ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು. ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ…
Category: ಜಿಲ್ಲೆ | ತಾಲೂಕು
ಪೊಳಲಿ ಘಟನೆ ಬೆನ್ನಲ್ಲೇ ಇದೀಗ ಅರಕಲಗೂಡು ಸರದಿ, ವೃದ್ಧ ದಂಪತಿ ಮೇಲೆ ಫೈನಾನ್ಸ್ ಕಂಪನಿಯ ಕ್ರೌರ್ಯ
ಹಾಸನ: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆ ಪೊಳಲಿಯ ಸಹಕಾರ ಸಂಘದ ಅಧಿಕಾರಿಗಳು ಬಲವಂತದ ಸಾಲ ವಸೂಲಾತಿಗೆ ಯತ್ನಿಸಿ ವೃದ್ದೆಗೆ ಕಿರುಕುಳ ನೀಡಿದ್ದ ಬಗ್ಗೆ FIR ದಾಖಲಾಗಿತ್ತು. ಆ ಘಟನೆ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲೂ ಖಾಸಗಿ ಫೈನಾನ್ಸ್ಗಳ ಹಾವಳಿ ಬಗ್ಗೆ ವರದಿಯಾಗಿದೆ. ಖಾಸಗಿ ಫೈನಾನ್ಸ್ ಕಡೆಯವರು ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ ಎಂಬ ವರದಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲ ತೀರಿಸಿಲ್ಲ ಎಂಬಕರಣ ನೀಡಿ ಖಾಸಗಿ ಫೈನಾನ್ಸ್ ಕಡೆಯವರೆನ್ನಲಾದ ಗುಂಪು ಅರಕಲಗೂಡು ತಾಲೂಕಿನ ಕೊರಟಕೆರೆಯ ವೃದ್ಧ ದಂಪತಿಗಳಾದ ಸಣ್ಣಯ್ಯ (80) ಮತ್ತು ಜಯಮ್ಮ (75) ಎಂಬವರನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಖಾಸಗಿ ಫೈನಾನ್ಸ್’ನಿಂದ 2 ಲಕ್ಷ ರೂಪಾಯಿ ಸಾಲವನ್ನು ಪಡೆಯಲಾಗಿತ್ತು ಎನ್ನಲಾಗಿದೆ. ಸಲ ಮರುಪಾವತಿಸದ ಹಿನ್ನೆಲೆ ಕಾನೂನು ಕ್ರಮ…
SNA–SPARSH ಪಾವತಿ ವಿಳಂಬಕ್ಕೆ ತಾಂತ್ರಿಕ ಕಾರಣ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರ 2025–26ರ ಹಣಕಾಸು ವರ್ಷದ ಮಧ್ಯದಲ್ಲಿ ಜಾರಿಗೆ ತಂದ SNA–SPARSH ಪಾವತಿ ವ್ಯವಸ್ಥೆ ನವೀಕರಣದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಸಿಬ್ಬಂದಿಗೆ ಎರಡು ತಿಂಗಳ ಕಾಲ ವೇತನ ಪಾವತಿ ವಿಳಂಬವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಹೊಸ ವ್ಯವಸ್ಥೆ ಜಾರಿಗೆ ಬಂದ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾವತಿ ಪ್ರಕ್ರಿಯೆ ಮತ್ತು ತಾಂತ್ರಿಕ ವ್ಯವಸ್ಥೆಗಳಲ್ಲಿ ಬದಲಾವಣೆ ಹಾಗೂ ಮರುಹೊಂದಾಣಿಕೆ ಅಗತ್ಯವಾಯಿತು. ಈ ವ್ಯವಸ್ಥೆಯಡಿಯಲ್ಲಿ ಕೇಂದ್ರ ಸರ್ಕಾರದ ಅನುದಾನ ಬಂದ ನಂತರವೇ ರಾಜ್ಯ ಸರ್ಕಾರದಿಂದ ವೇತನ ಪಾವತಿ ಪ್ರಕ್ರಿಯೆ ನಡೆಸಲು ಸಾಧ್ಯವಾಗುತ್ತಿತ್ತು. ಇದರಿಂದ ಪಾವತಿಯಲ್ಲಿ ಅಡಚಣೆ ಉಂಟಾಯಿತು ಎಂದು ಅವರು ತಿಳಿಸಿದ್ದಾರೆ. ವೇತನ ಪಾವತಿಗಾಗಿ ಕೇಂದ್ರ ಸರ್ಕಾರವು ಜನವರಿ 8, 2026ರಂದು ₹175.75 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಮೊತ್ತವನ್ನು ಇದೀಗ ಹಂತ ಹಂತವಾಗಿ ಜಿಲ್ಲೆಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು…
ಸಿಎಂ ತವರಲ್ಲೇ ಸರ್ಕಾರಿ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ..
