ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ವ್ಯಾಜ್ಯಗಳು ಅಥವಾ ದೂರುಗಳೊಂದಿಗೆ ಠಾಣೆಗೆ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮೂವರು ಮಹಿಳೆಯರು ಬೆಂಗಳೂರು (Bengaluru)ನಲ್ಲಿ ದೂರು ಸಲ್ಲಿಸಿದ್ದು, ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರ ಕಚೇರಿ (Director General of Police), ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗ (State Women Commission)ಕ್ಕೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ…

ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಭವಿಸಿರುವ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿರುವುದರಿಂದ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ (Department of Tourism, Government of Karnataka) ವಿದೇಶಿ ಪ್ರವಾಸಿಗರ ನೆರವಿಗೆ ಮುಂದಾಗಿದೆ. ಪ್ರಸ್ತುತ ಕರ್ನಾಟಕ (Karnataka)ದಲ್ಲಿ ಇರುವ ಹಾಗೂ ಪ್ರಯಾಣದ ಅಡಚಣೆಗಳನ್ನು ಎದುರಿಸುತ್ತಿರುವ ವಿದೇಶಿ ಪ್ರವಾಸಿಗರು ಯಾವುದೇ ಸಹಾಯಕ್ಕಾಗಿ ಅಥವಾ ವೀಸಾ ಸಂಬಂಧಿತ ಸಮಸ್ಯೆಗಳಿಗಾಗಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (H. K. Patil) ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ವಿದೇಶಿ ಅತಿಥಿಗಳಿಗೆ ವೀಸಾ ನಿರ್ವಹಣೆ ಸೇರಿದಂತೆ ಅಗತ್ಯ ನೆರವು ಒದಗಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಿಸಲು ಮಾಹಿತಿ: ಕಾರ್ಯನಿರ್ವಹಿಸುವ ಸಮಯ: ಬೆಳಿಗ್ಗೆ 5.30 ರಿಂದ ರಾತ್ರಿ 10.00 ಗಂಟೆಯವರೆಗೆದೂರವಾಣಿ ಸಂಖ್ಯೆ: 89706 50021 ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಚ್.ಪಿ. ಜನಾರ್ಧನ (H.…

ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ಕಿರುಕುಳ ನಿಲ್ಲಬೇಕು’; ರಮ್ಯಾ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ನಟಿ ರಮ್ಯಾ (Ramya Divya Spandana) ಅವರು, ಆರೋಪಿಗಳನ್ನು ನೋಡಿದಾಗ ಕೆಲವೊಮ್ಮೆ ಬೇಸರವಾಗುತ್ತದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಹೆಚ್ಚುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದಲೇ ಈ ಪ್ರಕರಣವನ್ನು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ತಮ್ಮ ದೂರಿನ ಸಂಬಂಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಸಾಕ್ಷಿ ಹೇಳಿಕೆಗಾಗಿ ಮಂಗಳವಾರ ರಮ್ಯಾ ನ್ಯಾಯಾಲಯಕ್ಕೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳನ್ನು ನೋಡಿದರೆ ಪಾಪ ಅನ್ಸುತ್ತೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಅದಕ್ಕಾಗಿ ಈ ಕೇಸ್ ಹಾಕಿದ್ದೇನೆ,” ಎಂದು ಹೇಳಿದರು. ಈ ಪ್ರಕರಣದಲ್ಲಿ ಮಂಗಳವಾರ ಅವರು ಸಾಕ್ಷಿ ನೀಡಿದ್ದಾರೆ. ಮುಂದಿನ ದಿನಾಂಕದಲ್ಲಿ…

‘ಗರ್ಭಕಂಠ ಕ್ಯಾನ್ಸರ್’ಗೆ ರಾಮಬಾಣ: ಡಾ.ಪದ್ಮಿನಿ ಪ್ರಸಾದ್ ಸಾರಥ್ಯದಲ್ಲಿ ಉಚಿತ HPV ಲಸಿಕೆ ಶಿಬಿರ

ಬೆಂಗಳೂರು: ಜಗತ್ತಿನಾದ್ಯಂತ ಈಗ ‘ಗರ್ಭಕಂಠ ಕ್ಯಾನ್ಸರ್’ ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ ‘ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ’ ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞರೂ ಆಗಿರುವ ಡಾ.ಪದ್ಮಿನಿ ಪ್ರಸಾದ್, ಕಳೆದ ಹಲವು ದಶಕಗಳಿಂದ ಮಹಿಳೆಯರ ಅರೋಗ್ಯ ಕುರಿತಂತೆ ಜನಪ್ರಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಅದರ ಜೊತೆಯಲ್ಲೇ ಇದೀಗ ‘ಗರ್ಭಕಂಠ ಕ್ಯಾನ್ಸರ್’ ವಿಚಾರದಲ್ಲಿ ಕೈಗೊಂಡಿರುವ ಅಭಿಯಾನ ಗಮನಸೆಳೆದಿದೆ. ತಮ್ಮ ನೇತೃತ್ವದ ‘ಭರವಾಸೆ ಚಾರಿಟೇಬಲ್ ಫೌಂಡೇಶನ್’ ವತಿಯಿಂದ ಈ ಅಭಿಯಾನವನ್ನು ಡಾ.ಪದ್ಮಿನಿ ಪ್ರಸಾದ್ ನಡೆಸುತ್ತಿದ್ದಾರೆ. ಪ್ರತಿಷ್ಠಿತ ಜೀವಿಕಾ ಹೆಲ್ತ್‌ಕೇರ್ ಸಹಯೋಗದೊಂದಿಗೆ ಈ ಅಭಿಯಾನ ನಡೆಸಲಾಗುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಮಹಿಳೆಯರ ಪಾಲಿಗೆ ಈ ಕಾರ್ಯಕ್ರಮವು ಸಂಜೀವಿನಿಯಂತಾಗಿದೆ. 12 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಮಹಿಳೆಯರ ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಕ್ಯಾನ್ಸರ್ ಶೋಧ ಸಂಬಂಧಿಸಿದಂತೆ…

ಸರ್ಕಾರಿ ವೈದ್ಯರ ಮುಷ್ಕರ; ಮಾ.11ರಿಂದ ಓಪಿಡಿ ಸೇವೆ ಸ್ಥಗಿತ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (Government Medical Officers Association) ಹಲವು ವರ್ಷಗಳಿಂದ ಬಾಕಿಯಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠಾತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಹೋರಾಟಕ್ಕೆ ಮುಂದಾಗಿದ್ದು, ಮುಷ್ಕರದಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ದೊಡ್ಡ ತೊಂದರೆ ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು…

‘ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮ’: ಖರ್ಗೆ ಲೇವಡಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮೂಲಕ ಆರ್ಟಿಕಲ್ 371 (ಜೆ) ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಹಿಂದಿನ ಎನ್ ಡಿಎ ಸರ್ಕಾರದಲ್ಲಿ, ಅಂದಿನ ಗೃಹ ಸಚಿವ ಅಡ್ವಾಣಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಯುಪಿಎ-2 ಸರ್ಕಾರದಲ್ಲಿ ನಮ್ಮ ಪರವಾಗಿರಲು ಬೇರೆ ಬೇರೆ ಪಕ್ಷಗಳ 130 ಜನ ಎಂ.ಪಿಗಳಿಗೆ ಹೇಗೆ ಮನವೊಲಿಸಿದ್ದೇನೆ ಅನ್ನುವ ವಿಚಾರ ನನಗೆ ಮಾತ್ರ ತಿಳಿದಿದೆ ಎಂದವರು ಹೇಳಿದ್ದಾರೆ. ಆರ್ಟಿಕಲ್ 371 (ಜೆ) ಮೂಲಕ ನನಗೆ,‌ ನನ್ನ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಅನುಕೂಲವಾಗಲ್ಲ. ಅದು ಅನುಕೂಲವಾಗುವುದು ನಮ್ಮ ಕಲ್ಯಣ ಕರ್ನಾಟಕ ಭಾಗದ ಜನಸಾಮಾನ್ಯರಿಗೆ. ಇಂದು ನಮ್ಮ ಭಾಗದ ಯುವಜನರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆದುಕೊಳ್ಳಲು ಅನುಕೂಲವಾಗಿದೆ ಎಂದಿದ್ದಾರೆ. ನಮ್ಮ ದೇಶದ ಯುವಕರ ಭವಿಷ್ಯ ಉಜ್ವಲವಾಗಬೇಕಾದರೆ ಜನಪರ ಯೋಜನೆಗಳು ಜಾರಿಯಾಗಬೇಕು. ಆದರೆ…

