ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಭಾಗವಹಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನೂ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೇನೆ. ಬ್ಲಾಕ್ ಸಮಿತಿ ಅಧ್ಯಕ್ಷ ಅಯುಬ್ ಸಹ ಉಪಸ್ಥಿತರಿದ್ದರು”…
Category: ಜಿಲ್ಲೆ | ತಾಲೂಕು
ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ. ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ. ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್’ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ…
ಪ್ರಿಯಾಂಕ್ ಖರ್ಗೆರೀತಿ ನಮ್ಮನ್ನೂ ಮಂತ್ರಿ ಮಾಡಿ ಎಂದ ಡಿಕೆಶಿ ಆಪ್ತ
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದ ಶಾಸಕರಿಗೂ ಈ ಬಾರಿ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿದರು. “ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಚಿವರಾಗಿದ್ದರು. ಹಾಗಾಗಿ ಈಗಲೂ ಹೊಸದಾಗಿ ಆಯ್ಕೆಯಾದವರಿಗೂ ಅವಕಾಶ ಸಿಗಬೇಕು” ಎಂದು ಹೇಳಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಶಾಸಕರು ಸೇರಿ ಈ ವಿಚಾರವನ್ನು ಚರ್ಚಿಸಿದ್ದೇವೆ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿ ಬಳಿ ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಮೂರು-ನಾಲ್ಕು ಬಾರಿ…
ಒಂದು ವಾರ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರೂ, ಇನ್ನೊಂದೆಡೆ ಮಳೆ ಚುರುಕುಗೊಂಡಿದ್ದು ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಧಾರವಾಡ, ಗದಗ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಶನಿವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ, ಮಾರ್ಚ್ 24ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಟ್ಟಾರೆ, ಬಿಸಿಲಿನ ನಡುವೆ ಮಳೆ ಚಟುವಟಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.
ಯುಗಾದಿ 2026: ರಾಶಿಗಳ ಮೇಲೆ ಗ್ರಹಗಳ ಪ್ರಭಾವ – ಯಾರಿಗೆ ಶುಭ, ಯಾರಿಗೆ ಮಿಶ್ರ ಫಲ? ಜ್ಯೋತಿಷಿಗಳ ವಿಶ್ಲೇಷಣೆ ಹೀಗಿದೆ..
ಯುಗಾದಿ ಹೊಸ ವರ್ಷದ ಆರಂಭ ಮಾತ್ರವಲ್ಲ, ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಹೊಸ ನಿರೀಕ್ಷೆಗಳಿಗೂ ದಾರಿಯಾಗುತ್ತದೆ. 2026ರ ಯುಗಾದಿ ‘ಪರಾಭವ’ ನಾಮ ಸಂವತ್ಸರದ ಆರಂಭವಾಗಿದ್ದು, ಈ ವರ್ಷದಲ್ಲಿ ಗ್ರಹಗಳ ಸಂಚಾರವು 12 ರಾಶಿಗಳ ಮೇಲೂ ವಿಭಿನ್ನ ಪರಿಣಾಮ ಬೀರುತ್ತದೆ. ಕೆಲ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದರೆ, ಇನ್ನೂ ಕೆಲವರಿಗೆ ಎಚ್ಚರಿಕೆಯ ಅಗತ್ಯವಿರುವ ವರ್ಷವಾಗಲಿದೆ. ಈ ವರ್ಷ ಮೇಷ, ಸಿಂಹ ಮತ್ತು ಕುಂಭ ರಾಶಿಗಳಿಗೆ ವಿಶೇಷವಾಗಿ ಶುಭ ಫಲಗಳು ಕಾಣಿಸಿಕೊಳ್ಳಲಿವೆ. ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಹೊಸ ಅವಕಾಶಗಳು ಎದುರಾಗುವ ಜೊತೆಗೆ, ಹೂಡಿಕೆಗಳಿಂದಲೂ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಕುಟುಂಬದಲ್ಲಿಯೂ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ವೃಷಭ ಮತ್ತು ಮಿಥುನ ರಾಶಿಯವರಿಗೆ 2026ರಲ್ಲಿ ಧನಲಾಭದ ಯೋಗ ಹೆಚ್ಚು. ವಿಶೇಷವಾಗಿ ಮಿಥುನ ರಾಶಿಯವರಿಗೆ ಮೇ ನಂತರ ಶುಭಫಲಗಳು ಹೆಚ್ಚಾಗಲಿದ್ದು, ವೃತ್ತಿ ಮತ್ತು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧ್ಯತೆ…
‘ಎಚ್ಚರಿಕೆಯು ಎಲ್ಲಾ ಕಾಯಿಲೆಗಳಿಗೂ ಪರಿಹಾರ’; ಡಾ.ಪದ್ಮಿನಿ ಪ್ರಸಾದ್
ಬೆಂಗಳೂರು (Bengaluru): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಸ್ತ್ರೀ ಆರೋಗ್ಯ ಕುರಿತ ಜಾಗೃತಿ ಕಾರ್ಯಕ್ರಮಗಳು ಜೋರಾಗಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಅಭಿಯಾನ ಗಮನ ಸೆಳೆಯುತ್ತಿದೆ. ವರ್ಷಗಳಿಂದ ಮಹಿಳಾ ಆರೋಗ್ಯ ಕುರಿತಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸರಣಿಯನ್ನು ಕೈಗೊಂಡಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಐಐಐಟಿ ಬೆಂಗಳೂರು (IIIT Bangalore) ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳದಿಂದ ರಕ್ಷಣೆ ಕುರಿತಾಗಿ ಅವರು ವಿವರಿಸಿದರು. ಇಂದಿನ ಜೀವನಶೈಲಿಯೇ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತಿದ್ದು, ಯುವಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. ದೀರ್ಘಕಾಲ ನಡೆದ…
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮೈಸೂರು (Mysuru), ಮಂಡ್ಯ (Mandya), ಚಾಮರಾಜನಗರ (Chamarajanagar), ಹಾಸನ (Hassan), ಕೊಡಗು (Kodagu) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಹಾವೇರಿ (Haveri), ಚಿತ್ರದುರ್ಗ (Chitradurga) ಹಾಗೂ ಹುಬ್ಬಳ್ಳಿ-ಧಾರವಾಡ (Hubballi-Dharwad) ಪ್ರದೇಶಗಳಲ್ಲಿಯೂ ಮಳೆಯ ಲಕ್ಷಣಗಳು ಗೋಚರಿಸಬಹುದು. ಉತ್ತರ ಒಳನಾಡಿನ ಬೀದರ್ (Bidar), ಕಲಬುರಗಿ (Kalaburagi), ರಾಯಚೂರು (Raichur) ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.…
‘ಕೆಡಿ ದಿ ಡೆವಿಲ್’ ಹಾಡು ವಿವಾದ: ಮಹಿಳಾ ಆಯೋಗ ಕೆಂಡ
ಬೆಂಗಳೂರು : ‘ಕೆಡಿ ದಿ ಡೆವಿಲ್’ (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ (Dhruva Sarja) ಅಭಿನಯದ ಈ ಚಿತ್ರಕ್ಕೆ ಆರಂಭದಲ್ಲೇ ಅಡೆತಡೆ ಎದುರಾಗಿದ್ದು, ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ (YouTube) ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ. ಹಾಡಿನ ಸಾಹಿತ್ಯ ಮಾತ್ರವಲ್ಲದೆ ನೃತ್ಯ ಸಂಯೋಜನೆಯ ಮೇಲೂ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೃಶ್ಯಗಳು ಅಸಭ್ಯವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ವಿವಾದ ತೀವ್ರಗೊಳ್ಳುತ್ತಿದ್ದಂತೆಯೇ ಕರ್ನಾಟಕ ರಾಜ್ಯ ಮಹಿಳಾ ಆಯೋಗ (Karnataka State Women Commission) ಚಿತ್ರರಂಗದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣಪತ್ರ ಮಂಡಳಿ (Central Board of Film Certification)ಗೆ ಪತ್ರ…
ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು
ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ವ್ಯಾಜ್ಯಗಳು ಅಥವಾ ದೂರುಗಳೊಂದಿಗೆ ಠಾಣೆಗೆ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮೂವರು ಮಹಿಳೆಯರು ಬೆಂಗಳೂರು (Bengaluru)ನಲ್ಲಿ ದೂರು ಸಲ್ಲಿಸಿದ್ದು, ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರ ಕಚೇರಿ (Director General of Police), ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗ (State Women Commission)ಕ್ಕೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ…
