ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಾಜಪ್ಪ, ನವೀನ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಗರಾಜ್ ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಧನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಧನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Category: ಜಿಲ್ಲೆ | ತಾಲೂಕು
ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ; ಸರಕಾರದ ವಿರುದ್ಧ ಪ್ರತಿಪಕ್ಷ ಅಭಿಯಾನ
ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು…
ಕಾಯ್ದೆಯನ್ನೇ ತಿಳಿಯದ ಅಧಿಕಾರಿಗಳು?; ಖರ್ಗೆಯ ಇಲಾಖೆಯಲ್ಲಿ ಹೀಗೊಂದು ಅವಾಂತರ
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಹಾಗೂ ಹಿಂದಿನ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆಯವರು ಇದೀಗ ತಮ್ಮ ಇಲಾಖೆಯ ಅಧಿಕಾರಿಯ ಕರ್ತವ್ಯಲೋಪ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದೇ ಕುತೂಹಲದ ವಿಷಯ. ಈ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ದೌಲತ್ತು, ಕರ್ತವ್ಯಲೋಪಗಳು ಸಾರ್ವಜನಿಕರಿಗೆ ಸವಾಲಾಗಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿಯಾಗಿದೆ. ಬೆಂಗಳೂರಿನ ಆಲ್ವಿನ್ ಎಂ ಎಂಬವರು ಸಲ್ಲಿಸಿದ್ದ ಮಾಹಿತಿ ಹಕ್ಕು ಮೇಲ್ಮನವಿಯೊಂದರ ವಿಚಾರಣೆ ವೇಳೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರ…
‘ಸುರಂಗ ಮಾರ್ಗ’ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಎಂದ ಕಾಂಗ್ರೆಸ್
ಬೆಂಗಳೂರು ನಗರದ ಅಭಿವೃದ್ಧಿ ವಿರೋಧಿಗಳು ಹಾಗೂ ಸುರಂಗ ಮಾರ್ಗದ ಬಗ್ಗೆ ಸುಳ್ಳಿನ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ನಾಯಕರ ಆಧಾರ ರಹಿತ ಹೇಳಿಕೆ ವಿರುದ್ಧ ಪತ್ರಿಕಾಗೋಷ್ಠಿಯ ಮೂಲಕ ಬಿಜೆಪಿಯ ಭ್ರಷ್ಟಾಚಾರಿಗಳ ಅವೈಜ್ಞಾನಿಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ಎಂ. ಲಕ್ಷ್ಮಣ್, ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಸುಧಾಕರ್, ಆನಂದ್, ಪುಟ್ಟರಾಜು, ಕುಶಾಲ್ ಹರುವೇಗೌಡ, ನವೀನ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರುನಗರ ಅಭಿವೃದ್ದಿ ಕೆಲಸಗಳಿಗೆ ವಿರೋಧಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ ನಡೆಯನ್ನು ಖಂಡಿಸಿದರು. ಎಂ.ಲಕ್ಷ್ಮಣ್ ರವರು ಮಾತನಾಡಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಟನಲ್ ಮಾಡುವುದಕ್ಕೆ ಖಾಸಗಿ ಸಹಬಾಗಿತ್ವದಲ್ಲಿ ಕಾಮಗಾರಿ ನಡೆಯುತ್ತದೆ ಇದರಲ್ಲಿ ಏನು ಸಿಗುವುದಿಲ್ಲ ಎಂದು ಅಶೋಕ್, ತೇಜಸ್ವಿಸೂರ್ಯ…
ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವೈಭವದ ಕನ್ನಡ ರಾಜ್ಯೋತ್ಸವ ಸಂಭ್ರಮ
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಆನೇಕಲ್ ಬಳಿಯ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷಾ ಕೇಂದ್ರ, ಭಾಷೆ ಮತ್ತು ಸಾಹಿತ್ಯ ವಿಭಾಗ, ಕನ್ನಡ ಸಂಘ ಹಾಗೂ ವಿದ್ಯಾರ್ಥಿ ಬೆಂಬಲ ಸೇವಾ ವಿಭಾಗಗಳ ಸಂಯುಕ್ತಾಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗದವರಿಗಾಗಿ ಸಾಂಸ್ಕೃತಿಕ ವೇಷಭೂಷಣ, ಆಶುಭಾಷಣ, ಭಾಷಣ, ಪ್ರಬಂಧ, ಕವನ ರಚನೆ, ನೃತ್ಯ, ಗಾಯನ, ರಂಗೋಲಿ, ರಸಪ್ರಶ್ನೆ ಹಾಗೂ ಕನ್ನಡೇತರರಿಗಾಗಿ ಕನ್ನಡ ಸಂಭಾಷಣಾ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳು ಹಮ್ಮಿಕೊಳ್ಳಲಾಯಿತು. ನವೆಂಬರ್ 3ರಂದು ಬೆಳಿಗ್ಗೆ 9 ಗಂಟೆಗೆ ವಿಶ್ವವಿದ್ಯಾಲಯದ ಆಲ್ ಫ್ರೆಸ್ಕೋ ಸಭಾಂಗಣದಲ್ಲಿ ವಿಶೇಷ ಸಮಾರಂಭ ಗಮನಸೆಳೆಯಿತು. ವಿಶ್ವವಿದ್ಯಾಲಯದ ಸಂಸ್ಥಾಪಕ ಸದಸ್ಯೆ ಶೈಲಾ ಜಿ. ಚೆಬ್ಬಿ ಅವರು ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡಗೀತೆ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಅಲ್ಲದೇ…
ಕಾರ್ತಿಕ ಸೋಮವಾರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಚಿವೆ ಶೋಭಾ ವಿಶೇಷ ಪೂಜೆ
ದೊಡ್ಡಬಳ್ಳಾಪುರ ಸಮೀಪದ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾರ್ತಿಕ ಸೋಮವಾರದಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶ್ರೀ ಕೃಷ್ಣದೇವರಾಯ ಮಹಾರಾಜರು ಹಂಪೆ ಅವರು ಭೇಟಿ ನೀಡಿ ಆಗಮಿಸಿದ್ದು ವಿಶೇಷ ಪೂಜೆ ಸಲ್ಲಿಸಿದರು. ಕಾರ್ತಿಕ ಸೋಮವಾರದಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ವೇಗುಳಕ್ಕೆ ಭೇಟಿ ನೀಡಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರು ಧೀರಜ್ ಮುನಿರಾಜು ಕೂಡಾ ಉಪಸ್ಥಿತರಿದ್ದರು. ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತರು ಪಿ ದಿನೇಶ್, ಮುಜರಾಯಿ ತಹಶೀಲ್ದಾರ್ ಜಿ.ಜೆ ಹೇಮಾವತಿ , ಪ್ರಧಾನ ಅರ್ಚಕ ಶ್ರೀನಿಧಿ ಶರ್ಮ ಸಹಿತ ದೇವಾಲಯದ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಈ ದೇಶದ ಬಹುಸಂಖ್ಯಾತರು RSS ನ್ನು ಆಪ್ಪಿಕೊಂಡಿಲ್ಲ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo — Priyank Kharge / ಪ್ರಿಯಾಂಕ್…
‘ಗ್ರೇಟರ್ ಮೈಸೂರು’ ಯೋಜನೆ ಪರಿಪೂರ್ಣ ಅನುಷ್ಠಾನಕ್ಕೆ ಸಿಎಂ ಸೂಚನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ ಎಂದ ಸಿಎಂ, ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ…
ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ
ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ…
ತಂತ್ರಜ್ಞಾನ ಮೂಲಕ ಅಕ್ರಮ ತಡೆಯಬೇಕು; ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಅತಾರ್ಕಿಕ, ಅಮಾನವೀಯ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರಿಗಳ ಕ್ರಮವು ಹಿಂದೂ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ. ಮೂಗುತಿ ಹಾಗೂ ಕಿವಿಯೋಲೆ ಬಿಚ್ಚಿಸಿವುದರಿಂದ ನಕಲು ತಡೆಯಬಹುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿದಿದ್ದರೆ, ಅದು ಮೂರ್ಖತನದ ಪರಮಾವಾಧಿಯಷ್ಟೇ ಎಂದವರು ಹೇಳಿದ್ದಾರೆ. ತಂತ್ರಜ್ಞಾನ, ಸಿ.ಸಿ. ಕ್ಯಾಮೆರಾ ಗಳನ್ನೂ ಉಪಯೋಗಿಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ಆಗದಂತೆ ನೋಡಿಕೊಳ್ಳಬೇಕೇ ಹೊರತು ಈ ರೀತಿಯಾದ ಅವೈಜ್ಞಾನಿಕ ಕ್ರಮಗಳಿಂದ ಸಾಧ್ಯವಿಲ್ಲ. ಅಷ್ಟಕ್ಕೂ, ಕಿವಿಯೋಲೆ ಹಾಗೂ ಮೂಗುತಿಯಲ್ಲಿ ಏನನ್ನು ಅಡಗಿಸಿಕೊಳ್ಳಬಹುದು ಎಂಬುದನ್ನು ಪ್ರಾಧಿಕಾರ ಸ್ಪಷ್ಟೀಕರಿಸಬೇಕು ಎಂದಿದ್ದಾರೆ. ಈ ರೀತಿಯಾದ ಅವೈಜ್ಞಾನಿಕ, ಅತಾರ್ಕಿಕ ನಿರ್ಧಾರಗಳನ್ನು ಪರೀಕ್ಷಾ ಪ್ರಾಧಿಕಾರ ಕೈಗೊಂಡರೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಯತ್ನಾಳ್ ನೀಡಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ,…