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಬಿದ್ದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ, ನಂತರ ಮತ್ತೆ ಬೆಲೆ ಏರಿಕೆ ಮಾಡುವುದು ಪ್ರಧಾನಿ ನರೇಂದ್ರ…

‘ಮಧ್ಯಪ್ರಾಚ್ಯ ಸಂಘರ್ಷ’; ಅನಿವಾಸಿ ಭಾರತೀಯರ ರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ಪದ್ಮರಾಜ್ ಆಗ್ರಹ

ಮಂಗಳೂರು: ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಆಗ್ರಹಿಸಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪದ್ಮರಾಜ್ ಪೂಜಾರಿ ಪ್ರತಿಪಾದಿಸಿದ್ದಾರೆ. ಪ್ರತಿದಿನದ ಸ್ಫೋಟದ ಸದ್ದುಗಳು ಮತ್ತು ಅಸುರಕ್ಷಿತ ಭಾವನೆ ಅಲ್ಲಿನ ಕುಟುಂಬಗಳು, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಕೆಟ್ಟ ಪರಿಣಾಮ ಬೀರುತ್ತಿದೆ. ಯುದ್ಧದ ಸನ್ನಿವೇಶ ಮಕ್ಕಳ ಸಹಜ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದ್ದು, ಅಲ್ಲಿನ ಭಾರತೀಯರು ಪ್ರತಿಕ್ಷಣವನ್ನೂ ಆತಂಕದಲ್ಲೇ ಕಳೆಯುವಂತಾಗಿದೆ ಎಂದವರು ಗಮನಸೆಳೆದಿದ್ದಾರೆ. ವಿಮಾನ ಸಂಚಾರಗಳು ಸ್ಥಗಿತಗೊಂಡಿರುವುದು…

ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾ ಬಂದಿರುವುದನ್ನೇ ಉಲ್ಲೇಖಿಸಿ, ಈ ಬಾರಿ ಮಂಡಿಸಲಾದ ಬಜೆಟ್ ಅನ್ನು ‘ಬ್ರದರ್ಸ್ ಬಜೆಟ್’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಅನೇಕ ಯೋಜನೆಗಳನ್ನು ಘೋಷಿಸಿರುವುದನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ಮಾಡಿ, ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್ (KPS) ಮಾದರಿಯಲ್ಲಿ ಉನ್ನತೀಕರಣಗೊಳಿಸಲು ₹1000 ಕೋಟಿ ಮೀಸಲು, ಅಲ್ಪಸಂಖ್ಯಾತ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಮೀಸಲು, ನಿರ್ಗತಿಕರಿಗೆ ಎರಡು ವೃದ್ಧಾಶ್ರಮಗಳ ಆರಂಭ, ನಿರುದ್ಯೋಗಿಗಳಿಗೆ…

‘ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯತೆ, ಉದ್ಯೋಗ ಅವಕಾಶ ಹೆಚ್ಚಿಸಲು ಸರ್ಕಾರ ಬದ್ಧ’: ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್‌ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿದ ನಂತರ ಪ್ರತಿಕ್ರಿಯೆ ನೀಡಿರುವ ಡಾ. ಪಾಟೀಲ್‌, ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ “K-QUEST” (KARNATAKA – Quality Upgradation for Employment and Skills Transformation) ಯೋಜನೆಯನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ…