“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – HDK ಪ್ರಶ್ನೆ

ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? – ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv — Janata…

ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು. ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. 55 ವರ್ಷ ವಯಸ್ಸಿನ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್​​ಎಸ್​ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಸರ್ಕಾರದ ವಾದ ಬಗ್ಗೆ ತೃಪ್ತವಾಗದ ನ್ಯಾಯಪೀಠ, ಪ್ರಕರಣವನ್ನು ಏಕಸದಸ್ಯ ಪೀಠದಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಎಂದು ವಿಭಾಗೀಯ ಪೀಠ ತಿಳಿಸಿದೆ.

ನಂದಿನಿ ತುಪ್ಪ ದುಬಾರಿ; ‘ಹಗಲು ದರೋಡೆ’ ಎಂದ ಜೆಡಿಎಸ್

ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ. "ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ. ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X — Janata Dal Secular (@JanataDal_S) November 5, 2025 ‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ’ ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ…

ದ್ವಿತೀಯ ಪಿಯುಸಿ ಪರೀಕ್ಷೆ–1, 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025–26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಪ್ರೀ-ಯೂನಿವರ್ಸಿಟಿ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ. ಅದರಂತೆ ಪರೀಕ್ಷೆ–1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ, ಹಾಗೂ ಪರೀಕ್ಷೆ–2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ. ಪರೀಕ್ಷೆ–1 ವೇಳಾಪಟ್ಟಿ ಫೆ. 28: ಕನ್ನಡ, ಅರೇಬಿಕ್ ಮಾ. 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ ಮಾ. 3: ಇಂಗ್ಲಿಷ್ ಮಾ. 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾ. 5: ಇತಿಹಾಸ, ಗೃಹ ವಿಜ್ಞಾನ ಮಾ. 6: ಭೌತಶಾಸ್ತ್ರ ಮಾ. 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂವಿಜ್ಞಾನ ಮಾ. 9: ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ ಮಾ.10: ಅರ್ಥಶಾಸ್ತ್ರ ಮಾ.11: ತರ್ಕಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಮಾ.12: ಹಿಂದಿ ಮಾ.13: ರಾಜ್ಯಶಾಸ್ತ್ರ ಮಾ.14: ಲೆಕ್ಕಪತ್ರ ನಿರ್ವಹಣೆ ಮಾ.16: ಸಮಾಜಶಾಸ್ತ್ರ,…

ವಾಲ್‌ಮಾರ್ಟ್‌ ವೃದ್ಧಿ ಒಪ್ಪಂದಕ್ಕೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಹಿ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು. ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು. ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್”…

ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿ, “ಸಂಪುಟ ಪುನಾರಚನೆ ವೇಳೆ ನೋಡೋಣ,” ಎಂದು ಹೇಳಿದರು. ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದು, ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಯತ್ತಿನಹೊಳೆ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಬೀದರ್: ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಮೂವರು ಸಾವು

ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಾಜಪ್ಪ, ನವೀನ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಗರಾಜ್ ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಧನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಧನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ; ಸರಕಾರದ ವಿರುದ್ಧ ಪ್ರತಿಪಕ್ಷ ಅಭಿಯಾನ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು…