ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ ಎಂದಿದ್ದಾರೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರೆಯಲು ಹಾದಿ ಸುಲಭವಾದಂತಾಗಿದೆ ಎಂದು ಕೆ ಶಶಿ ಕಿರಣ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.…
Category: ಜಿಲ್ಲೆ | ತಾಲೂಕು
ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಕೃಷಿ ಮೇಳ’; ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿ
ಬೆಂಗಳೂರು: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸಮೃದ್ಧ ಕೃಷಿ -ವಿಕಸಿತ ಭಾರತ ನೆಲ,ಜಲ ಮತ್ತು ಬೆಳೆ ಶೀರ್ಷಿಕೆ ಅಡಿಯಲ್ಲಿ ನಾಲ್ಕು ದಿನಗಳವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮೇಳ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಬೆಂಗಳೂರು ಕೃಷಿ ವಿವಿಯೂ ಪ್ರತಿವರ್ಷ ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿದ್ದು, ಉತ್ತಮ ತಳಿಗಳನ್ನು ಈ ಭಾರಿ ಬಿಡುಗಡೆಗೊಳಿಸಿದೆ. ರೈತರಿಗೆ ಕೃಷಿ ವಿವಿಗಳು ನೀಡಬೇಕಾಗಿರುವುದು ಇದನ್ನೆ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್…
ದೆಹಲಿ ಸ್ಫೋಟದ ತನಿಖೆ ಚುರುಕು; ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ
ಬೆಂಗಳೂರು: ದೆಹಲಿಯಲ್ಲಿ ನವೆಂಬರ್ 10ರಂದು ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಮೃತಪಟ್ಟ ಪ್ರಕರಣದ ತನಿಖೆಯ ಭಾಗವಾಗಿ, ಕರ್ನಾಟಕ ಪೊಲೀಸರು ತುಮಕೂರಿನ ಮಾಜಿ ಭಯೋತ್ಪಾದಕ ಎಂದು ಹೇಳಲಾದ ವ್ಯಕ್ತಿಯನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಮುಜಾಹಿದ್ ಎಂಬಾತನನ್ನು ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಎಸ್‌ಪಿ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಹೊತ್ತು ವಿಚಾರಣೆ ನಡೆಸಲಾಯಿತು. ವಿಚಾರಣೆ ಬಳಿಕ ಯಾವುದೇ ನೇರ ಸಂಪರ್ಕ ಕಂಡುಬರದ ಹಿನ್ನೆಲೆಯಲ್ಲಿ, ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಾಹಿದ್ ಹಿಂದೆ ಭಯೋತ್ಪಾದಕ ಸಂಘಟನೆಗಾಗಿ ಸಭೆ ಆಯೋಜಿಸಿದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿ ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ವರ್ಷಗಳ ಶಿಕ್ಷೆ ಅನುಭವಿಸಿದ ಬಳಿಕ ಆತ ಬಿಡುಗಡೆಗೊಂಡಿದ್ದು, ಈಗ ತುಮಕೂರಿನ ಪಿಎಸ್ ಕಾಲೊನಿಯಲ್ಲಿ ವಾಸಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಸ್ಫೋಟದ ನಂಟು ಕರ್ನಾಟಕದತ್ತ?…
‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ
ಬೆಂಗಳೂರು: ‘ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು. ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ…
ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಆರ್.ಅಶೋಕ ಗೇಲಿ
ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್ ಶಾ ಗೃಹ ಸಚಿವರಾದ ಬಳಿಕ ನಕ್ಸಲ್ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು. ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಐರನ್ ಲೆಗ್ ಎಂದು…
ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ
ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವುದಾಗಿ ಸಾರಿಗೆ ಸಚಿವ ರಾಮಲೀಗಾ ರೆಡ್ಡಿ ನೀಡಿರುವ ಭರವಸೆ ಈಡೇರಿದೆ. ಹೊಸದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭವಾಗಿದ್ದು, ಈ ಬಸ್ಸುಗಳಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಚಾಲನೆ ನೀಡಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದ ಸಚಿವರು,ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆ ಮಾಡಿ ನೂತನ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ…
ದೆಹಲಿ ಸ್ಫೋಟ; ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ಹಿಂಪಡೆಯಬೇಕು
ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ, ಮತ್ತಿತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ, ದೇಶದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ ಎಂದಿದ್ದಾರೆ. 2019ರ ಭೀಕರ ಪುಲ್ವಾಮಾ ದಾಳಿಯ…
ದೆಹಲಿಯ ಸ್ಪೋಟದ ಪ್ರತಿಧ್ವನಿ; ರಾಜ್ಯದಲ್ಲೂ ಕಟ್ಟೆಚ್ಚರ
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.
RSS ಕಾರ್ಯಕ್ರಮಗಳಿಗೆ ಅಂಕುಶ, ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this? Did these individuals obtain prior permission to offer Namaz…
ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ
ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‍ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕ ವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ…
