…
ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ; ಬಿಜೆಪಿ ಸ್ವಾಗತ
ಬೆಂಗಳೂರು: ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದೇಶದ ಬೆನ್ನೆಲುಬು ರೈತ, ‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’ ಎಂಬ ಇತಿಹಾಸ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ ಎಂದು ಅವರು ಹೇಳಿದ್ದಾರೆ. ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಯಡಿಯೂರಪ್ಪ ಅವರ ಪುತ್ರನಾಗಿ…
‘ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು’ ಡಾ.ಮೋಹನ್ ಭಾಗವತ್
ಬೆಂಗಳೂರು: ಸಮಾಜದ ಕುರಿತು ಸೂಕ್ಷ್ಮ ಸಂವೇದನೆಯನ್ನು ಬೆಳೆಸಿಕೊಂಡ ವ್ಯಕ್ತಿಯು ನರನಿಂದ ನಾರಾಯಣನಾಗಬಲ್ಲ. ಅದೇ ರೀತಿ ಸಂಸ್ಕಾರ ರಹಿತ ವ್ಯಕ್ತಿಯು ನರಾಧಮನೂ ಆಗುವ ಅಪಾಯವಿದೆ. ಇಡೀ ಸಮಾಜ ಸಂವೇದನಶೀಲವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಅಭಿಪ್ರಾಯಪಟ್ಟರು. ಅವಕಾಶವಂಚಿತ ಮಕ್ಕಳ ಆಶ್ರಯ ತಾಣವಾದ ‘ನೆಲೆ’ಯ 25 ವರ್ಷದ ಸಮಾರೋಪ ಸಮಾರಂಭದ ಪ್ರಯುಕ್ತ ಜೆ.ಪಿ. ನಗರದ ಆರ್.ವಿ. ದಂತ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ಕೆಲಸವನ್ನು 25 ವರ್ಷ ನಿರಂತರವಾಗಿ ನಡೆಸುವುದು ಕಷ್ಟದ ಕೆಲಸ. ಕೆಲಸ ಒಳ್ಳೆಯದೇ ಆದರೂ ಸಾಗುವ ದಾರಿಯಲ್ಲಿ ಬಳಲಿಕೆ ಆಗುತ್ತದೆ. ಗುಡ್ಡ ಏರಬೇಕಾದರೆ ಶ್ರಮ ವಹಿಸಬೇಕಾಗುತ್ತದೆ, ಇಳಿಯಬೇಕಾದರೂ ಸಮತೋಲನಕ್ಕೆ ಶ್ರಮ ವಹಿಸಬೇಕಾಗುತ್ತದೆ. ಯಾರು ಜೊತೆಗೆ ಬರಲಿ, ಬಿಡಲಿ ಎಂಬ ಚಿಂತೆಯಿಲ್ಲದೆ ಆರಂಭವಾದ ನೆಲೆಯ ಕೆಲಸ 25 ವರ್ಷ ಪೂರೈಸಿ ಮುನ್ನಡೆಯುತ್ತಿದೆ ಎನ್ನುವುದು ನಮ್ಮೆಲ್ಲರಿಗೆ ಸಂತಸದ ವಿಚಾರ ಎಂದು ನುಡಿದರು.…
ಕಬ್ಬು, ಸಕ್ಕರೆ ದರ ನಿಗದಿಯಲ್ಲಿ ರಾಜ್ಯದ್ದು ಸೀಮಿತ ಪಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: “ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ಸೀಮಿತವಾಗಿದೆ. ಈ ಸಂಬಂಧಿತ ದರ ನಿಗದಿ ಹಾಗೂ ನಿಯಂತ್ರಣ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು 2025ರ ಮೇ 6ರಂದು ಎಫ್.ಆರ್.ಪಿ (Fair and Remunerative Price) — ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಪಡಿಸಿರುವುದಾಗಿ ತಿಳಿಸಿದರು. “ಕೇಂದ್ರ ಸರ್ಕಾರವೇ ದರ ನಿಗದಿಪಡಿಸುತ್ತದೆ. ರಾಜ್ಯ ಸರ್ಕಾರದ ಕೆಲಸ ರೈತರಿಗೆ ನಿಗದಿತ ತೂಕ, ಬೆಲೆ ಹಾಗೂ ಸಮಯಕ್ಕೆ ಪಾವತಿ ಖಚಿತಪಡಿಸುವುದಾಗಿದೆ. ಇದು ಕಬ್ಬು ನಿಯಂತ್ರಣ ಕಾಯ್ದೆಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ,” ಎಂದರು. ಮುಖ್ಯಮಂತ್ರಿ ಅವರು ಮುಂದುವರಿದು, ಸಕ್ಕರೆ ಮೇಲಿನ ನಿಯಂತ್ರಣವೂ ‘ಅಗತ್ಯ ವಸ್ತುಗಳ ಕಾಯ್ದೆ’ ಪ್ರಕಾರ ಕೇಂದ್ರ ಸರ್ಕಾರದ ವಶದಲ್ಲಿದೆ ಎಂದು ಹೇಳಿದರು.…