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಬೆದರಿಕೆ ಸಾಮಾನ್ಯ ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಯ ಮೇಲೆ ಕಾಂಗ್ರೆಸ್ ನಾಯಕನ ದಬ್ಬಾಳಿಕೆ ನಡೆದ ಎರಡೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ನಡೆದಿದೆ ಎಂದು ಬಿಜೆಪಿ ದೂರಿದೆ. ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಮಹಿಳಾ ಅಧಿಕಾರಿಗೆ ರಕ್ಷಣೆ ಇಲ್ಲವೆಂದರೆ, ರಾಜ್ಯದ ಉಳಿದೆಡೆ ಸಾಮಾನ್ಯ ಮಹಿಳೆಯರ ಗತಿಯೇನು? ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಎಂದು ಸಿದ್ದರಾಮಯ್ಯ ಸರ್ಕಾರವನ್ನು…
ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ
ಬೆಂಗಳೂರು: ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದವರು ಸಂತಾಪ ಸೂಚಿಸಿದ್ದಾರೆ. ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ…
ಲಕ್ಕುಂಡಿಯಲ್ಲಿ ಉತ್ಖನನ; ಸಾರ್ವಜನಿಕ ಪ್ರವೇಶ, ಫೋಟೋ–ವೀಡಿಯೋಗ್ರಫಿಗೆ ಸಂಪೂರ್ಣ ನಿಷೇಧ
ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಭಾರೀ ಮೌಲ್ಯದ ಚಿನ್ನಾಭರಣ ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿನ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ಕಾರ್ಯ ಆರಂಭಿಸಲಾಗಿದ್ದು, ಉತ್ಖನನ ನಡೆಯುತ್ತಿರುವ ಸ್ಥಳವನ್ನು ನಿರ್ಬಂಧಿತ ಪ್ರದೇಶವಾಗಿ ಘೋಷಿಸಲಾಗಿದೆ. ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಪ್ರದೇಶ ಅತ್ಯಂತ ಸೂಕ್ಷ್ಮವಾಗಿರುವ ಕಾರಣ ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರು ಜನವರಿ 16ರಂದು ನೀಡಿದ ಪತ್ರದ ಆಧಾರದಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಅಧಿಕೃತವಾಗಿ ನೇಮಕಗೊಂಡ ಸಿಬ್ಬಂದಿಯನ್ನು ಹೊರತುಪಡಿಸಿ, ಯಾವುದೇ ಸಾರ್ವಜನಿಕರು, ಪ್ರವಾಸಿಗರು ಅಥವಾ ಇತರ ವ್ಯಕ್ತಿಗಳು ಉತ್ಖನನ ಸ್ಥಳಕ್ಕೆ ಪ್ರವೇಶಿಸುವುದು, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ನಡೆಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ…
ಹಿರಿಯ ಕಾಂಗ್ರೆಸ್ ನಾಯಕ ಭೀಮಣ್ಣ ಖಂಡ್ರೆ ವಿಧಿವಶ
ಬೀದರ್: ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಬೀದರ್‌ನ ತಮ್ಮ ಸ್ವಗೃಹದಲ್ಲಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಲ್ಸಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಸೋಮವಾರ ಮನೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿ ಕೊನೆಯುಸಿರೆಳೆದಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಸ್ವಗೃಹದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 1949–50ರಲ್ಲಿ ಪ್ರಜಾ ಸಮಾಜವಾದಿ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಭೀಮಣ್ಣ ಖಂಡ್ರೆ, 1953ರಲ್ಲಿ ಭಾಲ್ಕಿ ಪುರಸಭೆಯ ಮೊದಲ ಚುನಾಯಿತ ಅಧ್ಯಕ್ಷರಾಗಿ ಜನಸೇವೆಗೆ ಪ್ರವೇಶಿಸಿದರು. ಅವರು 1962, 1967, 1978 ಮತ್ತು 1983ರಲ್ಲಿ ಭಾಲ್ಕಿ ಕ್ಷೇತ್ರದಿಂದ…
ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಚರ್ಚೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆ ಜೆಡಿಎಸ್ ಪಕ್ಷ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಶಕ್ಕೆ ಸವಾಲೊಡ್ಡಲು ಮೈತ್ರಪಕ್ಷಗಳು ಕಾರ್ಯತಂತ್ರದಲ್ಲಿ ತೊಡಗಿವೆ. ಈ ನಡುವೆ, ಜಾತ್ಯತೀತ ದಳ ನಾಯಕರೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವುದು ಸೂಕ್ತ ಎಂದು ಹೇಳಿದ್ದಾರೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ…
ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಾಂಗ್ಲಾದೇಶಿಗಳಿಗೆ 1,500 ರೂ.ಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಗ್ಗೆ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, “ಅಕ್ರಮ ವಲಸಿಗರು ರಾಜ್ಯಕ್ಕೆ ಮಾರಕವಾಗಬಹುದು ಎಂಬುದನ್ನು ಕಾಂಗ್ರೆಸ್ ಅರಿಯದಿರುವುದು ದುರಾದೃಷ್ಟಕರ. ನಿಮ್ಮ ಓಟಿನ ಆಸೆಗಾಗಿ ದೇಶದ ಆಂತರಿಕ ಸುರಕ್ಷತೆಯೊಂದಿಗೆ ಆಟವಾಡಬೇಡಿ” ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ಮೊದಲು, ಬಾಂಗ್ಲಾದೇಶಿಗಳು ದೇಶವನ್ನು ಹೇಗೆ ಪ್ರವೇಶಿಸುತ್ತಿದ್ದಾರೆಂದು ಹೇಳಿ ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ. ಗಡಿ ಕಾಯುವುದು ಜಿ ಪರಮೇಶ್ವರ ಅವರ ಕೆಲಸವೇ? ಅಮಿತ್ ಶಾ ಕಡಲೆಕಾಯಿ ತಿನ್ನುತ್ತಾರೋ ಅಥವಾ ಏನು? ಅವರು ಬಿಜೆಪಿ ಆಡಳಿತದ ರಾಜ್ಯಗಳನ್ನು ದಾಟಿ ಕರ್ನಾಟಕವನ್ನು ಹೇಗೆ ತಲುಪುತ್ತಿದ್ದಾರೆ? ಎಂದು ಪ್ರಿಯಾಂಕ್ ಖರ್ಗೆಪ್ರಶ್ನಿಸಿದ್ದಾರೆ. “ಮಹದೇವಪುರದಲ್ಲಿ, ಬಿಜೆಪಿಯ ಮಾಜಿ ಶಾಸಕರೊಬ್ಬರು ಸಾರ್ವಜನಿಕ…
ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ
ಬೆಂಗಳೂರು: ಬಾಂಗ್ಲಾದೇಶಿಗಳಿಗೆ 1,500 ರೂ.ಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಗ್ಗೆ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, “ಅಕ್ರಮ ವಲಸಿಗರು ರಾಜ್ಯಕ್ಕೆ ಮಾರಕವಾಗಬಹುದು ಎಂಬುದನ್ನು ಕಾಂಗ್ರೆಸ್ ಅರಿಯದಿರುವುದು ದುರಾದೃಷ್ಟಕರ. ನಿಮ್ಮ ಓಟಿನ ಆಸೆಗಾಗಿ ದೇಶದ ಆಂತರಿಕ ಸುರಕ್ಷತೆಯೊಂದಿಗೆ ಆಟವಾಡಬೇಡಿ” ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ಅಕ್ರಮ ವಲಸಿಗರು ರಾಜ್ಯಕ್ಕೆ ಮಾರಕವಾಗಬಹುದು ಎಂಬುದನ್ನು ಕಾಂಗ್ರೆಸ್ ಅರಿಯದಿರುವುದು ದುರಾದೃಷ್ಟಕರ. ನಿಮ್ಮ ಓಟಿನ ಆಸೆಗಾಗಿ ದೇಶದ ಆಂತರಿಕ ಸುರಕ್ಷತೆಯೊಂದಿಗೆ ಆಟವಾಡಬೇಡಿ.." pic.twitter.com/SETnPHg3oo — Ravi C T 🇮🇳 ರವಿ ಸಿ ಟಿ (@CTRavi_BJP) January 15, 2026