ಮೈಸೂರು ನಗರ ಸಾರಿಗೆಯ ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರೀಯ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ–2025’
ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯಲ್ಲಿ ಜಾರಿಗೆ ತಂದ ‘ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಎಂಬ ನೂತನ ಯೋಜನೆ ದೇಶದ ಮೊದಲ ಮಾದರಿ ಯೋಜನೆಯಾಗಿ ಗುರುತಿಸಿಕೊಂಡಿದ್ದು, ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ–2025’ ಅನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ (NIC) ಉಪ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಮಿತ್ತಲ್ ಹಾಗೂ ಸ್ವಯಂ ಸಂಸ್ಥೆಯ ಸ್ಥಾಪಕ ಸೈಮು ಜಿಂದಾಲ್ ಅವರು ಕೆಎಸ್‌ಆರ್‌ಟಿಸಿಯ ಮಂಡ್ಯ ವಿಭಾಗದ ನಿಯಂತ್ರಣಾಧಿಕಾರಿ ಶರಣ್ ಬಸವರಾಜ ಕೆ.ಎಂ. ಮತ್ತು ಉಪ ಮುಖ್ಯ ಗಣಕ ವ್ಯವಸ್ಥಾಪಕಿ ಸುಧಾರಾಣಿ ಆರ್. ಅವರಿಗೆ ಪ್ರದಾನ ಮಾಡಿದರು. ‘ಸ್ವಯಂ’ ಸಂಸ್ಥೆಯು ಅಂತರರಹಿತ ವಿನ್ಯಾಸ ಹಾಗೂ ಒಳಗೊಳ್ಳುವಿಕೆಯ ಕ್ಷೇತ್ರದಲ್ಲಿ ಮಾದರಿಯಾಗಿರುವ ಸಂಸ್ಥೆಗಳನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡುತ್ತದೆ. 2025ನೇ ವರ್ಷ ಸಂಸ್ಥೆಯ 25ನೇ ವಾರ್ಷಿಕೋತ್ಸವವಾಗಿದ್ದು, ಜಾಗತಿಕ ಮಟ್ಟದಲ್ಲಿ…
“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – HDK ಪ್ರಶ್ನೆ
ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? – ಶ್ರೀ @hd_kumaraswamy , ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv — Janata…
ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು. ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ
ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. 55 ವರ್ಷ ವಯಸ್ಸಿನ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ
ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್ಎಸ್ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಸರ್ಕಾರದ ವಾದ ಬಗ್ಗೆ ತೃಪ್ತವಾಗದ ನ್ಯಾಯಪೀಠ, ಪ್ರಕರಣವನ್ನು ಏಕಸದಸ್ಯ ಪೀಠದಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಎಂದು ವಿಭಾಗೀಯ ಪೀಠ ತಿಳಿಸಿದೆ.
